ವಿಜಯಪುರ | ಕೇಂದ್ರ, ರಾಜ್ಯ ಸರ್ಕಾರಗಳು ಸಹಕಾರ ಕ್ಷೇತ್ರದ ಮೇಲೆ ಲಕ್ಷ್ಯ ತೋರುತ್ತಿಲ್ಲ: ಸಚಿವ ಶಿವಾನಂದ ಪಾಟೀಲ

Date:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರ ತತ್ವದ ಆಶಯಗಳನ್ನೇ ಮರೆತಿದ್ದಲ್ಲದೆ, ಸಹಕಾರ ಕ್ಷೇತ್ರದ ಮೇಲೆ ಲಕ್ಷ್ಯ ತೋರುತ್ತಿಲ್ಲ ಎಂದು ಜವಳಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ವಿಷಾದ ವ್ಯಕ್ತಪಡಿಸಿದರು.

- Advertisement -

ವಿಜಯಪುರ ಜಿಲ್ಲೆಯ ಸಿಂಧಗಿ ಪಟ್ಟಣದ ಅನ್ನಪೂರ್ಣ ಲೇಔಟ್‌ನಲ್ಲಿ ಮಂಗಳವಾರ ಸಂಜೆ ಸಿಂಧಗಿ-ಆಲಮೇಲ ದೇವರಹಿಪ್ಪರಗಿ ತಾಲೂಕಿನ ಪ್ರಾಥಮಿಕ ಕೃಷಿ ತ್ತಿನ ಅರ್ಬನ್ ಬ್ಯಾಂಕ್ ಹಾಗೂ ಕ್ರೆಡಿಟ್, ಸೌಹಾರ್ದ ಸಹಕಾರ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿರುವ ಸಹಕಾರ ವಸತಿ ಮತ್ತು ಮೂಲಭೂತ ನಿಗಮ ನಿಯಮಿತ ಭವನದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಸಹಕಾರ ಚಳವಳಿಗೆ ನಾಂದಿ ಹಾಡಿದ ರಾಜ್ಯದಲ್ಲಿ ಹುಟ್ಟಿಬೆಳೆದ ಕ್ಷೇತ್ರ ಈಗ ಕ್ಷೀಣಿಸುತ್ತಿದೆ. ಸಹಕಾರ ರಂಗದಿಂದ ರಾಜ್ಯ ಅಭಿವೃದ್ಧಿ ಕಂಡಿದೆ. ಈ ತತ್ವದಿಂದ ರಾಜ್ಯವೇ ಸ್ವಾವಲಂಬಿಯಾಗಿ ಬೆಳೆದುನಿಂತಿದೆ” ಎಂದರು.

ಸಹಕಾರ ಕ್ಷೇತ್ರ

“ಎಲ್ಲ ಬೆಳೆಯನ್ನು ಬೆಳೆಯುವ ದೇಶ ನಮ್ಮದು. ಭವಿಷ್ಯದಲ್ಲಿ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿ, ಜಿಲ್ಲೆ ಸಂಪೂರ್ಣವಾಗಿ ನೀರಾವರಿಯಾಗುತ್ತದೆ. ಕೃಷಿ ಕುರಿತು ರೈತರಲ್ಲಿ ಅಸೂಯೆ ಮೂಡದಿರಲಿ. ವೈಜ್ಞಾನಿಕವಾಗಿ ಬೆಳೆಯುವ ಮೂಲಕ ತಮ್ಮ ಬದುಕನ್ನು ಬದಲಾವಣೆಗೆ ತೆರೆದುಕೊಳ್ಳಬೇಕು. ಸಹಕಾರ ತತ್ವದಡಿ ಸುಂದರ ಮತ್ತು ಸುಭದ್ರ ಬದುಕು ಕಟ್ಟಿಕೊಳ್ಳಬೇಕು. ಕಟ್ಟಡ ನಿರ್ಮಾಣಕ್ಕೆ ಕೈಲಾದ ಸಹಕಾರ ನೀಡಲಾಗುವುದು” ಎಂದು ಹೇಳಿದರು.

ಶಾಸಕ ಅಶೋಕ ಮನಗೂಳಿ ಮಾತನಾಡಿ, “ಮೂರು ತಾಲೂಕಿನ 362 ಸಹಕಾರ ಸಂಘಗಳು ತಮ್ಮ ಕಾರ್ಯ ಚಿಂತನ-ಮಂಥನ ಚಟುವಟಿಕೆಗಳು ಆಸರೆಯಿಲ್ಲದೇ ನಡೆದಿದ್ದವು. ಈ ಸಹಕಾರ ಭವನದ ಮೂಲಕ ಅವರ ಕೆಲಸಗಳಿಗೆ, ಸಭೆ-ಸಮಾರಂಭಗಳಿಗೆ ಅನುಕೂಲವಾಗಲಿದೆ. ಈ ಹಿಂದಿನ ಸಭೆಯಲ್ಲಿ ನಿರ್ಧರಿಸಿದಂತೆ ಕಟ್ಟಡ ನಿರ್ಮಾಣಕ್ಕೆ ದೇಣಿಗೆ ನೀಡಿವೆ. ಮುಂದಿನ ವರ್ಷ ಇದೇ ಫೆಬ್ರವರಿಯಲ್ಲಿ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ತೊಗರಿ ಬೆಳೆಹಾನಿ ಪರಿಹಾರಕ್ಕೆ ರೈತರ ಆಗ್ರಹ

ಸಾರಂಗಮಠ-ಗಚ್ಚಿನಮಠದ ಡಾ.ಪ್ರಭು ಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು. ಸಾನ್ನಿಧ್ಯ ಅಖಂಡ ಸಹಕಾರ ಸಂಘಗಳ ಸಮಿತಿ ಅಧ್ಯಕ್ಷ ಡಾ. ರಾಮರಾವ್ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ವಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಣಮಂತ್ರಾಯಗೌಡ ಪಾಟೀಲ, ಗುರುಶಾಂತ ನಿಡೋಣಿ, ಸಾಧಿಕ್ ಸುಂಬಡ, ಕೆಡಿಪಿ ಸದಸ್ಯೆ ಮಹಾನಂದ ಬಮ್ಮಣ್ಣಿ, ಇಚಿಡಿ ಸಹಕಾರಿ ಸಹಾಯಕ ಉಪನಿಬಂಧಕ ಕೆ ಎಚ್‌ ವಡ್ಡರ, ಶಿವಕುಮಾರ ಗುಂದಗಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...