ವಿಜಯಪುರ | ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಜ.22ರಂದು ಹೆದ್ದಾರಿ ಬಂದ್‌ಗೆ ಕರೆ

Date:

ಬರಗಾಲದಿಂದ ತತ್ತರಿಸಿ ಕಂಗಾಲಾಗಿರುವ ರೈತರಿಗೆ ಕಾಲುವೆಯ ನೀರು ಇಲ್ಲದೇ, ಬೆಳೆ ಒಣಗುತ್ತಿವೆ ಇರುವ ಅಲ್ಪಸ್ವಲ್ಪ ಬೆಳೆಗಳಿಗೆ ನೀರಿನ ಅವಶ್ಯಕತೆ ಇದೆ. ಕೂಡಲೇ ಕೋಲಾರ, ನಿಡಗುಂದಿ, ತಾಲೂಕಿನಲ್ಲಿರುವ ಮುಳವಾಡ ಏತನೀರಾವರಿಯ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ರೈತ ಸಂಘ ಹೆದ್ದಾರಿ ಬಂದ್‌ಗೆ ಕರೆಕೊಟ್ಟಿದೆ.

- Advertisement -

ಮಂಗಳವಾರದಂದು (ಜ.22) ರೈತರೊಂದಿಗೆ ಕೋಲಾರದ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ಮೂಲಕ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೋಲಾರ ತಾಲೂಕಾ ಅಧ್ಯಕ್ಷ ಸೋಮು ಬಿರಾದಾರ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ನಾರಾಯಣಪುರ ಆಣೆಕಟ್ಟಿನ ಎಡ ಹಾಗೂ ಬಲದಂಡೆಯ ಕಾಲುವೆಗಳಿಗೆ ನೀರು ಹರಿಸುತ್ತಿರುವುದು ಖುಷಿಯ ವಿಚಾರ, ಅದರಂತೆ ನಮ್ಮ ಬೆಳೆಗಳು ಉಳಿಯಬೇಕು ಜಾನುವಾರುಗಳಿಗೆ ಕುಡಿಯಲು ನೀರು ಬೇಕೆ ಬೇಕು. ಆದ್ದರಿಂದ ಜನೇವರಿ 22ರ ಒಳಗೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿದ್ದಾರೆ.

ಮಳೆಯ ಅಭಾವದಿಂದ ಇರುವ ಭಾವಿ, ಭೋರವೆಲ್‍ಗಳಲ್ಲಿ ನೀರಿಲ್ಲದೇ ಜಮೀನಿನಲ್ಲಿ ಇರುವ ಗೋಧಿ, ಕಡ್ಲಿ, ಶೇಂಗಾ, ಸೂರ್ಯಕಾಂತಿ, ಮೇಣಸಿನಕಾಯಿ ಸೇರಿದಂತೆ ವಿವಿಧ ಬೆಳೆಗಳು ಒಣಗುತ್ತಿವೆ, ರೈತ ಉಳಿಯಬೇಕಾದರೆ ಕಾಲುವೆಗೆ ನೀರು ಹರಿಸಬೇಕು ಇಲ್ಲವಾದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...