ಅಂಗವಾಡಿ ಕಾರ್ಯಕರ್ತೆಯರಿಗೆ ವಹಿಸಿರುವ ಚುನಾವಣಾ ಕಾರ್ಯವಾದ ಬ್ಲಾಕ್ ಲೆವಲ್ ಆಫೀಸರ್(ಬಿಎಲ್‌ಒ) ಕೆಲಸದಿಂದ ಮುಕ್ತಿ ನೀಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಪಟ್ಟಣದ ಮಿನಿ ವಿಧಾನಸೌಧದ ಎದುರು ಕೆಲ ಕಾಲ ಪ್ರತಿಭಟನೆ ಮಾಡಿ ತಹಶೀಲ್ದಾರ್ ಬಿ ಎಸ್ ಕಡಕಬಾವಿ ಅವರಿಗೆ ಮನವಿ ಸಲ್ಲಿಸಿದರು.
“ಬ್ಲಾಕ್ ಲೆವಲ್ ಆಫೀಸರ್(ಬಿಎಲ್‌ಒ) ಕೆಲಸವನ್ನು ನಿರ್ವಹಿಸುವಂತೆ ಸರ್ಕಾರ ಆದೇಶ ಮಾಡಿದ್ದು, ಆ ಕೆಲಸವನ್ನು ಅಂಗನವಾಡಿ ಕಾರ್ಯಕರ್ತೆಯರು ಮಾಡಲು ಸಾಧ್ಯವಿಲ್ಲ. ಅದರಿಂದ ಮುಕ್ತಿ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಈಗಾಗಲೇ ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಮಕ್ಕಳ ಆರೋಗ್ಯ ಕಾಪಾಡುವುದರ ಜತೆಗೆ ಅವರ ಎಲ್ಲ ಯೋಗಕ್ಷೇಮಗಳ ಬಗ್ಗೆ ನಿಗಾವಹಿಸಬೇಕಿದೆ. ಕಾರಣ ಅಂಗನವಾಡಿ ಕಾರ್ಯಕರ್ತೆಯರಿಗೆ ಬಿಎಲ್‌ಒ ಕೆಲಸ ನೀಡಬಾರದು” ಎಂದು ಒತ್ತಾಯಿಸಿದರು.
ಈ ಸುದ್ದು ಓದಿದ್ದೀರಾ? ಕೋಲಾರ | ಜು. 19, 20ರಂದು ಜಿಲ್ಲಾಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರ
“ತಾಲೂಕಿನ ಅಂಗನವಾಡಿ ಕಾರ್ಯ ಕರ್ತೆಯರಿಗೆ ಸರಿಯಾಗಿ ಗೌರವಧನ ಕೂಡಾ ನೀಡುವುದಿಲ್ಲ. ಅಂಗನವಾಡಿ, ಕಟ್ಟಡಗಳ ಬಾಡಿಗೆ ನೀಡುವುದಿಲ್ಲ. ಬಿಎಲ್‌ಒ ಕೆಲಸದಿಂದ ನಮಗೆ ವಿನಾಯಿತಿ ನೀಡಬೇಕು” ಎಂದು ಮನವಿ ಮಾಡಿಕೊಂಡರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ, ಸಿಐಟಿಯು ತಾಲೂಕಾಧ್ಯಕ್ಷೆ ಭಾರತಿ ವಾಲಿ, ಈರಣ್ಣ ಬೆಳುಂಡಗಿ ಪ್ರತಿಭಟನಾ ನೇತೃತ್ವ ವಹಿಸಿದ್ದರು.