ಚುನಾವಣಾ ಕರ್ತವ್ಯದ ತರಬೇತಿಗೆ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, 12 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಪಘಾತದಲ್ಲಿ 17 ವರ್ಷದ ಯುವತಿ ಸಾವು
50 ಮಂದಿ ಚುನಾವಣಾ ಅಧಿಕಾರಿಗಳಿದ್ದ, ಕೆಎಸ್ಆರ್ಟಿಸಿ ಬಸ್ ಸಿಂದಗಿ ಪಟ್ಟಣದತ್ತ ತೆರಳುತ್ತಿತ್ತು. ಈ ವೇಳೆ ಆಕ್ಸೆಲ್ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.