ವಿಜಯಪುರ | ಕಾಂತರಾಜ ವರದಿ ಜಾರಿಯಾಗದಂತೆ ಪಟ್ಟಭದ್ರರಿಂದ ಪ್ರಯತ್ನ: ಮಾಜಿ ಶಾಸಕ ರಾಜು ಆಲಗೂರ

Date:

Advertisements

ಕಾಂತರಾಜ ಆಯೋಗದ ವರದಿಯನ್ನು ಜಾರಿಗೊಳಸದ ಹಾಗೆ ಕೆಲ ಪಟ್ಟ ಭದ್ರತಾ ಶಕ್ತಿಗಳು ತೆರೆಮರೆಯಲ್ಲಿ ಕೆಲಸ ಮಾಡುತ್ತಿವೆ ಎಂದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು.

ವಿಜಯಪುರ ಜಿಲ್ಲೆ ಚಡಚಣ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಶೋಷಿತ ವರ್ಗಗಳ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಕೊಡಲು ಪೂರಕವಾದ ಕಾಂತರಾಜ್ ವರದಿಯನ್ನು ರಾಜ್ಯ ಸರ್ಕಾರ ತಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

Advertisements

ಆಯೋಗದ ವರದ ಅತ್ಯಂತ ನಿಖರವಾಗಿದೆ. ಸಾಕಷ್ಟು ಶ್ರಮವಹಿಸಿ ವರದಿ ಸಿದ್ಧಪಡಿಸಿದ್ದಾರೆ. ರಾಜಕೀಯ, ಆರ್ಥಿಕ ,ಶೈಕ್ಷಣಿಕ ಅವಕಾಶಗಳು ಶೋಷಿತ ಸಮಾಜಗಳಿಗೆ ಲಭಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರತು ಯಾರಿಂದಲೂ ಈ ವರದಿ ಜಾರಿ ಮಾಡಲು ಸಾಧ್ಯವಿಲ್ಲ. ಹೀಗಾಗಿ ಅವರ ಅವಧಿಯಲ್ಲಿ ಈ ವರದಿ ಅನುಷ್ಠಾನಗೊಳ್ಳಬೇಕಿದೆ. ಇಲ್ಲವಾದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಆಲಗೂರು ಎಚ್ಚರಿಕೆ ನೀಡಿದರು.

WhatsApp Image 2024 11 16 at 11.59.39 AM

ಮಾಜಿ ಶಾಸಕ ಶರಣಪ್ಪ ಸುಣಗಾರ ಮಾತನಾಡಿ, 185 ಕೋಟಿಯನ್ನು ಕಾಂತರಾಜ್ ಆಯೋಗದ ವರದಿಯ ಸಮೀಕ್ಷೆ ಗಾಗಿ ಖರ್ಚು ಮಾಡಲಾಗಿದೆ. ಐದಾರು ವರ್ಷ ಕಷ್ಟಪಟ್ಟು ಸಮೀಕ್ಷೆ ನಡೆಸಿ, ರಾಜ್ಯದ ಜನರ ದುಡ್ಡಲ್ಲಿ ಆಯೋಗ ಕೆಲಸ ಮಾಡಿದೆ. 15 ಸಾವಿರ ನೌಕರರು ಮನೆ ಮನೆಗೆ ಹೋಗಿ ಕೆಲಸ ಮಾಡಿದ್ದಾರೆ. ಈ ಆಯೋಗದ ವರದಿ ಸಾಮಾಜಿಕ ಮತ್ತು ಶೈಕ್ಷಣಿಕ ಜೊತೆಗೆ ಆರ್ಥಿಕ ಸ್ಥಿತಿಗತಿಗಳನ್ನು ಎತ್ತಿ ಹಿಡಿದಿದೆ ಎಂದು ತಿಳಿಸಿದರು.

ಶೋಷಿತ ವರ್ಗದವರ ಕಲ್ಯಾಣಕ್ಕಾಗಿ ಕಾಂತರಾಜ್ ವರದಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಬೆಂಗಳೂರಿನ ವಿಧಾನಸೌಧ ಅಥವಾ ಚಳಿಗಾಲದ ಅಧಿವೇಶನದಲ್ಲಿ ವರದಿ ಜಾರಿಗೊಳಿಸುವ ಕೇಂದ್ರ ಆಗ್ರಿಹಿಸಿ ಮುತ್ತಿಗೆ ಹಾಕಲಾಗುವುದೆಂದು ಅಹಿಂದ ಸಂಘಟನೆಯ ಜಿಲ್ಲಾ ಮುಖಂಡರಾದ ಎಸ್ ಎಂ ಪಾಟೀಲ್ ಗಣಿಹಾರ್ ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ ಗೌಡ, ಸೋಮನಾಥ ಕಳ್ಳಿಮನಿ, ಚಂದ್ರಶೇಖರ ಕೊಡಬಾಗಿ, ಸುರೇಶ ಗೌಡ ಪಾಟೀಲ, ಸುರೇಶ ಗುಣಸಗಿ, ಎಂಜಿ ಯಂಕಂಚಿ, ರಾಜಶ್ರೀ ಯರನಾಳ, ಮಲ್ಲು ಬಿದರಿ, ಪ್ರಭುಗೌಡ ಪಾಟೀಲ, ಜಟ್ಟಪ್ಪ ಬನಸೋಡೆ, ನಾಗರಾಜ ಲಂಬು, ಅಡವೆಪ್ಪ ಸಾಲಗಲ್ಲ, ಸಂಜು ಕಾಂಬೋಗಿ , ಮಹಾದೇವ ಹಿರೆಕುರುಬರ, ಕಾಮೇಶ್ ಪಾಟೀಲ, ಪ್ರಭು ಕೋಳಿ, ರಾಜು ಶಿಂಗೆ, ರಫೀಕ್ ಮಕಾನದಾರ, ರಮೇಶ್ ಜೂಡಪಕರ, ದಶರಥ ಬನಸೋಡೆ ಇತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X