ವಿಜಯಪುರ | ರಾಜ್ಯದಲ್ಲಿ ಬರವಿದ್ದರೂ, ಕೇಂದ್ರ ಸರ್ಕಾರ ಬಿಡಿಗಾಸೂ ನೀಡದೇ ಸತಾಯಿಸುತ್ತಿದೆ: ಸಿಪಿಐ(ಎಂ)

Date:

Advertisements

ಕರ್ನಾಟಕವು ಈ ಬಾರಿ ಮಳೆ ಬಾರದೆ ಭೀಕರ ಬರಗಾಲಕ್ಕೆ ತುತ್ತಾಗಿದ್ದರೂ ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ಬಿಡಿಗಾಸು ನೀಡದೆ ಸತಾಯಿಸುತ್ತಿದೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ನಾಗರಾಜ್ ಪಾಲಾಕ್ಷಯ್ಯ ಹೇಳಿದರು.

ವಿಜಯಪುರ ನಗರದ ಎಪಿಎಂಸಿಯ ಆವರಣದಲ್ಲಿರುವ ಪ್ರಾಂತ ರೈತ ಸಂಘದ ಕಾರ್ಯಾಲಯದಲ್ಲಿ ನಡೆದ ಸಿಪಿಐ (ಎಂ) ಜಿಲ್ಲಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯದಿಂದ 25 ಜನ ಬಿಜೆಪಿ ಸಂಸದರು ಆರಿಸಿ ಹೋಗಿದ್ದರೂ ಬರಗಾಲ ಪರಿಹಾರ ನಿಧಿಗಾಗಿ ದ್ವನಿ ಎತ್ತದಿರುವದು ವಿಷಾದನೀಯ ಎಂದ ಅವರು, ಕಾರ್ಪೊರೇಟ್ ಕಂಪನಿಗಳ ಲಕ್ಷಾಂತರ ಕೋಟಿ ರೂಪಾಯಿಗಳ ಸಾಲ ಮನ್ನಾ ಮಾಡಲು ಇವರಲ್ಲಿ ಹಣವಿದೆ. ಆದರೆ, ಬರಗಾಲಕ್ಕೆ ಸಿಕ್ಕು ಒದ್ದಾಡುತ್ತಿರುವ ರೈತರ ಗೋಳು ಇವರ ಕಣ್ಣಿಗೆ ಕಾಣುತ್ತಿಲ್ಲ ಎಂದು ಅವರು ಟೀಕಿಸಿದರು.

Advertisements

ಪ್ರಾಸ್ತಾವಿಕವಾಗಿ ಮಾತನಾಡಿದ ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿಅಣ್ಣಾರಾಯ ಈಳಗೇರ ಅವರು, ಕೇಂದ್ರದಲ್ಲಿ ಕೋಮುವಾದಿಗಳು ಮತ್ತು ಕಾರ್ಪೊರೇಟ್ ಕಂಪನಿಗಳು ಒಂದಾಗಿ ದೇಶದ ಅಮೂಲ್ಯ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ. ಚುನಾವಣಾ ಬಾಂಡ್‌ಗಳ ಮುಖಾಂತರ ಭ್ರಷ್ಟಾಚಾರವನ್ನು ಕಾನೂನುಬದ್ದಗೊಳಿಸಿ ವ್ಯಾಪಕ ಭ್ರಷ್ಟಾಚಾರ ನಡೆಸಲಾಗುತ್ತಿದೆ. ಇದನ್ನು ಮರೆಮಾಚಲು ದೇಶದಾದ್ಯಂತ ಕೋಮು ವಿಭಜಕ ನೀತಿಗಳನ್ನ ಹರಿಬಿಡಲಾಗುತ್ತಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಭ್ರಷ್ಟ ಬಿಜೆಪಿಯನ್ನು ಸೊಲಿಸುವದು ಅವಶ್ಯವಿದೆ ಎಂದುರು.

ನಂತರ ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದು ಮತ್ತು ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಪ್ರಚಂಡ ಬಹುಮತದಿದ ಗೆಲ್ಲಿಸಬೇಕು ಎಂದು ಸಭೆಯಲ್ಲಿ ಸಿಪಿಐ (ಎಂ) ಮುಖಂಡರು ಚರ್ಚಿಸಿ ತೀರ್ಮಾನಿಸಿದರು.

ಸುರೇಖಾ ರಜಪೂತ ಅವರು ಸಭೆಯ ಅದ್ಯಕ್ಷತೆ ವಹಿಸಿದ್ದರು. ಹಿರಿಯ ಮುಖಂಡ ಭೀಮಶಿ ಕಲಾದಗಿ, ನಿಂಗಪ್ಪ ಪೂಜಾರ, ಪಿಂಟು, ಸುನಂದಾ , ಅನಸುಯಾ ಹಜೆರಿ, ಪುಂಡಲಿಕ ಹಂದಿಗನೂರ, ಕಾಜೆಸಾಬ ಕೊಲಾರ, ರಮೇಶ್ ಟಿ.ಎಸ್. ಸಭೆಯಲ್ಲಿ  ಮುಂತಾದವರು ಪಾಲಗೊಂಡಿದ್ದರು.

ಲಕ್ಷ್ಮಣ ಹಂದ್ರಾಳ ವಂದನಾರ್ಪಣೆ ಮಾಡಿದರು. ಇದಕ್ಕೂ ಮುನ್ನ ಸಭೆ ಸೇರಿದ್ದವರು, ಇತ್ತೀಚೆಗೆ ನಿಧನರಾದ ಪಕ್ಷದ ಸದಸ್ಯ ಸಿಂದಗಿಯ ಇಬ್ರಾಹಿಮಸಾಬ ನಾಗಠಾಣ, ತಳೆವಾಡದ ದ್ಯಾಮಣ್ಣಾ ಕೋಲಕಾರ ಅವರ ನೆನಪಿನಲ್ಲಿ ಎರಡು ನಿಮಿಷ ಮೌನ ಆಚರಿಸಿ ಶ್ರದ್ದಾಂಜಲಿ ಅರ್ಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X