ವಿಜಯಪುರ | ದೇಶದಲ್ಲಿ ಬೌದ್ಧ ಧರ್ಮ ಬೆಳವಣಿಗೆಗೆ ಅಂಬೇಡ್ಕರ್ ಕೊಡುಗೆ ಅಪಾರ: ಸಚಿವ ಶಿವಾನಂದ ಪಾಟೀಲ್

Date:

Advertisements

ಈ ದೇಶದಲ್ಲಿ ಸಾಮರಸ್ಯದಿಂದ ಬದುಕು ನಡೆಸಲು ಅವಕಾಶ ಕಲ್ಪಿಸಿ ಕೊಟ್ಟವರು ಡಾ. ಅಂಬೇಡ್ಕರ್ ಅವರು. ದೇಶದಲ್ಲಿ ಬೌದ್ಧ ಧರ್ಮ ಬೆಳವಣಿಗೆಗೆ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು.

ವಿಜಯಪುರ ಜಿಲ್ಲೆಯ ನಡುಗುಂದಿ ಪಟ್ಟಣದ ಎಚ್‌ಪಿಎಸ್ ಶಾಲೆಯ ಆವರಣದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತ್ಯೋತ್ಸವ ಮತ್ತು ಅಂಬೇಡ್ಕರ್ ರತ್ನ ಪ್ರಶಸ್ತಿ ವಿತರಣೆ, ಪ್ರತಿಭಾ ಪುರಸ್ಕಾರ, ತಾಲೂಕು ಛಲವಾದಿ ಮಹಾಸಭಾ ಹಾಗೂ ಉಚಿತ ಸಾಮೂಹಿಕ ವಿವಾಹ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿ, “ಸಿದ್ದರಾಮಯ್ಯ ₹6,000 ಕೋಟಿ ಇದ್ದ ಎಸ್‌ಸಿಪಿ/ಟಿಎಸ್‌ಪಿ ಹಣವನ್ನು ₹42,000 ಕೋಟಿಗೆ ಏರಿಸಿ ದಲಿತರ ಏಳಿಗೆಗೆ ಶ್ರಮಿಸಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ದಲಿತರಿಗೆ ಭೂಮಿ ಹಂಚಿಕೆಯಾಗಿಲ್ಲ. ಆದರೆ ರಾಜ್ಯ ಸರ್ಕಾರ ಅಂಚಿಕೆಗೆ ಮುಂದಾಗಿದೆ” ಎಂದರು.

Advertisements

ವಿಶ್ರಾಂತ ಉಪನ್ಯಾಸಕ ಎಚ್ ಟಿ ಕೋಟೆ ಮಾತನಾಡಿ, “ಎಸ್‌ಸಿ/ಎಸ್‌ಟಿ ಜನಾಂಗದವರು ಶೇ.15ರಷ್ಟು ಮೀಸಲು ಪಡೆದುಕೊಂಡರು ಅಂಬೇಡ್ಕರ್ ಜಯಂತಿ ಮಾಡುತ್ತಾರೆ. ಆದರೆ ಶೇ.32ರಷ್ಟು ಮೀಸಲಾತಿ ಪಡೆದ ಜನಾಂಗದವರು ಅಂಬೇಡ್ಕರ್ ಜಯಂತಿ ಆಚರಿಸುವುದಿಲ್ಲ. ಜಾತಿಗಣತಿಯಿಂದ ಏನೂ ಲಾಭವಿಲ್ಲ. ಇದು ಕಣ್ಣೊರೆಸುವ ತಂತ್ರ. ಅಂಬೇಡ್ಕರ್ ಅವರ ಚಿಂತನೆ ತತ್ವಗಳನ್ನು ಅರ್ಥಮಾಡಿಕೊಂಡಿಲ್ಲ, ನಾವು ಸ್ವಾರ್ಥಗಳಾಗಿದ್ದೇವೆ” ಎಂದರು.

ಉಪನ್ಯಾಸಕ್ಕೆ ಸುಜಾತ ಚಲವಾದಿ, ರಾಜು ಕೋಚಬಾಳ, ಎಚ್ ಎಚ್ ದೊಡ್ಡಮನಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ

ಕಾರ್ಯಕ್ರಮದಲ್ಲಿ ರುದ್ರಮುನಿ ಶಿವಾಚಾರ್ಯ, ಎಸ್ ಜಿ ನಾಗಠಾಣ, ಅಭಿಷೇಕ್ ಚಕ್ರವರ್ತಿ, ತಾಲೂಕು ಪಂಚಾಯತಿ ಇಒ ವೆಂಕಟೇಶ ಒಂದಾಲ, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ವೀರೇಶ ಹಟ್ಟಿ, ಬಿಟಿ ಗೌಡರ, ಸಂಗಮೇಶ ಬಳೆಗಾರ, ಎಂ ಎಂ ಮುಲ್ಲಾ, ಶಾಮ್ ಪಾತ್ರದ, ಬೀಡಿ ಚಲುವಾದಿ, ಕುಮಾರ್ ಬಾಗೇವಾಡಿ, ಶೇಖರ್ ದೊಡಮನಿ, ಪ್ರಶಾಂತ ಚಲುವಾದಿ, ಸಿಂಧೂರ ಬೈರವಾಡಗಿ, ಚಂದ್ರಶೇಖರ ನುಗ್ಲಿ, ಬಸವರಾಜ ಹಾಲಕೊಪ್ಪಾರ, ಡಂಗ್ರಿ ಭಜಂತ್ರಿ, ಖಮೇಶ ಭಜಂತ್ರಿ, ಬಸವರಾಜ ನೀಡಗುಂದಿ, ಸಿಜಿ ವಿಜಯಕರ್ ಇದ್ದರು.

ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಾಧಕರಿಗೆ ಅಂಬೇಡ್ಕರ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಂಟು ಜೋಡಿ ದಂಪತಿ ನವಜೀವನಕ್ಕೆ ಕಾಲಿಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X