ವಿಜಯಪುರ | ಕೇಂದ್ರ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ: ಅಮೂಲ್ಯ ನಿಧಿ

Date:

Advertisements

ಕೇಂದ್ರ ಸರ್ಕಾರವು ನೀತಿ ಆಯೋಗವನ್ನು ಮುಂದಿಟ್ಟುಕೊಂಡು ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ ಎಂದು ರಾಷ್ಟ್ರೀಯ ಜನಾರೋಗ್ಯ ಅಭಿಯಾನದ ಮುಖಂಡ ಹಾಗೂ ಮಧ್ಯಪ್ರದೇಶದ ಸಾಮಾಜಿಕ ಚಿಂತಕ ಅಮೂಲ್ಯ ನಿಧಿ ಆರೋಪಿಸಿದರು.

ವಿಜಯಪುರ ನಗರದ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಲ್ಲಿ ಖಾಸಗಿ ಸಹಭಾಗಿತ್ವ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಆಗ್ರಹಿಸಿ ಹೋರಾಟ ಸಮಿತಿಯು ನಡೆಸುತ್ತಿರುವ ಧರಣಿಯನ್ನು ಬೆಂಬಲಿಸಿ ಮಾತನಾಡಿದ ಅವರು, “ಕೋವಿಡ್ ನಂತರ ಆರೋಗ್ಯ ಸೇವೆಯನ್ನು ಒಂದು ಲಾಭದಾಯಕ ಉದ್ಯಮವಾಗಿ ಪರಿಗಣಿಸಿರುವ ಬಂಡವಾಳಶಾಹಿಗಳು, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಗುಣಮಟ್ಟದ ಸರ್ಕಾರಿ ಆಸ್ಪತ್ರೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಇಂಥ ಒಂದು ಕಾರ್ಯ ಯೋಜನೆ ಗುಜರಾತಿನಿಂದ ಪ್ರಾರಂಭವಾಗಿದೆ” ಎಂದು ಆರೋಪಿಸಿದರು.

“ಉತ್ತರ ಪ್ರದೇಶದಲ್ಲಿ 7 ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಒಡೆತನಕ್ಕೆ ಒಪ್ಪಿಸಲಾಗಿದೆ. ಮಧ್ಯಪ್ರದೇಶದಲ್ಲಿ 27 ಜಿಲ್ಲಾ ಆಸ್ಪತ್ರೆಗಳ ಖಾಸಗೀಕರಣಕ್ಕೆ ಜನರ ಪ್ರಬಲ ವಿರೋಧದಿಂದ ಬಿಜೆಪಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕಾಯಿತು. ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಲ್ಲೂ ಇಂತಹ ಹುನ್ನಾರ ನಡೆಯುತ್ತಿದ್ದು, ಜನತೆ ಸರ್ಕಾರದ ನೀತಿಗಳಿಗೆ ಕಡಿವಾಣ ಹಾಕಬೇಕಿದೆ. ಇಲ್ಲವಾದರೆ ಬಡ ಜನರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ತುಂಬಾ ದುಬಾರಿಯಾಗಲಿದೆ” ಎಂದರು.

ಇದನ್ನೂ ಓದಿ: ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡುವೆ: ಸಚಿವ ಶಿವಾನಂದ ಪಾಟೀಲ

ಈ ವೇಳೆ ವೇದಿಕೆಯ ಮೇಲೆ ವಿಜಯಪುರದ ಹೋರಾಟ ಸಮಿತಿಯ ಅನೇಕ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌...

Download Eedina App Android / iOS

X