ವಿಜಯಪುರ | ಬೌದ್ಧ ಧರ್ಮ ಬೆಳವಣಿಗೆಯಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಸಚಿವ ಶಿವಾನಂದ ಪಾಟೀಲ

Date:

ಈ ದೇಶದಲ್ಲಿ ಸಾಮರಸ್ಯದಿಂದ ಬದುಕು ನಡೆಸಲು ಅವಕಾಶ ಕಲ್ಪಿಸಿ ಕೊಟ್ಟವರು ಡಾ. ಅಂಬೇಡ್ಕರ್ ಅವರು. ದೇಶದಲ್ಲಿ ಬೌದ್ಧ ಧರ್ಮ ಬೆಳವಣಿಗೆಗೆ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ನಡುಗುಂದಿ ಪಟ್ಟಣದ ಎಚ್‌ಪಿಎಸ್ ಶಾಲೆ ಆವರಣದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರ 134ನೇ ಜಯಂತೋತ್ಸವ, ಅಂಬೇಡ್ಕರ್ ರತ್ನ ಪ್ರಶಸ್ತಿ ವಿತರಣೆ, ಪ್ರತಿಭಾ ಪುರಸ್ಕಾರ, ತಾಲೂಕು ಛಲವಾದಿ ಮಹಾಸಭಾ ಹಾಗೂ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿ, “ಸಿದ್ದರಾಮಯ್ಯ 6,000 ಕೋಟಿ ಇದ್ದ ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು 42 ಸಾವಿರ ಕೋಟಿಗೆ ಏರಿಕೆ ಮಾಡಿ ದಲಿತರ ಏಳಿಗೆಗೆ ಶ್ರಮಿಸಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ದಲಿತರಿಗೆ ಭೂಮಿ ಹಂಚಿಕೆ ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ” ಎಂದರು.

WhatsApp Image 2025 05 11 at 6.01.40 PM

ವಿಶ್ರಾಂತ ಉಪನ್ಯಾಸಕ ಎಚ್ ಟಿ ಕೋಟೆ ಮಾತನಾಡಿ, “ಶೇಕಡ 15ರಷ್ಟು ಮೀಸಲಾತಿ ಪಡೆದುಕೊಂಡ ಎಸ್‌ಸಿ ಎಸ್‌ಟಿ ಜನಾಂಗದವರು ಅಂಬೇಡ್ಕರ್ ಜಯಂತಿ ಮಾಡುತ್ತಾರೆ. ಆದರೆ ಶೇಕಡ 32ರಷ್ಟು ಮೀಸಲಾತಿ ಪಡೆದ ಜನಾಂಗದವರು ಅಂಬೇಡ್ಕರ್ ಜಯಂತಿ ಆಚರಿಸುವುದಿಲ್ಲ. ಅಂಬೇಡ್ಕರ್ ಅವರ ಚಿಂತನೆ ತತ್ವಗಳನ್ನು ಅರ್ಥಮಾಡಿಕೊಳ್ಳುವಲ್ಲಿ ನಾವು ನಿಸ್ವಾರ್ಥಗಳಾಗಬೇಕು” ಎಂದರು.

ಎಸ್ ಎಸ್ ಎಲ್ ಸಿ ಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಾಧಕರಿಗೆ ಅಂಬೇಡ್ಕರ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಂಟು ಜೋಡಿ ದಂಪತಿ ನವಜೀವನಕ್ಕೆ ಕಾಲಿಟ್ಟರು.

ಇದನ್ನೂ ಓದಿ: ವಿಜಯಪುರ | ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ

ಕಾರ್ಯಕ್ರಮದಲ್ಲಿ ಸುಜಾತ ಚಲವಾದಿ, ರಾಜು ಕೋಚಬಾಳ, ಎಚ್ ಎಚ್ ದೊಡ್ಡಮನಿ, ರುದ್ರಮುನಿ ಶಿವಾಚಾರ್ಯ, ಎಸ್ ಜಿ ನಾಗಠಾಣ, ಅಭಿಷೇಕ್ ಚಕ್ರವರ್ತಿ, ತಾಲೂಕು ಪಂಚಾಯತಿ ಇ ಓ ವೆಂಕಟೇಶ ಒಂದಾಲ, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ವೀರೇಶ ಹಟ್ಟಿ, ಬಿಟಿ ಗೌಡರ, ಸಂಗಮೇಶ ಬಳೆಗಾರ, ಎಂ ಎಂ ಮುಲ್ಲಾ, ಶಾಮ್ ಪಾತ್ರದ, ಬೀಡಿ ಚಲುವಾದಿ, ಕುಮಾರ್ ಬಾಗೇವಾಡಿ, ಶೇಖರ್ ದೊಡಮನಿ, ಪ್ರಶಾಂತ ಚಲುವಾದಿ, ಸಿಂಧೂರ ಬೈರವಾಡಗಿ, ಚಂದ್ರಶೇಖರ ನುಗ್ಲಿ, ಬಸವರಾಜ ಹಾಲಕೊಪ್ಪಾರ, ಡಂಗ್ರಿ ಭಜಂತ್ರಿ, ಖಮೇಶ ಭಜಂತ್ರಿ, ಬಸವರಾಜ ನೀಡಗುಂದಿ, ಸಿಜಿ ವಿಜಯಕರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ: ಎಸ್.ಎಂ ಪಾಟೀಲ ಗಣಿಹಾರ

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ...

ವಿಜಯಪುರ | ರೈತರಿಗೆ ಎಕರೆಗೆ ರೂ.25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ...

SIR ರದ್ದುಗೊಳಿಸಿ, CEC ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ...

ಉಡುಪಿ | ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು

ಪ್ರಶ್ನೆಗಳನ್ನು ಎತ್ತುವುದಷ್ಟೇ ಮುಖ್ಯವಲ್ಲ; ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವೂ ಅಗತ್ಯ. ಸಾಹಿತ್ಯವು...