ವಿಜಯಪುರ | ಮಾ.11ರಂದು ʼಬಹುಜನರ ನಡೆ ಪಾರ್ಲಿಮೆಂಟ್ ಕಡೆʼ ಸಮಾವೇಶ

Date:

‘ಬಹುಜನರ ನಡೆ ಪಾರ್ಲಿಮೆಂಟ್ ಕಡೆಗೆ’ ವಿಭಾಗ ಮಟ್ಟದ ಸಮಾವೇಶ ಮಾರ್ಚ್ 11ರ ಬೆಳಿಗ್ಗೆ 11ಕ್ಕೆ ವಿಜಯಪುರ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಎಸ್‌ಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಕಲ್ಲಪ್ಪ ತರವಿ ಹೇಳಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿ, “ವಿಜಯಪುರ ಆಕಾಶವಾಣಿ ಕೇಂದ್ರದ ಹತ್ತಿರವಿರುವ ವಿಜಯ ಫಂಕ್ಷನ್ ಹಾಲ್‌ನಲ್ಲಿ ನಡೆಯಲಿದ್ದು, ಸಾವಿರಾರು ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

“ಬಿಎಸ್‌ಪಿ ಕರ್ನಾಟಕ ರಾಜ್ಯ ಉಸ್ತುವಾರಿ ಹಾಗೂ ರಾಜ್ಯಸಭಾ ಸದಸ್ಯ ರಾಮ್ ಜಿ ಗೌತಮ್, ಬಿಎಸ್‌ಪಿ ರಾಜ್ಯ ಘಕಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಸಮಾವೇಶ ಉದ್ಘಾಟಿಲಿದ್ದಾರೆ. ಬಿಎಸ್‌ಪಿ ರಾಜ್ಯ ಸಂಯೋಜಕ ನಿತಿನ್ ಸಿಂಗ್, ಎಂ ಗೋಪಿನಾಥ್, ಎಂ ಕೃಷ್ಣಮೂರ್ತಿ ಉಪಸ್ಥಿತರಿರುತ್ತಾರೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಎಸ್‌ಪಿ ಜಿಲ್ಲಾ ಉಸ್ತುವಾರಿ ಕಾಶಿನಾಥ್ ದೊಡ್ಮನಿ ಮಾತನಾಡಿ, “ಸಂವಿಧಾನ ಜಾರಿಗೆ ಬಂದು ಹಲವು ದಶಕಗಳೇ ಕಳೆದರೂ ಈವರೆಗೆ ಸಂವಿಧಾನದ ಆಶಯಗಳು ಸಂಪೂರ್ಣವಾಗಿ ಅನುಷ್ಠಾನಕ್ಕೆ ಬಂದಿಲ್ಲ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಚುನಾವಣೆ ಬಂದಾಗ ಮಾತ್ರ ಸಂವಿಧಾನದ ರಕ್ಷಣೆ ಬಗ್ಗೆ ಮಾತನಾಡುತ್ತವೆ. ಅಧಿಕಾರಕ್ಕೆ ಬಂದ ನಂತರ ಅದನ್ನು ಮರೆತು ಬಿಡುತ್ತವೆ. ಯಾವ ಸರ್ಕಾರವೂ ಸಂವಿಧಾನದ ಆಶಯಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲು ಪ್ರಾಮಾಣಿಕವಾದ ಪ್ರಯತ್ನ ಮಾಡಿಲ್ಲ” ಎಂದು ಆರೋಪಿಸಿದರು.

“ಬಹುಜನ ಸಮಾಜ ಪಕ್ಷ ಸಂವಿಧಾನದ ಸಂರಕ್ಷಣೆ ಮತ್ತು ಸಂಪೂರ್ಣ ಜಾರಿಗಾಗಿ ನಿರಂತರ ಹೋರಾಟ ಮಾಡುತ್ತಾ ಬಂದಿದೆ. ಈಗ ಜಾಗೃತರಾಗಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಟಿಕೆಟ್‌ ಜಿದ್ದಾಜಿದ್ದಿ ಜೋರು

“ಮುಂಬರುವ ಲೋಕಸಭಾ ಚುನಾವಣೆಗೆ ಬಹುಜನ ಸಮಾಜ ಪಾರ್ಟಿ ರಾಜ್ಯದ 28 ಕ್ಷೇತ್ರಗಳಿಗೆ ಕಣಕ್ಕೆ ಇಳಿಸಲಾಗುವದು, ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುವುದು. ಆದರೆ ಇನ್ನು ಅಭ್ಯರ್ಥಿ ಯಾರಾಗುತ್ತಾರೆ ಎಂಬುದು ಇನ್ನು ನಿರ್ಧಾರವಾಗಿಲ್ಲ” ಎಂದು ಹೇಳಿದರು.

ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತ್ ಬೊಮ್ಮನಜೋಗಿ, ಸಂಘಟನಾ ಕಾರ್ಯದರ್ಶಿ ನಿತಿಸ್ ತೊರವಿ, ಖಜಾಂಚಿ ಸುರೇಶ್ ಚೂರಿ, ಜಿ ಬಿ ಡವಳಗಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...

ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ...

ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ...