ವಿಜಯಪುರ | ‌ʼಶೋಷಣೆ ರಹಿತ ಸಮಾಜದ ಕನಸು ಕಂಡಿದ್ದವರು ಭಗತ್‌ಸಿಂಗ್ʼ

Date:

ಕ್ರಾಂತಿಕಾರಿ ಭಗತ್‌ಸಿಂಗ್ ಕೇವಲ ಸ್ವಾತಂತ್ರ್ಯದ ಕನಸು ಕಾಣಲಿಲ್ಲ, ಬದಲಾಗಿ ಬ್ರಿಟಿಷರ ನಂತರ ದೇಶದಲ್ಲಿ ಶೋಷಣೆ ರಹಿತ ಸಮಾಜವನ್ನು ಸ್ಥಾಪಿಸುವ ಕನಸು ಕಂಡಿದ್ದರು ಎಂದು ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಯೂತ್‌ ಆರ್ಗನೈಸೇಷನ್‌ (ಎಐಡಿವೈಒ) ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಹೇಳಿದರು.

- Advertisement -

ವಿಜಯಪುರ ನಗರದ ಬೇಗಂ ತಲಾಬ್ ಪಾರ್ಕ್‌ನಲ್ಲಿ ಎಐಡಿವೈಒ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ಭಗತ್‌ಸಿಂಗ್ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಶಹೀದ್ ಭಗತಸಿಂಗ್. ಗಾಂಧೀಜಿ ಸಂಧಾನಪರ ಪಂಥದ ನಾಯಕರಾದರೆ, ಭಗತಸಿಂಗ್ ನೇತಾಜಿ ಅವರು ಸಂಧಾನರಹಿತ ಪಂಥದ ಅಗ್ರಗಣ್ಯ ನಾಯಕರಾಗಿದ್ದರು. ಇರ್ವಿನ್ ಒಪ್ಪಂದದಲ್ಲಿ ಗಾಂಧೀಜಿಯವರು ಭಗತಸಿಂಗ್, ಸುಖದೇವ, ರಾಜಗುರು ಅವರ ಹೆಸರನ್ನು ಸೇರಿಸದೆ ಇದ್ದಾಗ ನೇತಾಜಿ ಅವರು ಹೆಸರು ಸೇರಿಸಲು ಒತ್ತಾಯಿಸಿದರು. ಆದರೆ ಗಾಂಧೀಜಿ ಭಗತಸಿಂಗ್ ಹಾಗೂ ಅವರ ಅನುಯಾಯಿಗಳನ್ನು ಗೂಂಡಾಗಿರಿಯ ಸಂಕೇತವೆಂದು ಕರೆದರು. ಆದರೆ, ನೇತಾಜೆ ಭಗತ್ ಸಿಂಗ್ ಅವರನ್ನು ದೇಶದ ಸ್ವಾಭಿಮಾನದ ಸಂಕೇತ. ದೇಶದ ಕ್ರಾಂತಿಯ ಸಂಕೇತ ಎಂದು ಕರೆದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಸಿದ್ರಾಮ ಹಿರೇಮಠ ಮಾತನಾಡಿ, “ಈ ದೇಶದಲ್ಲಿ ಮಾನವನಿಂದ ಮಾನವನ
ಶೋಷಣೆ ಕೊನೆಗೊಂಡು ಎಲ್ಲರೂ ಶಿಕ್ಷಣ, ಉದ್ಯೋಗ ಭದ್ರತೆ ಪಡೆಯುವಂತಾಗಲಿ ಎಂಬ ಕನಸನ್ನು ಭಗತ್‌ಸಿಂಗ್ ಕಂಡರು. ಅಂತಹ ಸಮಾಜವಾದಿ ಭಾರತದ ಕನಸನ್ನು ನನಸು ಮಾಡುವ ಜವಾಬ್ದಾರಿ ಇಂದು ನಮ್ಮ ಮೇಲಿದೆ. ಇಂದಿನ ಯುವಜನರು ಅವರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು. ಇಂದು ಸಮಾಜದಲ್ಲಿ ಯುವಜನರು ಆನ್‌ಲೈನ್ ಗೇಮ್, ಅಶ್ಲೀಲ ಸಿನಿಮಾ-ಸಾಹಿತ್ಯಗಳಿಗೆ ಬಲಿಯಾಗುತ್ತಿದ್ದಾರೆ. ಈ ಬಂಡವಾಳಶಾಹಿ ವ್ಯವಸ್ಥೆಯ ಆಳ್ವಿಕರು ಯುವಜನರ ಬೆನ್ನೆಲುಬು ಮುರಿಯುವ ಹುನ್ನಾರಗಳನ್ನು ಮಾಡುತ್ತಿದ್ದಾರೆ. ಯುವಜನರು ಜಾತಿ-ಧರ್ಮಗಳ ಮೂಲಕ ಒಡೆಯದೆ ಒಗ್ಗಟ್ಟಾಗಿ ಈ ವ್ಯವಸ್ಥೆಯನ್ನು, ಈ ಹುನ್ನಾರವನ್ನು ಸೋಲಿಸಬೇಕೆಂದು” ಕರೆ ನೀಡಿದರು.

ಇದನ್ನೂ ಓದಿ: ವಿಜಯಪುರ | ಏ.1ರಿಂದ ₹10,000 ಗೌರವಧನ ನೀಡುವಂತೆ ಆಶಾ ಕಾರ್ಯಕರ್ತೆಯರ ಆಗ್ರಹ

ಜಿಲ್ಲಾ ಅಧ್ಯಕ್ಷ ಶ್ರೀಕಾಂತ ಕೊಂಡಗೂಳಿ, ಉಪಾಧ್ಯಕ್ಷ ಅಶೋಕದೇಸಾಯಿ, ರಮೇಶ, ವಿರೂಪಾಕ್ಷಿ ಮುಂತಾದವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...