ವಿಜಯಪುರ | ಏ.11ರಂದು ʼಅಂಬೇಡ್ಕರ್ ಹಬ್ಬʼದ ಉದ್ಘಾಟನೆ

Date:

ಏಪ್ರಿಲ್ 11ರಂದು ʼಅಂಬೇಡ್ಕರ್ ಹಬ್ಬʼದ ಉದ್ಘಾಟನೆ ನಡೆಯಲಿದೆ. ಅಂದು ಫುಲೆ ದಂಪತಿಗಳು ಮತ್ತು ಫಾತಿಮಾ ಶೇಖ್ ಅವರ ಕುರಿತು ವಿಚಾರ ಸಂಕಿರಣ ಚರ್ಚೆ ನಡೆಯಲಿದೆ. ಸಂಜೆ ಹೋರಾಟದ ಹಾಡುಗಳು, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರಿ ಹೇಳಿದರು.

- Advertisement -

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ʼಅಂಬೇಡ್ಕರ್‌ ಹಬ್ಬʼದಂದು ಬಸವಣ್ಣ, ಜ್ಯೋತಿಬಾ- ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್‌ ಹಾಗೂ ಬಾಬಾ ಸಾಹೇಬರ ಚಿಂತನೆಗಳ ಸಮಾಗಮವಾಗಲಿದೆ. ಶೋಷಿತರಿಗೆ ವಿಮೋಚನೆಯ ದಾರಿ ತೋರಿದ ಬಾಬಾ ಸಾಹೇಬ್ ಅಂಬೇಡ್ಕ‌ರ್ ರವರನ್ನು ನೆನೆಯಲು ಮತ್ತು ಅವರ ವಿಚಾರಗಳನ್ನು ಚರ್ಚಿಸಲು ಮುಂದಾಗಿದ್ದು, ಮೊದಲ ಬಾರಿಗೆ ವಿಜಯಪುರ ನಗರದಲ್ಲಿ ನಾಲ್ಕು ದಿನಗಳ ಅಂಬೇಡ್ಕರ್ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...
WhatsApp Image 2025 04 09 at 5.01.26 PM

ಪ್ರತಿದಿನ ರಾಜ್ಯದ ವಿವಿಧ ಭಾಗಗಳಿಂದ ಪ್ರಕಾಶಕರು ಪುಸ್ತಕ ಮಳಿಗೆ ಹಾಕಲಿದ್ದಾರೆ. ಸಾಮಾನ್ಯ ಜನರಿಂದ ಹಿಡಿದು ರಾಜಕೀಯ ಮುಖಂಡರು, ಗಣ್ಯರವರೆಗೆ ಪ್ರತಿಯೊಬ್ಬರೂ ಭಾಗವಹಿಸಬೇಕಾದ ಅತ್ಯುತ್ತಮ ಕಾರ್ಯಕ್ರಮ ಇದಾಗಲಿದೆ. ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನೂರಾರು ಹೋರಾಟಗಾರರು, ವಿಷಯ ತಜ್ಞರು, ರಾಜಕೀಯ ಧುರೀಣರು ಅಂಬೇಡ್ಕರ್ ಹಬ್ಬದ ಭಾಗವಾಗಲಿದ್ದಾರೆ. ಇಂತಹ ವಿಶಿಷ್ಟ ಕಾರ್ಯಕ್ರಮದಲ್ಲಿ ನಾಲ್ಕು ದಿನಗಳೂ ಎಲ್ಲರೂ ಭಾಗಿಯಾಗಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ವಿಜಯಪುರ | ʼಏತ ನೀರಾವರಿ ಪೂರ್ಣಗೊಳಿಸಿ ರೈತರ ಹಿತ ಕಾಪಾಡಿʼ

ಪತ್ರಿಕಾಗೋಷ್ಠಿಯಲ್ಲಿ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ್ ಮಾಚಾದೊ, ದಲಿತ ಸಂಘರ್ಷ ಸಮಿತಿ ನಾಗವಾರ ಬಣ ಜಿಲ್ಲಾ ಸಂಚಾಲಕ ಚೆನ್ನು ಕಟ್ಟಿಮನಿ, ಜಾಗೃತ ಕರ್ನಾಟಕದ ರಾಜ್ಯ ಮುಖಂಡ ಮಹಾಂತೇಶ್ ದೊಡ್ಡಮನಿ, ಮಹಿಳಾ ಒಕ್ಕೂಟದ ಜಿಲ್ಲಾ ಅಧ್ಯಕ್ಷೆ ವಿಶ್ವೇಶ್ವರಿ ಮಠಪತಿ, ಸುನಿತಾ ಮೋರೆ, ಅಕ್ಷಯ್ ಕುಮಾರ್ ಅಜಮುನಿ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ...

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...