ವಿಜಯಪುರ | ಅರವಿಂದ್ ಕೇಜ್ರಿವಾಲ್ ಪ್ರಕರಣ ಪ್ರಾಮಾಣಿಕತೆಗೆ ಸಾಕ್ಷಿ: ಭೋಗೇಶ್ ಸೋಲಾಪುರ್

Date:

‘ಸತ್ಯಮೇವ ಜಯತೆ’ ಎನ್ನುವುದು ಮತ್ತೆ ಸಾಬೀತಾಗಿದ್ದು, ಅರವಿಂದ್ ಕೇಜ್ರಿವಾಲ್ ಅವರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಬಿಜೆಪಿಯ ನಿರಂಕುಶ ಆಡಳಿತ, ಸರ್ವಾಧಿಕಾರಿ ವರ್ತನೆಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಸಿಬಿಐ ಬಳಸಿಕೊಂಡು ಸುಳ್ಳು ಆರೋಪ ಮಾಡಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ಕೊಡಬೇಕೆಂದು ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಗ್ರಹಿಸಿದ್ದಾರೆ.

- Advertisement -

ಆಮ್ ಆದ್ಮಿ ಪಾರ್ಟಿ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನಲೆಯಲ್ಲಿ ವಿಜಯಪುರ ನಗರದ ಎಎಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...
ಭೋಗೇಶ್‌ ಸೋಲಾಪುರ್

“ಸುಪ್ರೀಂ ಕೋರ್ಟ್‌ನಲ್ಲಿ ಸತ್ಯಕ್ಕೆ ಗೆಲುವು ಸಿಕ್ಕಿದೆ. ಪ್ರಾಮಾಣಿಕತೆಗೆ ಎಂದೂ ಸೋಲಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸಿಬಿಐ ಸಂಸ್ಥೆಯನ್ನು ಪಂಜರದ ಗಿಣಿ ಎನ್ನುವ ಮೂಲಕ ಕೇಂದ್ರ ಸರ್ಕಾರದ ಸೂಚನೆಯಂತೆ ಕೆಲಸ ಮಾಡುತ್ತಿದೆಯೆಂದು ಛೀಮಾರಿ ಹಾಕಿದೆ. ಸಿಬಿಐ ನಡೆ ಬಗ್ಗೆಯೇ ನ್ಯಾಯಮೂರ್ತಿ ಉಜ್ಜಲ್‌ ಭುಯಾನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಬಿಐ ತಾನು ಬಂಧಮುಕ್ತ ಗಿಣಿಯೆಂದು ನಿರೂಪಿಸಬೇಕು. ಸಂಶಯಾತೀತವಾಗಿ ಕೆಲಸ ಮಾಡಬೇಕೆಂದು ಹೇಳಿದೆ. ಇದು ಸಿಬಿಐ ಯಾರ ಪರ ಕೆಲಸ ಮಾಡುತ್ತಿದೆ ಎನ್ನುವುದನ್ನು ಮತ್ತೆ ಸಾಬೀತುಪಡಿಸಿದೆ” ಎಂದರು.

“ಅಧರ್ಮ, ದಬ್ಬಾಳಿಕೆ, ಅನ್ಯಾಯ ತಾತ್ಕಾಲಿಕವಾಗಿ ಗೆಲುವು ಸಾಧಿಸಿದರೂ, ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿ. ಇಂದು ಸುಪ್ರೀಂ ಕೋರ್ಟ್ ಕೊಟ್ಟಿರುವ ತೀರ್ಪು ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿ ಧೋರಣೆಗೆ ಕೊಡಲಿ ಪೆಟ್ಟು ಕೊಟ್ಟಂತಾಗಿದೆ. ಇಡೀ ಪ್ರಕರಣದಲ್ಲಿ ಜಾಮೀನು ನೀಡಿದ್ದನ್ನು ವಿಫಲ ಮಾಡಲೆಂದೇ ಸಿಬಿಐ ಕೇಜ್ರಿವಾಲ್‌ ಅವರನ್ನು ಬಂಧಿಸುವ ಮೂಲಕ, ಜೈಲಿನಲ್ಲೇ ಇಡಲು ಮೋದಿ ಸರ್ಕಾರ ಸಂಚು ಮಾಡಿತ್ತು. ಆದರೆ ನ್ಯಾಯದ ದಾರಿಯಲ್ಲಿ ನಡೆಯುತ್ತಿರುವ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಸುಳ್ಳು ಆರೋಪಗಳ ಮೇಲೆ ಎಷ್ಟು ದಿನ ಜೈಲಿನಲ್ಲಿಡಲು ಸಾಧ್ಯ, ಸತ್ಯ ಗೆದ್ದೇ ಗೆಲ್ಲುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ‘ಸ್ವಚ್ಛವಾಹಿನಿ’ ಚಾಲಕಿಯರಿಗೆ ವಾಹನ ಪರವಾನಗಿ ವಿತರಿಸಿದ ಸಚಿವ ಮಹದೇವಪ್ಪ

“ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪು ಸತ್ಯ, ನ್ಯಾಯದ ಪರವಾಗಿ ಹೋರಾಟ ಮಾಡುವವರಿಗೆ ಭರವಸೆ ನೀಡಿದೆ. ದೇಶದ ನ್ಯಾಯಾಂಗ ವ್ಯವಸ್ಥೆ ಬಗ್ಗೆ ನಂಬಿಕೆ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇನ್ನಾದರೂ ದ್ವೇಷ ರಾಜಕಾರಣ ಬಿಟ್ಟು, ಜನ ಕೊಟ್ಟಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಕೆಲಸ ಮಾಡಲಿ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...