ವಿಜಯಪುರ | ಬಗರ್ ಹುಕುಂ ಸಾಗುವಳಿದಾರರ ಹಕ್ಕುಪತ್ರಕ್ಕೆ ಆಗ್ರಹಿಸಿ ʼಬೆಂಗಳೂರು ಚಲೋʼ

Date:

ರಾಜ್ಯದ ದುಡಿಯುವ ಜನರಿಗೆ ಅದರಲ್ಲೂ ಬಗರ್ ಹುಕುಂ ಸಾಗುವಳಿದಾರರ ಭೂಮಿಯ ಹಕ್ಕುಪತ್ರಕ್ಕೆ ಆಗ್ರಹಿಸಿ ನ.26 ಮತ್ತು 27ರಂದು ʼಬೆಂಗಳೂರು ಚಲೋʼ ಎಂಬ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಹೇಳಿದರು.

- Advertisement -

ವಿಜಯಪುರ ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆಗೆ ಪರಿಹಾರವಾಗಿ ಒನ್ ಟೈಮ್ ಸೆಟಲ್ಮೆಂಟ್ ಜಾರಿ ಮಾಡುವ ಮೂಲಕ ಭೂಮಿ ಹಕ್ಕು ಮಾನ್ಯ ಮಾಡಬೇಕು. ಸಮಗ್ರ ಮೇಘ ವಸತಿ ಯೋಜನೆ ಘೋಷಣೆ ಆಗಬೇಕು. ಅರಣ್ಯ ಕಾಯ್ದೆಯಡಿ ಅರಣ್ಯ ವಾಸಿಗಳಿಗೂ ನ್ಯಾಯ ಬದ್ಧ ಹಕ್ಕು ಸಿಗಬೇಕು. ಬಲವಂತದ ಹಾಗೂ ಫಲವತ್ತಾದ ಜಮೀನುಗಳ ಭೂಸ್ವಾಧೀನ ಪ್ರಕ್ರಿಯೆಗಳು ರದ್ದಾಗಲಿ. ಬಲಾಢ್ಯರ ಪರವಾದ ಭೂ ತಿದ್ದುಪಡಿ ಕಾಯ್ದೆ 2022 ರದ್ದಾಗಬೇಕು” ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ರಾಜ್ಯ ಸಮಿತಿ ಸದಸ್ಯ ಮರಿಯಪ್ಪ ಮಾತನಾಡಿ, “ಉಳುಮೆಗೆ ಮಾತ್ರವಲ್ಲ ನೆತ್ತಿಯ ಮೇಲೊಂದು ಸೂರೂ ಇಲ್ಲವಾಗಿದೆ. ಸತ್ತ ಮೇಲೂ ಹೂಳಲು ಪರದಾಡುವ ಪರಿಸ್ಥಿತಿ ಇದೆ. ಭೂಮಿಯೆಲ್ಲಾ ಬಲಾಢ್ಯರ, ಕಂಪನಿಗಳ ಕೈಯಲ್ಲಿದೆ. ಆದರೂ ಅವರ ತಣಿಯದ ದಾಹಕ್ಕಾಗಿ ಭೂ ಕಾಯ್ದೆಗೆ ತಿದ್ದುಪಡಿ ತಂದು ಕೃಷಿಯೇತರರೂ ಮನಸೋ ಇಚ್ಛೆ ಭೂಮಿ ಖರೀದಿಸಲು ಅವಕಾಶ ನೀಡಲಾಗಿದೆ. ಅಭಿವೃದ್ಧಿಯ ಹೆರಿನಲ್ಲಿ ರೈತರ ಬಳಿ ಇದ್ದಬದ್ದ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ. ಬಡವರ ಪರ ಆಡಳಿತ ನೀಡುತ್ತೇವೆಂದು ಬಂದ ರಾಜ್ಯದ ಕಾಂಗ್ರೆಸ್ ಸರಕಾರ ಸಹ ಇದೇ ಹಾದಿಯಲ್ಲಿ ನಡೆಯುತ್ತಿದೆ. ‘ಬಾಯಲ್ಲಿ ಬಡವರ ಪರ ಮನದಲ್ಲಿ ಬಲಾಡ್ಯರು’ ಎಂಬಂತೆ ನಡೆದುಕೊಳ್ಳುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿಜಯಪುರ | ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ವಿರೋಧಿಸಿ ರಂಗೋಲಿ ಚಳವಳಿ

ಭುವನೇಶ್ವರಿ ಕಾಂಬಳೆ ಮಾತನಾಡಿ,” ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರಕಾರ ಆದಿವಾಸಿಗಳನ್ನೂ ಬಿಡದೆ ಬೀದಿಗೆ ತಳ್ಳುತ್ತಾ ಲಕ್ಷಾಂತರ ಎಕರೆ ಭೂಮಿಗಳನ್ನು ದೇಶದ ಅತ್ಯಂತ ಲೂಟಿಕೋರ ಅಂಬಾನಿ-ಅದಾನಿಗಳಿಗೆ ಮತ್ತು ವಿದೇಶಿ ಕಂಪನಿಗಳಿಗೆ ಗಣಿಗಾರಿಕೆ ಮಾಡಲು ಅನುವು ಮಾಡಿಕೊಡುವ ಮೂಲಕ ಬಕಾಸುರನ ಪಾತ್ರ ವಹಿಸುತ್ತಿದೆ. ದೇಶಪ್ರೇಮದ ಹೆಸರಲ್ಲಿ ವಿದೇಶಿಗರ ಸೇವೆಯಲ್ಲಿ ನಿರತವಾಗಿದೆ ಮೋದಿ ನೇತೃತ್ವದ ಸರಕಾರ. ರಾಜ್ಯದ ದುಡಿಯುವ ಜನರಿಗೆ ಅದರಲ್ಲೂ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿಯ ಹಕ್ಕುಪತ್ರ ನೀಡಲು ಭೂಮಿ ಮಂಜೂರಾತಿ ಸಮಿತಿಗಳನ್ನು ಸರ್ಕಾರ ರಚಿಸಿದ್ದರೂ ಕಾಲಕಾಲಕ್ಕೆ ಸರಿಯಾಗಿ ಸಭೆಗಳಾಗದೆ, ಮಂಜೂರಾತಿಯೂ ಆಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ವಿಜಯಪುರ ಜಿಲ್ಲೆಯ ಭೂಮಿ ಮತ್ತು ವಸತಿ ವಂಚಿತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿಕೊಂಡರು.

ಪತ್ರಿಕಾಗೋಷ್ಠಿಯಲ್ಲಿ ಚನ್ನು ಕಟ್ಟಿಮನಿ, ಚಿದಾನಂದ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...