ವಿಜಯಪುರ | ʼಕರ್ನಾಟಕದ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿʼ

Date:

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕರ್ನಾಟಕದ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ ಡಿಸೆಂಬರ್ 6ರಂದು ಬೆಂಗಳೂರಿನ ವಿಧಾನಸೌಧದಿಂದ ಪ್ರಾರಂಭವಾಗಿದ್ದು ಡಿಸೆಂಬರ್ 11ರಂದು ಬೆಳಗಾವಿಯ ಸುವರ್ಣಸೌಧ ತಲುಪಿ ಸಮಾಪ್ತಿಯಾಗಲಿದೆ.

ಈ ಕುರಿತು ಎಸ್‌ಡಿಪಿಐ ಡಿ.10ರಂದು ವಿಜಯಪುರ ನಗರದಲ್ಲಿ ರಾಜ್ಯ ನಾಯಕರ ಜೊತೆ ಸೇರಿ ನೂರಾರು ಕಾರ್ಯಕರ್ತರು, ಜಾಥಾ ಮತ್ತು ಸಾರ್ವಜನಿಕರ ಸಭೆ ನಡೆಸಿದೆ.

ಈ ಸಂಧರ್ಭದಲ್ಲಿ ಜಾಥಾದ ಸಂಚಾಲಕ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್. ಭಾಸ್ಕರ್ ಪ್ರಸಾದ್ ಮಾತನಾಡಿ, ಚುನಾವಣೆಗೂ ಮುಂಚೆ ಸಿದ್ದರಾಮಯ್ಯರವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲ ಅಧಿವೇಶನದಲ್ಲೇ 2ಬಿ ಮೀಸಲಾತಿಯನ್ನು ಜಾರಿ ಮಾಡುತ್ತೇವೆ. ಕಾಂತರಾಜ್ ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸುತ್ತೇವೆ ಎಂದು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದರು. ಅಧಿಕಾರಕ್ಕೆ ಬಂದ ನಂತರ ಸಿದ್ದರಾಮಯ್ಯ ಸರ್ಕಾರ ಜನರನ್ನು ವಂಚಿಸುತ್ತಿದೆ ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನೂ ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್, ಸಾಮಾಜಿಕ ನ್ಯಾಯದ ನೆಲೆಗಟ್ಟಿನಲ್ಲಿ, ನಾಡಿನ ಸಮಸ್ತ ಪ್ರಜೆಗಳಿಗೂ ಸಮಾನ ಅವಕಾಶ, ಹಕ್ಕು, ಅಧಿಕಾರ ಮತ್ತು ಆಸ್ತಿ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯವಾಗಿರುತ್ತದೆ. ಎಲ್ಲರಿಗೂ ಸಮಾನ ಹಕ್ಕು, ಅಧಿಕಾರ ಮತ್ತು ಅವಕಾಶಗಳು ಸಿಗಬೇಕೆನ್ನುವ ಉದ್ದೇಶವನ್ನು ನಾವು ಹೊಂದಿದ್ದೇವೆ ಎಂದು ಎಲ್ಲ ಪಕ್ಷಗಳೂ ಹೇಳಿಕೊಳ್ಳುತ್ತವೆ. ಆದರೆ, ಅವರ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದಾಗ ಶೋಷಿತ, ಅವಕಾಶವಂಚಿತ ಸಮುದಾಯಗಳಿಗೆ ದ್ರೋಹವೆಸಗುತ್ತಲೇ ಬಂದಿವೆ. ಕೂಡಲೇ ಒಳ ಮೀಸಲಾತಿ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಬೇಕು ಮತ್ತು ಸದಾಶಿವ ಆಯೋಗದ ವರದಿಯನ್ನು ಒಕ್ಕೂಟ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪರ್ ಕೊಡ್ಲಿಪೇಟೆ, ರಾಜ್ಯ ಕೋಶಾಧಿಕಾರಿ ಇಸ್ಟಾಕ್ ಹುಸೇನ್ (ಖಾಲಿದ್), ರಾಜ್ಯ ಸಮಿತಿ ಸದಸ್ಯರಾದ ಅಮ್ಮದ್ ಖಾನ್ ಮೈಸೂರು, ರಿಯಾಝ್ ಕಡಂಬು, ಯಮನಪ್ಪ ಗುಣದಾಳ, ರಮಜಾನ್ ಕಡಿವಾಳ್, ಬಿಜಾಪುರ ಜಿಲ್ಲಾಧ್ಯಕ್ಷ ಅಥಾವುಲ್ಲಾ ದ್ರಾಕ್ಷಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಸಾರ್ ಅಹ್ಮದ್ ಮನಿಯಾರ, ಬಿಜಾಪುರ ನಗರ ವಿಧಾನಸಭಾ ಅಧ್ಯಕ್ಷರಾದ ಉಮರಖಾನ ಪಠಾಣ, ಕಾರ್ಯದರ್ಶಿ ಜಮೀಲ ಮುಲ್ಲಾ, ಜಿಲ್ಲಾ ನಾಯಕರು, ವಿಧಾನಸಭಾ ನಾಯಕರು. ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...