ವಿಜಯಪುರ | ಅಂಗನವಾಡಿ ಕೇಂದ್ರಗಳಲ್ಲಿನ ಅಕ್ರಮಕ್ಕೆ ಕಡಿವಾಣ ಹಾಕಲು ಆಗ್ರಹ

Date:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ತಾಯಂದಿರರ ಮತ್ತು ಮಕ್ಕಳ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ರೀತಿಯ ಪೌಷ್ಟಿಕ ಆಹಾರವನ್ನು ಒದಗಿಸುತ್ತಿದೆ. ಆದರೆ, ಜಿಲ್ಲೆಯ ಬಹುತೇಕ ಅಂಗನವಾಡಿ ಕೇಂದ್ರಗಳು ಅಂಗನವಾಡಿ ಕಾರ್ಯಕರ್ತೆಯರ ಕುಟುಂಬದ ಆರ್ಥಿಕ ಅಭಿವೃದ್ಧಿಗೆ ನಿರ್ಮಾಣವಾದಂತೆ ಭಾಸವಾಗುತ್ತಿವೆ ಎಂದು ಕೆಆರ್‌ಎಸ್‌ ಪಕ್ಷದ ಮುಖಂಡರು ಆರೋಪಿಸಿದ್ದಾರೆ.

- Advertisement -

ವಿಯಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರೂಪಣಾಧಿಕಾರಿ ಸಾವಿತ್ರಿ ಗುಗ್ಗರಿ ಅವರಿಗೆ ಪಕ್ಷದ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಜಿಲ್ಲೆಯ ಬಹುತೇಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೇ ಇರುವುದಿಲ್ಲ. ಆದರೂ ಹಾಜರಾತಿ ಪೂರ್ತಿಯಾಗಿ ತೋರಿಸಿ, ಮಕ್ಕಳಿಗೆ ಬರುವ ಎಲ್ಲ ರೀತಿಯ ಸೌಲಭ್ಯಗಳನ್ನು (ಆಹಾರ ಕಿಟ್) ಹೊರಗಡೆ ಖಾಸಗಿ ವ್ಯಕ್ತಿಗಳಿಗೆ ಮಾರಿಕೊಳ್ಳುತ್ತಿರುವ ಬಗ್ಗೆ ಆರೋಪಗಳಿವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಅಂಗನವಾಡಿ ಕೇಂದ್ರಗಳು ಕೇವಲ ಸರ್ಕಾರಕ್ಕೆ ಸುಳ್ಳು ವರದಿ ನೀಡುವ ಕೇಂದ್ರಗಳಾಗಿ ಮಾರ್ಪಡುತ್ತಿವೆ. ಈ ಕಹಿ ಸತ್ಯವು ಇಲಾಖೆಯ ಬಹುತೇಕ ಸಿಬ್ಬಂದಿಗಳಿಗೆ ತಿಳಿದಿದ್ದರೂ, ಯಾವುದೇ ಕ್ರಮ ಕೈಕೊಂಡಿಲ್ಲ. ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಪಕ್ಷವು ಬೃಹತ್ ಹೋರಾಟ ನಡೆಸುತ್ತದೆ” ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಎಚ್ಚರಿಕೆ ನೀಡಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ ಹಮಿದ ಇನಾಮದಾರ, ವಿಕ್ರಮ್ ವಾಘಮೋರೆ, ದುರ್ಗಪ್ಪ ಬೂದಿಹಾಳ, ಕಾಂತುಗೌಡ ಬೆಂಡವಾಡ, ಪ್ರವೀಣ ಕನಸೇ, ರಾಕೇಶ ಇಂಗಳಗಿ ರಾಘವೇಂದ್ರ ಛಲವಾದಿ. ಸುರೇಂದ್ರ ಕುನಸಲೇ, ಭೀಮಾಶಂಕರ ಕಾಂಬಳೆ, ಲಕ್ಷಣ ಚಡಚಣ ಮತ್ತಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...