ವಿಜಯಪುರ | ಪ್ರತಿಯೊಬ್ಬರಲ್ಲೂ ಪರಿಸರ ಬೆಳೆಸುವ ಜಾಗೃತಿ ಮೂಡಿಸಬೇ‌ಕು: ಶಾಸಕ ಯಶವಂತರಾಯ ಗೌಡ ಪಾಟೀಲ

Date:

Advertisements

ನಮಗೆ ಅನ್ನ ನೀಡುವುದೇ ಪರಿಸರ, ಹಾಗಾಗಿ ಪ್ರತಿಯೊಬ್ಬರಲ್ಲೂ ಪರಿಸರ ಬೆಳೆಸುವ ಜಾಗೃತಿ ಮೂಡಿಸಬೇಕಾಗಿದೆ ಎಂದು ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಅಭಿಪ್ರಾಯಪಟ್ಟರು.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೊಳೂರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾವಳಸಂಗ ಗ್ರಾಮದ ಅರಣ್ಯವಲಯದಲ್ಲಿ ಯಶವಂತರಾಯಗೌಡ ಪಾಟೀಲ್ ಫೌಂಡೇಶನ್(ರಿ) ಪಡನೂರ, ಸಾಮಾಜಿಕ ಮತ್ತು ಇಂಡಿ ಪ್ರಾದೇಶಿಕ ಅರಣ್ಯ ವಲಯ(ಅರಣ್ಯ ಇಲಾಖೆ) ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು.

“ಕಾಲ್ತುಳಿತದಲ್ಲಿ ಮೃತಪಟ್ಟ ಕ್ರೀಡಾ ಅಭಿಮಾನಿಗಳ ಆತ್ಮಕ್ಕೆ ಶಾಂತಿ ಸಿಗಲೆಂದು 2 ನಿಮಿಷ ಮೌನಾಚರಣೆ ಮಾಡಲಾಯಿತು. ನಾಡಗೀತೆ ಹಾಡುವುದರ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು.

Advertisements

ಶಾಸಕ ಯಶವಂತರಾಯಗೌಡ ಪಾಟೀಲ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಸಾಮಾಜಿಕ ಅರಣ್ಯ ವಲಯ ಹಾಗೂ ಪ್ರಾದೇಶಿಕ ಅರಣ್ಯವಲಯ ಅಧಿಕಾರಿಗಳ ಸೇವೆಗೆ ಅಭಿನಂದನೆ ವ್ಯಕ್ತಪಡಿಸಿದರು.

ಭೂ ವಿಜ್ಞಾನ ಅಧಿಕಾರಿಗಳ ಜತೆ ಮಾತನಾಡಿ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಸಿದ್ದೇಶ್ವರ ಮಹಾಸ್ವಾಮೀಜಿ ಅವರ ಆಶೀರ್ವಾದದಿಂದ ಈ ಸಾವಲಸಂಗ ಗುಡ್ಡಕ್ಕೆ ನೀರು ಆಗಿದೆ. ನಮಗೆ ಬರುತ್ತಿರುವ ನೀರನ್ನು ನಾವೆಲ್ಲ ಸರಿಯಾದ ರೀತಿ ಸದುಪಯೋಗಪಡಿಸಿಕೊಂಡಿದ್ದೆ ಆದಲ್ಲಿ ನಮ್ಮ ಇಡೀ ವಿಜಯಪುರ ಜಿಲ್ಲೆಯ ಅಭಿವೃದ್ಧಿ ಆಗುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಜೂ.12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಡೋಮನಾಳದ ಎನ್‌ ಡಿ ಪಾಟೀಲ, ಮುಖ್ಯ ಅತಿಥಿಗಳಾಗಿ ಬಾದಾಮಿಯ ಎಸ್ ಎಚ್ ವಾಸನ್, ಅರಣ್ಯ ಇಲಾಖೆಯ 1 ಡಿಎಫ್‌ಒ ವನಿತಾ ಆರ್, ವಿಜಯಪುರದ ಡಿಎಫ್‌ಒ ಶಿವಶರಣಯ್ಯ ಕೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಇಂಡಿಯ ಕಂದಾಯ ಉಪ ವಿಭಾಗಾಧಿಕಾರಿ ಅನುರಾಧ ವಸ್ತ್ರದ, ಇಂಡಿ ತಹಶೀಲ್ದಾರ್ ಬಿ ಎಸ್ ಕಡಕಭಾವಿ, ಚಡಚಣ ತಹಶೀಲ್ದಾರ್ ಎಸ್ ಬಿ ಇಂಗಳೆ, ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಂದೀಪ ರಾಠೋಡ, ಚಡಚಣ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ ಖಡಗೇಕರ, ವಿಜಯಪುರದ ಪ್ರವಾಸೋದ್ಯಮ ಇಲಾಖೆ ಉಪನಿರ್ದೆಶಕ ಮಲ್ಲಿಕಾರ್ಜುನ ಭಜಂತ್ರಿ, ಚಡಚಣ ಕ್ಷೇತ್ರ ಸಮನ್ವಯಾಧಿಕಾರಿ ಸುಜಾತಾ ಹುನ್ನೂರ, ಎಸ್ ಆರ್ ನಡುಗಡ್ಡಿ, ಇಂಡಿ ಕೃಷಿ ಇಲಾಖೆ ಸಾಹಯಕ ನಿರ್ದೇಶಕ ಮಹಾದೇವಪ್ಪ ಏವೂರ, ಇಂಡಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೆಶಕ ಎಚ್ ಎಸ್ ಪಾಟೀಲ, ಇಂಡಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮೇಶ ಲಮಾಣಿ, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ತಾಂತ್ರಿಕ ಸಂಯೋಜಕರು ಸಾಹೀಲ್ ದನಶೆಟ್ಟಿ ಇಂಡಿ ಮತ್ತು ಚಡಚಣ ತಾಲೂಕಿನ ಶಾಲಾ ಶಿಕ್ಷಕರ ಮತ್ತು ವಿದ್ಯಾರ್ಥಿಗಳು ಹಾಗೂ ಇಂಡಿ-ಚಡಚಣ ತಾಲೂಕಿನ ಎಲ್ಲ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಪಂಚಾಯಿ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X