ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಕೂಲಿ ಕೆಲಸಕ್ಕೆ ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪ್ಯಾಜೋ ಆಟೋ ಪಲ್ಟಿಯಾಗಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಳೂರು ಗ್ರಾಮದ ಮಾಲಾ ಖಾದರಬಾಷಾ ಹವಾಲ್ದಾರ್ (45) ಎಂಬ ಮಹಿಳೆ ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ರಾಜ್ಯ ಹೆದ್ದಾರಿಯಲ್ಲಿ ಓವರಟೇಕ್ ಮಾಡಲು ಹೋಗಿ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ನವೆಂಬರ್ 10ರಂದು ತಂಗಡಗಿ ಕೃಷ್ಣಾ ನದಿ ಬಳಿಯ ಅಮರಗೋಳ ತಿರುವಿನಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 10ಜನ ಕಾರ್ಮಿಕರು ಗಾಯಗೊಂಡಿದ್ದಾರೆ.
ಈ ವರದಿ ಓದಿದ್ದೀರಾ? ಹಾವೇರಿ ಗದಗ ಸೇರಿದಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ
ಬಾಗಲಕೋಟ ಜಿಲ್ಲೆ ಹುನಗುಂದ ತಾಲೂಕು ವ್ಯಾಪ್ತಿಯ ಕೂಡಲಸಂಗಮದ ಜಮೀನುಗಳಲ್ಲಿ ಈರುಳ್ಳಿ ಬಿಡಿಸಲು 25 ಕ್ಕೂ ಹೆಚ್ಚು ಕಾರ್ಮಿಕರನ್ನು ಪ್ಯಾಜೋ ಆಟೋದಲ್ಲಿ ಕರೆದೊಯ್ಯಲಾಗುತ್ತಿದ್ದು, ಗಾಯಾಳುಗಳು ತಂಗಡಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.