ವಿಜಯಪುರ | ಭೀಮಾ ನದಿಯ ರೌದ್ರ ರೂಪ; ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

Date:

Advertisements

ಕಳೆದ ಐದು ದಿನಗಳಿಂದ ತೀವ್ರವಾಗಿದ್ದ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಭೀಮಾ ನದಿಯ ಪ್ರವಾಹ ಪರಿಸ್ಥಿತಿ ಶುಕ್ರವಾರ ಮತ್ತಷ್ಟು ರೌದ್ರ ರೂಪ ತಾಳಿದೆ. ನದಿಯ ನೀರು ತಗ್ಗು ಪ್ರದೇಶಗಳು ಮತ್ತು ಹೊಲಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಳಿಸಿದೆ.

ದೇವಣಗಾವ ಸಮೀಪದ ಸೊನ್ನ ಬ್ಯಾರೇಜ್‌ನಲ್ಲಿ 3.50 ಲಕ್ಷ ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, 28 ಗೇಟ್‌ಗಳ ಮೂಲಕ ಸಮಾನ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎನ್ಎನ್ಎಲ್ಎ ಕಾರ್ಯನಿರ್ವಾಹಕ ಇಂಜಿನಿಯರ್ ಸಂತೋಷಕುಮಾರ ಸಜ್ಜನ್ ತಿಳಿಸಿದ್ದಾರೆ. ತಾರಾಪುರ, ಕಡ್ಲೆವಾಡ, ಶೇಂಬೆವಾಡ, ತಾವರಖೇಡ ಮತ್ತು ಬ್ಯಾಡಗಿಹಾಳ ಗ್ರಾಮಗಳ ರಸ್ತೆಗಳಲ್ಲಿ ನೀರು ತುಂಬಿ ಸಂಪರ್ಕ ಕಡಿತಗೊಂಡಿದೆ. ದೇವಣಗಾಂವ ಗ್ರಾಮದಲ್ಲಿನ ಹನುಮಾನ್, ಅಂಬಿಗರ ಚೌಡಯ್ಯ ಮತ್ತು ಶಾಂತೇಶ್ವರ ದೇವಸ್ಥಾನಗಳು ಸೇರಿದಂತೆ ಅನೇಕ ಮನೆಗಳು ನೀರಿನಲ್ಲಿ ಮುಳುಗಿವೆ.

ದೇವಣಗಾಂವ–ಆಲಮೇಲ ರಸ್ತೆಯ ಪಕ್ಕದಲ್ಲಿ ನೀರು ತುಂಬಿ ನಿಂತಿದ್ದು, ನೀರಿನ ಮಟ್ಟ ಇನ್ನಷ್ಟು ಏರಿದರೆ ಕಲಬುರಗಿ–ವಿಜಯಪುರ ಮುಖ್ಯರಸ್ತೆಯ ಸಂಪರ್ಕವೂ ಕಡಿತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಮಸಾಗಿ ಗ್ರಾಮದ ಅಂಚಿನಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ. ತಗ್ಗು ಆಗೋ ಹಳ್ಳ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ನೀರು ನುಗ್ಗಿ ಹತ್ತಿ, ತೊಗರಿ, ಕಬ್ಬು ಬೆಳೆಗಳು ನೀರಿನಲ್ಲಿ ನಿಂತಿವೆ. ಭೀಮಾ ತೀರದ ಕಡಣಿ, ಕುರುಬತಹಳ್ಳಿ, ಮಗ್ನಳ್ಳಿ, ಬಗಲೂರ, ಚಿಕ್ಕ ಹಾವಳಗಿ, ಕಕ್ಕಳಮೇಲಿ, ಶಿರಸಗಿ, ಕುಳಿ ಕುಮಟಗಿ ಗ್ರಾಮಗಳ ಜಮೀನುಗಳಲ್ಲಿ ನೀರು ನುಗ್ಗಿದ್ದು, ಬೆಳೆಗಳು ನೀರುಪಾಲಾಗಿವೆ.

ಇದನ್ನೂ ಒದಿ: ವಿಜಯಪುರ | ಕೇಂದ್ರ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ: ಅಮೂಲ್ಯ ನಿಧಿ

ಆಲಮೇಲ ತಹಶೀಲ್ದಾರ್ ಧನಪಾಲ ಶೆಟ್ಟಿ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಸಂತ್ರಸ್ತರಲ್ಲಿ ಧೈರ್ಯ ತುಂಬಿದರು. ದೇವಣಗಾಂವ ಪಿಡಿಒ ಸಂಜೀವ ಕುಮಾರ ದೊಡ್ಡಮನಿ, ಗ್ರಾಮ ಲೆಕ್ಕಾಧಿಕಾರಿ ಎಂಕೆ ಪೂಜಾರಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಭೇಟಿ ಸಂದರ್ಭದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X