ವಿಜಯಪುರ | ವಿವಿಧ ಬೇಡಿಕೆ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Date:

ಮನೆ, ಮಕ್ಕಳು, ಸಂಸಾರ ಜವಾಬ್ದಾರಿಯನ್ನು ಬದುಗೊತ್ತಿ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರು ಬಿಡಿಗಾಸಿಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾಗಳ ಧ್ವನಿಗೆ ಕಿವಿಗೊಡಬೇಕು ಎಂದು ಎಐಎಂಎಸ್‌ಎಸ್ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಶಿವಬಾಳಮ್ಮ ಕೊಂಡಗುಳಿ ಹೇಳಿದರು.

- Advertisement -

ಮಾಸಿಕ ಕನಿಷ್ಠ 10,000 ರೂಪಾಯಿ ಗೌರವಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಾರ್ಯಕರ್ತರು ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಸುತ್ತಿರುವ ಎರಡನೇ ದಿನದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವಿಜಯಪುರದ ಹಿರಿಯ ಪತ್ರಕರ್ತ ಅನಿಲ್ ಹೊಸಮನಿ ಮಾತನಾಡಿ, “ಜನಪರ, ಮಹಿಳಾ ಪರ ಎಂದು ಹೇಳುವ ಸರ್ಕಾರಗಳು ಹೆಣ್ಣು ಮಕ್ಕಳು ಬೀದಿಗಿಳಿದು ಹೋರಾಟ ಮಾಡುತ್ತಿದ್ದರೂ ಕೂಡ ಒಂದೇ ಒಂದು ಮನವಿ ಸ್ವೀಕರಿಸಲು ಬರುವಷ್ಟು ಸೌಜನ್ಯ ಇಲ್ಲ. ದುಬಾರಿ ಶಿಕ್ಷಣ ಬೆಲೆ ಏರಿಕೆ ಸಂದರ್ಭದಲ್ಲಿ ಕಳೆದ ಎರಡರಿಂದ ಮೂರು ತಿಂಗಳದಿಂದ ಪ್ರೋತ್ಸಾಹಧನ ನೀಡದಿರುವುದು ದರದೃಷ್ಟಕರ” ಎಂದರು.‌

ವಿಜಯಪುರ ಆಶಾ ಕಾರ್ಯಕರ್ತೆಯರು

ದಲಿತ ಸಂಘಟನೆಯ ಚನ್ನು ಕಟ್ಟಿಮನಿ ಮಾತನಾಡಿ, “ಆಶಾ ಕಾರ್ಯಕರ್ತೆಯರು ತಮ್ಮ ಹಕ್ಕುಗಳು ಮತ್ತು ಸಮಸ್ಯೆಗಳನ್ನು ನಿರಂತರವಾಗಿ ಹೋರಾಟದ ಮೂಲಕ ಪಡೆದುಕೊಂಡು ಬಂದಿದ್ದಾರೆ. ತಮ್ಮ ಶ್ರಮಕ್ಕೆ ಪ್ರತಿಫಲ ಕೇಳುತ್ತಿದ್ದಾರೆ. ಸರ್ಕಾರ ಕಣ್ಣೊರೆಸುವ ತಂತ್ರ ಬಿಟ್ಟು ಶೀಘ್ರ ಕ್ರಮ ಕೈಗೊಳ್ಳಬೇ‌ಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಸಾಲುಮರದ ತಿಮ್ಮಕ್ಕ ನೆಟ್ಟಿದ್ದ ಗಿಡಗಳ ನಾಶ: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಉಮೇಶ್ ಆಗ್ರಹ

ಈ ಧರಣಿಯಲ್ಲಿ ರಾಜ್ಯ ಉಪಾಧ್ಯಕ್ಷ ವೀರೇಶ್ ಎನ್, ಎಐಎಂಎಸ್ ಗೀತಾ ಎಚ್, ಯುವಜನ ಸಂಘಟನೆ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗಬಾಗೇವಾಡಿ, ದಲಿತ ಸಂಘರ್ಷ ಸಮಿತಿಯ ವಿದ್ಯಾರ್ಥಿ ಘಟಕದ ನಾಗೇಶ ಕಟ್ಟಿಮನಿ, ಮಹಿಳಾ ಸಂಘಟನೆ ಜಿಲ್ಲಾ ಜಂಟಿ ಕಾರ್ಯದರ್ಶಿ ಶಿವರಂಜನಿ ಹಾಗೂ ಮಹಾದೇವಿ ಧರ್ಮಶೆಟ್ಟಿ ಸೇರಿದಂತೆ ವಿವಿಧ ರೈತ, ಪ್ರಗತಿಪರ, ದಲಿತ ಸಂಘಟನೆಯ ಮುಖಂಡರು ಧರಣಿಯಲ್ಲಿ ಭಾಗವಹಿಸಿ ಬೆಂಬಲ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...