ವಿಜಯಪುರ | ವರದಕ್ಷಿಣೆ ಪಿಡುಗು ಬಹಿಷ್ಕರಿಸಿದ ಬಂಜಾರ ಸಮುದಾಯ

Date:

ಬಂಜಾರ ಸಮಾಜದಲ್ಲಿ ವರದಕ್ಷಿಣೆ ಪದ್ಧತಿ ನಿರ್ಮೂಲನೆ ಹಾಗೂ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ವಿಜಯಪುರ ನಗರದ ಬಂಜಾರ ಭವನದಲ್ಲಿ ರಾಷ್ಟ್ರೀಯ ಬಂಜಾರ ಪರಿಷತ್, ರಾಷ್ಟ್ರೀಯ ಲಕ್ಕಿಶಾ ಪರಿಷತ್ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜನಜಾಗೃತಿ ಸಮಾವೇಶ ನಡೆಯಿತು.

- Advertisement -

ರಾಜ್ಯಾಧ್ಯಕ್ಷ ಪ್ರಕಾಶ ಬಾಳು ಚವ್ಹಾಣ ಮಾತನಾಡಿ, “ವರದಕ್ಷಿಣೆ ಪಿಡುಗಿನಿಂದ ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದು, ಮಕ್ಕಳ ಶಿಕ್ಷಣಕ್ಕೂ ಧಕ್ಕೆಯಾಗುತ್ತಿದೆ. ಈ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಸಮಾಜದ ಎಲ್ಲರೂ ಕೈಜೋಡಿಸಬೇಕು” ಎಂದು ಕರೆ ನೀಡಿದರು.

ಸಮಾವೇಶದಲ್ಲಿ ಸಮಾಜದ ಮುಖಂಡರು ವರದಕ್ಷಿಣೆ ವಿರೋಧಿ ಪ್ರತಿಜ್ಞೆ ಸ್ವೀಕರಿಸಿ, ಭವಿಷ್ಯದಲ್ಲಿ ವರದಕ್ಷಿಣೆ ಪದ್ಧತಿಯನ್ನು ಧಿಕ್ಕರಿಸುವ ಐತಿಹಾಸಿಕ ನಿರ್ಣಯ ಕೈಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಚಿತ್ರದುರ್ಗದ ಬಂಜಾರ ಪೀಠದ ಧರ್ಮಗುರು ಸರ್ದಾರ ಸೇವಾಲಾಲ ಮಾತನಾಡಿ, “ವರದಕ್ಷಿಣೆ ಸಮಾಜಕ್ಕೆ ಕಂಟಕವಾಗಿದ್ದು, ಅದನ್ನು ನಿರ್ಮೂಲನೆ ಮಾಡಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮುಂಚೂಣಿಗೆ ಬರಬೇಕು” ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಪ್ರಕಾಶ ಚವ್ಹಾಣ ಅವರ ಸಾಮಾಜಿಕ ಕಾಳಜಿಯ ಕಾರ್ಯವನ್ನು ಶ್ಲಾಘಿಸಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಸಮಾವೇಶದಲ್ಲಿ ಧರ್ಮಗುರುಗಳು, ಮಾಜಿ ಶಾಸಕರು, ಸಮಾಜದ ಮುಖಂಡರು ಹಾಗೂ ಜಿಲ್ಲೆಯ ವಿವಿಧ ತಾಂಡಾಗಳ ನಾಯಕರು, ಕಾರಬಾರಿಗಳು ಮತ್ತು ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಸಮಾಜಸೇವಕ ಸುರೇಶ ಬಿಜಾಪುರ ನೆರವೇರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...

ಚಿಕ್ಕಮಗಳೂರು | ಅರಣ್ಯ ಕಾಯ್ದೆ: ಭೂಮಿ, ವಸತಿ ಇಲ್ಲದೆ ಜನರ ಬದುಕು ಕಷ್ಟ; ಟಿ.ಡಿ ರಾಜೇಗೌಡ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...