ವಿಜಯಪುರ | ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಬೇಕು: ಕರವೇ

Date:

Advertisements

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಾಣಾ ವೇದಿಕೆ ಪದಾಧಿಕಾರಿಗಳು ವಿಜಯಪುರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಜಿಲ್ಲಾಧ್ಯಕ್ಷ ಎಂ ಸಿ ಮುಲ್ಲಾ ಮಾತನಾಡಿ, “ಹಿಂದಿ ಹೇರಿಕೆಗೆ ಕನ್ನಡದ ಮಕ್ಕಳ ಭವಿಷ್ಯ ಬಲಿಯಾಗುತ್ತಿದೆ. ತ್ರಿಭಾಷಾ ಸೂತ್ರದ ಕುರಿತು ರಾಷ್ಟಕವಿ ಕುವೆಂಪು ಅವರು ಹಿಂದೆಯೇ ತೀಕ್ಷ್ಣವಾದ ವಿರೋಧವನ್ನು ಸಾರಿದ್ದರು. ಕರ್ನಾಟಕ ಶಾಲೆಗಳಲ್ಲಿ ಭಾಷೆಯನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು. ತೃತೀಯ ಭಾಷೆ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಬೇಕು” ಎಂದು ಹೇಳಿದರು.

“ರಾಜ್ಯ ಮತ್ತು ಕೇಂದ್ರೀಯ ಶಿಕ್ಷಣ ವ್ಯವಸ್ಥೆಗಳಾದ ಸಿಬಿಎಸ್‌ಇ, ಐಸಿಎಸ್‌ಇ ಶಾಲೆಗಳಿಗೆ ಏಕರೂಪದ ದ್ವಿಭಾಷಾ ನೀತಿಯನ್ನು ಜಾರಿಗೋಳಸಬೇಕು. ಸಿಬಿಎಸ್‌ಇ ಶಾಲೆಗಳಲ್ಲೂ ಪ್ರಥಮ ಭಾಷೆಯಾಗಿ ಕನ್ನಡವನ್ನೇ ಕಡ್ಡಾಯಗೊಳಿಸಬೇಕು. ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ, ಉತ್ತಮ ಗುಣಮಟ್ಟದ ಇಂಗ್ಲಿಷ್ ಶಿಕ್ಷಣವನ್ನು ನೀಡಬೇಕು” ಎಂದು ಒತ್ತಾಯಿಸಿದರು.

Advertisements

ರಾಜ್ಯ ಸಂಚಾಲಕ ಸಂತೋಷ ಪಾಟೀಲ ಡಂಬಳ ಮಾತನಾಡಿ, “ತಮಿಳುನಾಡು 1968ರಿಂದಲೇ ತ್ರಿಭಾಷಾ ನೀತಿ ತಿರಸ್ಕರಿಸಿ ತಮಿಳು ಮತ್ತು ಇಂಗ್ಲೀಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ. ಕರ್ನಾಟಕವು ಇಂತಹ ಉದಾಹರಣಗಳಿಂದ ಸ್ಪೂರ್ತಿ ಪಡೆದು, ಕನ್ನಡ ಮತ್ತು ಆಂಗ್ಲ ಭಾಷೆಗಳಿಗೆ ಆದ್ಯತೆ ನೀಡುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ಪೊಲೀಸ್ ರಕ್ಷಣೆಯೊಂದಿಗೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾದ ದೂರುದಾರ

ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ಮಾತನಾಡಿದರು. ಫಯಾಜ ಕಲಾದಗಿ, ರಾಜು ಕಾಂಬರಿ, ರವಿ ಕಿತ್ತೂರು, ದಸ್ತಾಗಿರಿ ಸಾಲೊಟಗಿ, ಮುತ್ತು ಹಿರೇಮಠ, ಜೈಭೀಮ್ ಮುತ್ತಗಿ, ಅನುರಾಧ ಕಲಾಲ, ಕಸ್ತೂರಿ ಪೂಜಾರಿ, ಶ್ರೀಕಾಂತ ಬಿಜಾಪುರ್, ಎಚ್ ಎಸ್ ಕಬಾಡೆ, ಸಾಧಿಕ್ ಜನವಕರ, ದಾದಪಿರ್ ಮುಜವರ, ಆಶಿಫ್ ಪಿರವಾಲೆ, ದಯಾನಂದ ಸಾವಳಗಿ, ವಿನೋದ ದಳವಾಯಿ, ಮಲ್ಲನಗೌಡ ಪಾಟೀಲ, ಬಸವರಾಜ ಬಿ ಕೆ, ವಿಜಯಕುಮಾರ ಎಂಬತಾನಾಳ, ಮಂಜುನಾಥ ಹಿರೇಮಠ, ನಿಸಾರ್ ಬೆಫಾರಿ, ಹಣಮಂತ ಟಕ್ಕಳಿಕಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X