ವಿಜಯಪುರ | ರಾಜ್ಯದಲ್ಲಿ ಬಿಜೆಪಿ ಪರಿಸ್ಥಿತಿ ಮುಳುಗುತ್ತಿರುವ ಹಡಗಿನಂತಾಗಿದೆ: ಸಚಿವ ಎಂ ಬಿ ಪಾಟಿಲ್

Date:

ಚೈತ್ರಾ ಕುಂದಾಪು ಅವರು ಮತ್ತು ಇತರರು ಸೇರಿ ಟಿಕೆಟ್ ಮಾರಿಕೊಂಡು ಜನರಿಗೆ ಮೋಸ ಮಾಡಿದ್ದನ್ನು ನಾವು ನೋಡಿದ್ದೇವೆ. 40 ಪರ್ಸೆಂಟ್ ಕಮಿಷನ್ ಸರ್ಕಾರವನ್ನೂ ನಾವು ನೋಡಿದ್ದೇವೆ. ಈವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಾಗದ ದುಃಸ್ಥಿತಿ ಬಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟಿಲ್ ಹೇಳಿದರು.

- Advertisement -

ವಿಜಯಪುರದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಚೇರಿಯ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಎಲ್ಲರಿಗೂ ವಿಜಯದಶಮಿ ಶುಭಾಷಯ ತಿಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

“ವಿಧಾನಸಭಾ ಚುನಾವಣೆಯಲ್ಲಿ ಸೋಲಿನಿಂದ ಚೇತರಿಸಿಕೊಳ್ಳಲಾಗದೆ ಬಿಜೆಪಿ ನಾಯಕರು, ರಾಜ್ಯದ ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಕೊಳ್ಳಲಾಗದ ಪರಿಸ್ಥಿತಿಗೆ ಬಂದಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಪರಿಸ್ಥಿತಿ ಈಗಾಗಲೇ ಮುಳುಗಿ ಹೋಗಿರುವ ಹಡಗಿನಂತಾಗಿದೆ. ಹೀಗಾಗಿ ಈ ಪಕ್ಷಕ್ಕೆ ಭವಿಷ್ಯವಿಲ್ಲ” ಎಂದು ನುಡಿದರು.

ಮಹಾನಗರ ಪಾಲಿಕೆ ಸದಸ್ಯರುಗಳು ಪ್ರವಾಸದ ವಿಷಯಕ್ಕೆ ಉತ್ತರಿಸಿದ ಸಚಿವರು, “ಸ್ವಾಭಾವಿಕವಾಗಿ ಸದಸ್ಯರುಗಳನ್ನು ರಕ್ಷಣೆ ಮಾಡಬೇಕು. ಅವರಿಗೆ ತೊಂದರೆ ಆಗಬಾರದು. ಒತ್ತಾಯದಿಂದ ಯಾರನ್ನೂ ತೆಗೆದುಕೊಂಡು ಹೋಗಬಾರದು ಮತ್ತು ಅಹಿತಕರ ಘಟನೆ ನಡೆಯಬಾರದೆಂದು ಹಾಗೆ ಮಾಡಿರುತ್ತಾರೆ. ನಮ್ಮ ಪಕ್ಷಕ್ಕೆ ಬೆಂಬಲಿತ ಸದಸ್ಯನೊಬ್ಬನನ್ನು ಬಿಜೆಪಿ ಅವರು ವಿಶೇಷವಾಗಿ ನಗರದ ಶಾಸಕರು ಕರೆದುಕೊಂಡು ಹೋಗಿ ಅಡಗುತಾಣದಲ್ಲಿ ಇಟ್ಟಿದ್ದಾರೆಂಬ ಮಾಹಿತಿ ಇದೆ. ನಮಗೂ ಕೂಡ ಹಾಗೆ ಮಾಡಲು ಬರುತ್ತೆ. ಆದರೆ ನಾವು ಹಾಗೆ ಮಾಡಲ್ಲ. ನಾವು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟವರು ನಾವು ಚುನಾವಣೆಯಲ್ಲಿ ಗೆದ್ದು ತೋರಿಸುತ್ತೇವೆ” ಎಂದರು.

“ಮೇಯರ್, ಉಪಮೇಯರ್ ಆಯ್ಕೆ ಅಕ್ಟೋಬರ್ 30‌ಕ್ಕೆ ಗೊತ್ತಾಗುತ್ತದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಏನೂ ತೊಂದರೆಯಾಗುವುದಿಲ್ಲ. ಸೆಕ್ಯುಲರ್ ವೋಟುಗಳು ಜೆಡಿಎಸ್‌ಗೆ ಈವರೆಗೆ ಬರುತ್ತಿದ್ದವು. ಇನ್ನು ಮುಂದೆ ಸೆಕ್ಯುಲರ್ ವೋಟುಗಳು ಕಾಂಗ್ರೆಸ್ಸಿಗೆ ಬೀಳುತ್ತವೆ. ನಮಗೇನೂ ತೊಂದರೆಯಾಗುವುದಿಲ್ಲ” ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.

ಈ ಸುದ್ದಿ ಓದಿದ್ದೀರಾ? ಖಜಾನೆ ತುಂಬಿಸಿಕೊಳ್ಳುವ ದುರುದ್ದೇಶದಿಂದ ಕನಕಪುರ ಹೆಸರಲ್ಲಿ ಡಿಕೆಶಿ ಹೊಸ ನಾಟಕ: ಎಚ್‌ಡಿಕೆ ಕಿಡಿ

ಈ ಸಂದರ್ಭದಲ್ಲಿ ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ್ ಬಕ್ಷಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಆಲ್ಗೂರ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಮುಖಂಡರುಗಳಾದ ವಸಂತ ಹೋನಮೋಡೆ, ಸರಿತಾ ನಾಯಕ್, ಮರ್ತುಜ ಶಿರಬೂರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...