ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿ ಸರ್ಕಾರ ಬಡವರಿಗಾಗಿ ನೀಡುತ್ತಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಪಟ್ಟಣ ಸಹಿತ ತಾಲೂಕಿನ ವಿವಿಧ ಭಾಗಗಗಳಲ್ಲಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದು, ಈ ಕುರಿತು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ವಿಜಯಪುರ ಘಟಕ ಆಗ್ರಹಿಸಿದೆ.
ಈ ಕುರಿತು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಮೌಖಿಕವಾಗಿ ದೂರು ನೀಡಿದ್ದರೂ ಇಲ್ಲಿವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಅಧಿಕಾರಿಗಳೇ ಅಕ್ಕಿ ಅಕ್ರಮ ಸಂಗ್ರಹಣೆಯಲ್ಲಿ ಭಾಗಿಯಾಗಿದ್ದಾರೆ ಎನ್ನುವ ಸಂಶಯ ಹುಟ್ಟುಹಾಕುತ್ತದೆ. ಈ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಕೂಡಲೇ ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ದಸಂಸ ಸಂಘಟನೆಯ ಮುಖಂಡರು ಎಚ್ಚರಿಸಿದರು.
ಮನವಿ ಸ್ವೀಕರಿಸಿದ ವಿಜಯಪುರ ತಹಶೀಲ್ದಾರ್ ಪ್ರಕಾಶ ಸಿಂದಗಿ, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಇದನ್ನೂ ಓದಿ: ವಿಜಯಪುರ | ಮಹಿಳಾ ಸಬಲೀಕರಣದತ್ತ ʼಒಡಲ ಧ್ವನಿ ಒಕ್ಕೂಟʼದ ಹೆಜ್ಜೆ; ರೈತರಿಗೆ ಕೃಷಿ ಪರಿಕರ ವಿತರಣೆ
ಈ ವೇಳೆ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಪ್ರಕಾಶ ಗುಡಿಮನಿ, ರಾವುತ ಅಗಸರ, ರಮೇಶ ಈಳಗೇರ, ಸಂಗನಗೌಡ ಬಿರಾದಾರ, ಶಿವನಗೌಡ ರುಕುಂಪುರ, ಚಿದಾನಂದ ಭಜಂತ್ರಿ, ಪರಶುರಾಮ ನಾಯ್ಕೋಡಿ, ಅನಿಲ ಚೌಗಲೆ, ಪರಶುರಾಮ ಮೇಲಿನಮನಿ, ನಬಿಲಾಲ್ ಚಿಕ್ಕ ಸಿಂದಗಿ, ದಾವಲಸಾಬ್ ಹೆಬ್ಬಾಳ, ಹಮೀದ್ ಮುಲ್ಲಾ, ಇಮಾಮ್ ಮುಲ್ಲಾ ಇದ್ದರು.