ವಿಜಯಪುರ | ಇಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಸಿಎಂಗೆ ಮನವಿ

Date:

Advertisements

ಇಂಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕೆಂದು ಆಗ್ರಹಿಸಿ ಕ್ಷೇಮಾಭಿವೃದ್ದಿ ಸಂಘ ಹಾಗೂ ವಿಜಯಪುರ ಜಿಲ್ಲಾ ಹೋರಾಟ ಸಮಿತಿ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿದರು. ಬಳಿಕ ಉಪ ಕಂದಾಯ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಸಮಗ್ರ ಇಂಡಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ ಕಾಮಗೊಂಡ ಮಾತನಾಡಿ, “ಜಿಲ್ಲಾ ಕೇಂದ್ರಕ್ಕೆ ಯೋಗ್ಯವಾದ ಭೌಗೋಳಿಕ ಪ್ರದೇಶ ಮತ್ತು ಸರ್ಕಾರಿ ಕಚೇರಿಗಳನ್ನು ಹೊಂದಿರುವ ಇಂಡಿಯನ್ನು ಜಿಲ್ಲೆಯಾಗಿಸಬೇಕು. ಇಂಡಿ ತಾಲೂಕನ್ನು ಆರ್ಟಿಕಲ್ 371 (ಜೆ) ಅಡಿಯಲ್ಲಿ ಸೇರ್ಪಡೆ ಮಾಡಬೇಕು.‌ ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿಯೇ ಚರ್ಚೆಯಾಗಬೇಕು” ಎಂದು ಒತ್ತಾಯಿಸಿದರು.

ರಾಜಕೀಯ ಮುಖಂಡ ಪಾಪು ಕಿತ್ತಳಿ ಮಾತನಾಡಿ, “ಸರ್ಕಾರ ನಮ್ಮ ಮನವಿ ಪರಿಗಣಿಸಿ ಇಂಡಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಪವಾಸ ಸತ್ಯಾಗ್ರಹ ಸೇರಿದಂತೆ ಇತರ ಹಂತದ ಹೋರಾಟಗಳನ್ನೂ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

Advertisements

ಪುರಸಭೆಯ ಸದಸ್ಯ ಸತೀಶ ಕುಂಬಾರ ಮಾತನಾಡಿ, “ಸರ್ಕಾರದ ಆಡಳಿತ ಯಂತ್ರವೇ ಬೆಳಗಾವಿಯಲ್ಲಿದ್ದು, ಅಭಿವೃದ್ಧಿ ದೃಷ್ಟಿಯಿಂದ ಇಂಡಿಗೆ ಪ್ರತ್ಯೇಕ ಜಿಲ್ಲೆ ಸ್ಥಾನಮಾನ ನೀಡಬೇಕು. ಈ ಭಾಗದ ಬಹುದಿನದ ಜಿಲ್ಲಾ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು” ಎಂದರು.

ನಿವೃತ್ತ ಶಿಕ್ಷಕ ಜಿ ವಿ ಬಿರಾದಾರ ಮಾತನಾಡಿ, “ಶಾಸಕ ಯಶವಂತರಾಯ ಗೌಡರಿಗೆ ಬೆಳಗಾವಿ ಸದನದಲ್ಲಿ ಧ್ವನಿ ಎತ್ತಲು ವಿನಂತಿಸಿಕೊಂಡಿದ್ದೇವೆ. ಶಾಸಕರು ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರವಾಗಿ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಭರವಸೆ ನೀಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

ಪ್ರತಿಭಟನೆಯಲ್ಲಿ ಡಾ. ರಮೇಶ ಪೂಜಾರಿ, ನಿವೃತ್ತ ಪ್ರಾಚಾರ್ಯ ಎ ಸಿ ಪಾಟೀಲ, ರಾಜಕೀಯ ಮುಖಂಡ ಜಗದೀಶ ಕ್ಷತ್ರಿ, ಕಿರಣಕುಮಾರ ಜೋಶಿ, ಪುರಸಭೆ ಸದಸ್ಯ ಅಯೂಬ ಬಾಗವಾನ, ತಾ.ಪಂ ಮಾಜಿ ಅಧ್ಯಕ್ಷ ಶೇಖರ ನಾಯಕ, ಅವಿನಾಶ ಬಗಲಿ, ಚನ್ನು ದೇವರ, ಮಹೇಶ ಮೈದರಗಿ, ರುಕ್ಮುದ್ದೀನ ಪಟೇಲ, ಸಂತೋಷ ಪರೆಶೇನ್ನವರ, ಮೇಘು ರಾಠೋಡ, ಬಾಲಾಜಿ ರಜಪೂತ, ರಮೇಶ ಅಡಗಲ್ಲ, ಉದ್ದಿಮೆದಾರ ಅನಂತ ಜೈನ, ನಿವೃತ್ತ ಪ್ರಾಚಾರ್ಯ ಎ ಎಸ್ ಗಾಣಿಗೇರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X