ವಿಜಯಪುರ | ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಸಂಘ ಪ್ರತಿಭಟನೆ

Date:

ಕನಿಷ್ಠ 10 ಸಾವಿರ ರೂ. ಗೌರವಧನ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ವಿಜಯಪುರದಲ್ಲಿ ಧರಣಿ ನಡೆಸಲಾಯಿತು.

- Advertisement -

ನಗರದ ಡಾ.ಬಿ.ಆ‌ರ್.ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡ ಧರಣಿಯಲ್ಲಿ ನೂರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿ ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಎಐಕೆಕೆಎಂಎಸ್ ಸಂಘಟನೆ ರಾಜ್ಯ ಕಾರ್ಯದರ್ಶಿ ಬಿ.ಭಗವಾನ್ ರೆಡ್ಡಿ ಮಾತನಾಡಿ, “ಕಳೆದ ಜನವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಹೋರಾಟ ನಡೆಸಿದಾಗ ಕನಿಷ್ಠ 10 ಸಾವಿರ ರೂ.ಗೌರವದ ಗ್ಯಾರಂಟಿ ಕೊಡುತ್ತೇವೆ. ಬಜೆಟ್‌ನಲ್ಲೂ ಘೋಷಣೆ ಮಾಡುವುದಾಗಿ ಸರಕಾರ ಭರವಸೆ ನೀಡಿತ್ತು. ಈವರೆಗೂ ಈಡೇರಿಸಿಲ್ಲ.” ಎಂದು ದೂರಿದರು. “ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೇವೆಯಲ್ಲಿರುವ ಆಶಾ ಕಾರ್ಯ ಕರ್ತೆಯರಿಗೆ ಸರಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಇಲ್ಲದಿದ್ದರೆ ರಾಜ್ಯವ್ಯಾಪಿ ಹೋರಾಟ ತೀವ್ರಗೊಳಿಸಲಾಗುವುದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಮುಖಂಡ ಭರತ್‌ ಕುಮಾರ್ ಎಚ್ ಟಿ ಮಾತನಾಡಿ,‌ “ರಾಜ್ಯ ಹಾಗೂ ಕೇಂದ್ರ ಸರಕಾರಗಳು ‘ದುಡಿಯುವ ವರ್ಗದ ಹಿತಾಸಕ್ತಿ ಕಾಪಾಡುತ್ತಿಲ್ಲ. ಆಶಾ ಕಾರ್ಯಕರ್ತೆಯರಿಗೆ ನ್ಯಾಯಯುತವಾಗಿ 10 ಸಾವಿರ ರೂ. ಕನಿಷ್ಠ ವೇತನ ಕೂಡಲೇ ಜಾರಿಗೊಳಿಸಬೇಕು” ಎಂದರು.

ಇದನ್ನೂ ಓದಿ: ವಿಜಯಪುರ | ಶಿಥಿಲಗೊಂಡಿರುವ ಬಂಗಾರ ಗುಂಡಿಯ ಸರ್ಕಾರಿ ಶಾಲೆ: ಜೀವ ಭಯದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು!

ಜಿ ಜಿ ಗಾಂಧಿ ಮಾತನಾಡಿ, “ಒಂದು ಕುಟುಂಬ ಜೀವನ ನಿರ್ವಹಿಸಲು ಕನಿಷ್ಠ 25,000 ರೂ. ಅವಶ್ಯ ಇದೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ವೈದ್ಯರಂತೆ ಪ್ರಥಮ ಚಿಕಿತ್ಸೆ ಮಾಡುತ್ತ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ಪ್ರೋತ್ಸಾಹ ಧನ ಕೊಡುತ್ತಿಲ್ಲ. ಹೆಚ್ಚು ಕೆಲಸ ತೆಗೆದುಕೊಂಡು ಕನಿಷ್ಠ ವೇತನ ನೀಡದ ಸರಕಾರದ ಕ್ರಮ ಖಂಡನೀಯ” ಎಂದರು.

ಧರಣಿಯಲ್ಲಿ ಯುವಜನ ಸಂಘಟನೆಯ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗಬಾಗೇವಾಡಿ, ಶಿವಬಾಳಮ್ಮ ಕೊಂಡಗುಳಿ, ಶಿವರಂಜಿನಿ, ಆಶಾ ಕಾರ್ಯಕರ್ತೆಯರಾದ ನಿರ್ಮಲಾ, ಜಯಶ್ರೀ ಕುಂಬಾರ, ಮೆಹರುನ್ನಿಸಾ ಜಬನೂರು, ಮಲ್ಲಮ್ಮ, ರೇಣುಕಾ ಕಲಗುಟಕರ, ಲಕ್ಷ್ಮೀ ಸೀಮೆಕೇರಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...