ವಿಜಯಪುರ | ಸರ್ಕಾರದ ಉದ್ದೇಶಿತ ನಿರ್ಲಕ್ಷ್ಯದಿಂದ ಜಾತಿಗಣತಿ ವಿಳಂಬ: ಮಾದಿಗ ಸಂಘ ಆರೋಪ

Date:

ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿಯಲ್ಲಿ ಸಾಕಷ್ಟು ಲೋಪದೋಷಗಳಿವೆ. ಸಮೀಕ್ಷೆಗೆಂದೇ ಅಭಿವೃದ್ಧಿ ಪಡಿಸಿದ ಆಪ್‌ ಕೂಡ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಸರ್ಕಾರ ಉದ್ದೇಶಿತ ನಿರ್ಲಕ್ಷ್ಯದಿಂದಲೇ ಜಾತಿಗಣತಿ ವಿಳಂಬವಾಗಿದೆ ಇದರಿಂದ ಮೀಸಲಾತಿಯೂ ವಿಳಂಬವಾಗುತ್ತದೆ ಎಂದು ರಾಜ್ಯ ಮಾದಿಗ ಸಂಘ ಆರೋಪಿಸಿದೆ. ದೋಷ ಸರಿಪಡಿಸುವಂತೆ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

- Advertisement -

“ಸುಪ್ರೀಂ ಕೋರ್ಟ್ ನೀಡಿರುವ ಆದೇಶಕ್ಕೂ ಬೆಲೆ ಕೊಡದ ಕಾಂಗ್ರೆಸ್ ಸರ್ಕಾರ ಕೆಲವು ಜಾತಿಗಳಿಗೆ ಮಾತ್ರ ಸೀಮಿತವಾಗಿರುವಂತೆ ತೋರುತ್ತಿದೆ.ಇಲ್ಲಿವರೆಗೆ ಶೇ.25ರಷ್ಟೂ ಸಮೀಕ್ಷೆ ಆಗಿಲ್ಲ. ಆಪ್‌ ಸರಿಯಾಗಿಲ್ಲ. ಪದೇ ಪದೇ ಸರ್ವರ್ ಬ್ಯುಸಿ ಆಗಿದೆ ಎಂದು ಕುಂಟು ನೆಪ ಹೇಳಿ ಗಣತಿಗೆ ಬಂದವರು ಸಮಯ ಕಳೆಯುತ್ತಿದ್ದಾರೆ. ಬೇಡ ಜಂಗಮ ಜಾತಿಯು ಅಧಿಕೃತವಾಗಿ ಪರಿಶಿಷ್ಟ ಪಟ್ಟಿಯಲ್ಲಿ ಇಲ್ಲದಿದ್ದರೂ ಪರಿಶಿಷ್ಟ ಪಟ್ಟಿಗೆ ಸೇರಿಸುತ್ತಿರುವುದು ಕಂಡುಬಂದಿದೆ. ಕೂಡಲೇ ಇದನ್ನು ಸರಿಪಡಿಸಬೇಕು” ಎಂದು ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಮೀಕ್ಷೆಗೆ ಇನ್ನು ಹೆಚ್ಚಿನ ಶಿಕ್ಷಕರನ್ನು ನೇಮಿಸಿ ತರಬೇತಿ ನೀಡಬೇಕು. ಸಮೀಕ್ಷೆಗೆ ನೀಡುವ ದಿನಗಳನ್ನು ಹೆಚ್ಚಿಗೆ ಮಾಡಬೇಕು. ಕಾಲಹರಣ ಮಾಡುವುದು ಬಿಟ್ಟು ಶೀಘ್ರವಾಗಿ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಬೇಕೆಂದು ಸಂಘದ ಮುಖಂಡರು ಆಗ್ರಹಿಸಿದರು.

ಇದನ್ನೂ ಓದಿ: ವಿಜಯಪುರ | ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ

ಈ ವೇಳೆ ಸುರೇಶ್ ಗಚ್ಚಿನಮನಿ, ಮಲ್ಲಿಕಾರ್ಜುನ ಹಳಿಮನಿ, ಮದನ ಕುಮಾರ ನಾಗರದಿನ್ನಿ , ನಾಗರಾಜ್ ಮಾದರ, ಮಲ್ಲು ಶೇಷಗಿರಿ, ಪ್ರಶಾಂತ್ ದೊಡ್ಡಮನಿ, ಸೋಮನಾಥ ದೊಡ್ಡಮನಿ, ವೇಕಟೇಶ ರತ್ನಾಕರ, ಆನಂದ ದೇವುರ, ವಿಜಯ್ ಮಾದರ, ಶಶಿ ಡವಳಗಿ, ದಲಿತ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...

ಬಾಗಲಕೋಟೆ | ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಗಮನಾರ್ಹ ಸೇವೆ...