ವಿಜಯಪುರ | ಜನರಲ್ಲಿ ರಾಜಕೀಯ ಪ್ರಜ್ಞೆ ಮೂಡಿದರೆ ಬದಲಾವಣೆ ಸಾಧ್ಯ: ಕಾಂಗ್ರೆಸ್‌ ಅಭ್ಯರ್ಥಿ

Date:

ಮತದಾರರಲ್ಲಿ ರಾಜಕೀಯ ಪ್ರಜ್ಞೆ ಮೂಡಿದರೆ, ದೇಶದಲ್ಲಿ ಮತ್ತು ನಮ್ಮ ಲೋಕಸಭೆ ಕ್ಷೇತ್ರದಲ್ಲೂ ಬದಲಾವಣೆ ನಿಶ್ಚಿತ ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ ವಿಶ್ವಾಸ ವ್ಯಕ್ತಪಡಿಸಿದರು.

- Advertisement -

ವಿಜಯಪುರ ಜಿಲ್ಲೆ ದೇವರಹಿಪ್ಪಗಿ ತಾಲೂಕಿನ ಮುಳಸಾವಳಗಿಯಲ್ಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ತಮಗೊಂದು ಅವಕಾಶ ನೀಡಿದರೆ ಜಿಲ್ಲೆಯ ಅಭಿವೃದ್ಧಿಗೆ ಬದ್ಧ. ರಾಜ್ಯ ಸರ್ಕಾರದ ಕೆಲಸ ಕೇಂದ್ರದಲ್ಲೂ ಮುಂದುವರೆಯಲಿವೆ. ಕೆಲಸ ಮಾಡುವವರಿಗೆ ಆದ್ಯತೆ ನೀಡಿ” ಎಂದು ಮನವಿ ಮಾಡಿದರು.

ಮಾಜಿ ಶಾಸಕ ಶರಣಪ್ಪ ಸುಣಗಾರ ಮಾತನಾಡಿ, “ಮೋದಿ ಮತ್ತು ಸದ್ಯದ ಸಂಸದರು ಬರೀ ಮಾತೇ ಆಡಿದ್ದಾರೆ. ದಶಕದಿಂದ ದೇಶಕ್ಕಾಗಲೀ ವಿಜಯಪುರ ಲೋಕಸಭೆ ಕ್ಷೇತ್ರಕ್ಕಾಗಲಿ ನಯಾ ಪೈಸೆಯ ಲಾಭವಾಗಿಲ್ಲ. ರಾಜ್ಯದ ಆಡಳಿತ ಸರ್ಕಾರ ಹೇಳಿದಂತೆ ನಡೆದುಕೊಂಡಿದೆ ಎನ್ನುವುದಕ್ಕೆ ಗ್ಯಾರಂಟಿಗಳು ಲಾಗೂ ಆಗಿದ್ದೇ ಸಾಕ್ಷಿ. ಹೆಣ್ಣುಮಕ್ಕಳು, ಯುವಕರಲ್ಲದೇ ಎಲ್ಲರಿಗೂ ಪ್ರತಿ ತಿಂಗಳು ₹6,000ದಷ್ಟು ಹಣ ಬಂದು, ಆರ್ಥಿಕ ಸ್ಥಿತಿ ಸುಧಾರಿಸಿದೆ. ಬಡವರ, ದೀನರ ಬದುಕು ಹಸನಾಗಿದೆ” ಎಂದರು.

“ಇದೀಗ ಕಾಂಗ್ರೆಸ್ ಅ‌ಭ್ಯರ್ಥಿಗೆ ಮತ ನೀಡಿದರೆ ಜಿಲ್ಲೆ ಮತ್ತಷ್ಟು ಏಳಿಗೆ ಸಾಧಿಸಲಿದೆ. ಕೇಂದ್ರದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಇನ್ನಷ್ಟು ಗ್ಯಾರಂಟಿಗಳು ಜಾರಿಗೆ ಬರಲಿವೆ. ಹೆಣ್ಣುಮಕ್ಕಳಿಗೆ ವರ್ಷಕ್ಕೆ ಒಂದು ಲಕ್ಷ ರೂ. ಸಿಗಲಿವೆ. ಹಾಗಾಗಿ ತಾವುಗಳು ಮೋದಿಯ ಮೋಡಿಗೆ ಬಲಿಯಾಗಬೇಡಿ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಧಿಕೃತ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ ಕೈ ಅಭ್ಯರ್ಥಿ ಆಲಗೂರು

ಲಿಂಗರಾಯ ಮಹಾರಾಜ, ಸುಭಾಷ್ ಛಾಯಾಗೋಳ, ಬಿ‌ ಎಸ್ ಪಾಟೀಲ ಯಾಳಗಿ, ಬಾಪುಗೌಡ ಪಾಟೀಲ, ಡಾ ಪ್ರಭುಗೌಡ ಲಿಂಗದಳ್ಳಿ, ಬಶೀರ್ ಬೇಪಾರಿ, ಬಾಳನಗೌಡ ಪಾಟೀಲ, ಸೋಮನಾಥ ಕಳ್ಳಿಮನಿ, ಸರಿತಾ ನಾಯಕ, ಎಂ ಜಿ ಯಂಕಂಚಿ, ಪರುಶರಾಮ ದಿಂಡವಾರ, ಸಾಬು ಹುಸನಳ್ಳಿ, ಸೈಯದ್ ರೂಗಿ, ಬಸವನಗೌಡ ಪಾಟೀಲ, ಸುರೇಶಗೌಡ ಪಾಟೀಲ, ಎಂ ಎಂ ಪಟೇಲ ಸೇರಿದಂತೆ ಬಹುತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...