ವಿಜಯಪುರ | ಬಿಜೆಪಿ ಅಧರ್ಮ ಸಾರುತ್ತದೆ, ಕಾಂಗ್ರೆಸ್ ಧರ್ಮ ಬಿತ್ತುತ್ತಿದೆ: ಶಾಸಕ ಅಶೋಕ್ ಮನಗೂಳಿ

Date:

Advertisements

ಇದು ಧರ್ಮ, ಅಧರ್ಮದ ಮದ್ಯ ನಡೆಯುತ್ತಿರುವ ಚುನಾವಣೆ, ಬಿಜೆಪಿ ಅಧರ್ಮವನ್ನು ಸಾರುತ್ತದೆ, ಕಾಂಗ್ರೆಸ್ ಧರ್ಮವನ್ನು ಬಿತ್ತುತ್ತಿದೆ ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು.

ವಿಜಯಪುರ ಜಿಲ್ಲೆಯ ಸಿಂದಗಿಯ ಕಾಂಗ್ರೆಸ್ ಕಾರ್ಯಾಲಯದಲ್ಲಿ 18ನೇ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ಡಿ.ಜಿ. ಸಾಗರ್ ಬಣ) ಸಂವಿಧಾನ ಪ್ರಜಾಪ್ರಭುತ್ವ ವಿರೋಧಿ ಕೋಮುವಾದಿ ಪಕ್ಷವನ್ನು ಧಿಕ್ಕರಿಸಿ ಜನ ಪರ ಚಿಂತನೆಯನ್ನು ಹೋಂದಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮತದಾರರ ಜಾಗೃತಿ ಕರ ಪತ್ರವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಈ ಲೋಕಸಭಾ ಚುನಾವಣೆಯು ಕಾಂಗ್ರೆಸ್ ಹಾಗೂ ಬಿಜೆಪಿಯ ಮದ್ಯ ನಡೆಯುತ್ತಿರುವ ಚುನಾವಣೆ ಅಲ್ಲ. ಇದು ಧರ್ಮ ಅಧರ್ಮದ ಮದ್ಯ ನಡೆಯುತ್ತಿರುವ ಚುನಾವಣೆ. ಬಿಜೆಪಿ ಪಕ್ಷವು ಅಧರ್ಮವನ್ನು ಸಾರುತ್ತದೆ. ಕಾಂಗ್ರೆಸ್ ಪಕ್ಷವು ಧರ್ಮವನ್ನು ಜನರಲ್ಲಿ ಬಿತ್ತುತಿದೆ, ಸಂವಿಧಾನ, ಪ್ರಜಾಪ್ರಭುತ್ವ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳ ಮೇಲೆ ಕಾಂಗ್ರೆಸ್ ಪಕ್ಷವು ನಿಂತಿದೆ ಎಂದರು.

Advertisements

ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಲು, ಸಂವಿಧಾನದ ಆಶಯ ಜಾರಿ ಮಾಡಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ನಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಆಲಗೂರ ಅವರಿಗೆ ತಮ್ಮ ಮತ ಚಲಾಯಿಸಿ  ಗೆಲ್ಲಿಸಿ ತರಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ವೈ.ಸಿ. ಮಯೂರ್, ಕರ್ನಾಟಕದ ಸಿದ್ದರಾಮಯ್ಯ ಸರ್ಕಾರದ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಗೌರವ ನೀಡುವ, ದುರ್ಬಲ ವರ್ಗಗಳ, ಹಿಂದುಳಿದವರ ಹಾಗೂ ಅಲ್ಪಸಂಖ್ಯಾತರಹಿತ ಕಾಪಾಡುತ್ತಿದೆ ಎಂದರು.

ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಕೋಮುವಾದಿ  ಪಕ್ಷಗಳನ್ನು ದಿಕ್ಕರಿಸಿ ಜನಪರ ಚಿಂತನೆಯ ಪಕ್ಷ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಮತ ಚಲಾವಣೆ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ದಸಂ‌ಸ ತಾ.ಸಂಚಾಲಕ ಶರಣು ಚಲವಾದಿ, ಸಂಘಟನಾ  ಸಂಚಾಲಕ ನೀಲಕಂಠ ಹೂಸಮನಿ, ಪರಸು ಬ್ಯಾಕೋಡ, ಸಂಘಟನೆಯ ಹಿರಿಯರಾದ ಅಪ್ಪಾರಾಯ ಬಟವಾಲ, ಜೈ ಭೀಮ್ ತಳಕೇರಿ, ಶಿವುಕುಮಾರ ಗಣಿಹಾರ, ಸುನೀಲ್ ಸಂಗಟಾಣ, ಸುದೀರ್ ಬಟವಾಲ ಹಾಗೂ ನೂರಾರು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X