ವಿಜಯಪುರ | ಸಕ್ಕರೆ ಕಾರ್ಖಾನೆಗಳಲ್ಲಿ ಮೋಸ; ತೂಕ ಮಾಪನ ಪರಿಶೀಲನೆಗೆ ಆಗ್ರಹ

Date:

ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿನ 9 ಸಕ್ಕರೆ ಕಾರ್ಖಾನೆಗಳಲ್ಲಿ ತೂಕ ಮತ್ತು ಅಳತೆ ಮಾಪನಗಳನ್ನು ಪರಿಶೀಲಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಕಾರ್ಯಕರ್ತರು ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕರಿಗೆ ಮನವಿ ಸಲ್ಲಿಸಿದರು.

- Advertisement -

“ರಾಜ್ಯ ಸರ್ಕಾರದ ಸಕ್ಕರೆ ಇಲಾಖೆಯು ಪ್ರಸಕ್ತ ಸಾಲಿನ ಕಬ್ಬು ನುರಿಸುವ ಸಕ್ಕರೆ ಹಂಗಾಮಿನ ಹೊಸ ಎಫ್‌ಆರ್‌ಪಿ ದರವನ್ನು ನಿಗದಿಪಡಿಸಿ ಆದೇಶವನ್ನು ಹೊರಡಿಸಿದೆ. ಯಾವ ಕಾರ್ಖಾನೆಗೆ ಎಷ್ಟು ದರವೆಂದು ನಿಗದಿಪಡಿಸಿರುವ ಪಟ್ಟಿಯನ್ನು ನೀಡಿದೆ. ಅದರಂತೆ ವಿಜಯಪುರ ಜಿಲ್ಲೆಯಲ್ಲಿ ಒಂಬತ್ತು ಸಕ್ಕರೆ ಕಾರ್ಖಾನೆಗಳು ದರ ನೀಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಇಂಡಿಯನ್ ಶುಗರ್ಸ್-3156, ಜಮಖಂಡಿ ಶುಗರ್ಸ್- 3254, ಪಿ ಆರ್ ಶುಗರ್ಸ- 3365, ಮನಾಲಿ ಶುಗರ್ಸ್‌- 2920, ನಂದಿ ಶುಗರ್ಸ್-3454, ಸಂಗಮನಾಥ ಶುಗರ್ಸ್-‌ 2920, ಬಾಲಾಜಿ ಶುಗರ್ಸ್‌- 3374, ಬಸವೇಶ್ವರ ಶುಗರ್ಸ್-‌ 3408 ಮತ್ತು ಭೀಮಾಶಂಕರ್ ಶುಗರ್ಸ್-‌ 3221 ಈ ರೀತಿಯಾಗಿ ಎಫ್‌ಆರ್‌ಪಿ ದರವನ್ನು ನಿಗದಿಪಡಿಸಿ ರೈತಪರವಾದ ಒಳ್ಳೆಯ ಆದೇಶವನ್ನು ನೀಡಿದೆ. ಆದರೆ ಬಹುಕಾಲದಿಂದಲೂ ಸಕ್ಕರೆ ಕಾರ್ಖಾನೆಯ ಮಾಲೀಕರಿಗೂ ಮತ್ತು ತಮ್ಮ ಅದೀನ ಬರುವ ಎಲ್ಲ ವೇಬ್ರಿಜ್ ಮಾಲೀಕರ ಜೊತೆಯಲ್ಲಿ ಒಳಒಪ್ಪಂದ ಮಾಡಿಕೊಂಡು ತೂಕ ಮತ್ತು ಅಳತೆಯಲ್ಲಿ ರೈತರಿಗೆ ಮೋಸ ಮಾಡುತ್ತಿದ್ದಾರೆ” ಎಂದು ಪಕ್ಷದ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಸವಕಲ್ಯಾಣದಲ್ಲಿ ಅ. 28 ರಿಂದ ಮೂರು ದಿನ ʼಕಲ್ಯಾಣ ಪರ್ವʼ

“ಇದೇ ನವೆಂಬರ್ ತಿಂಗಳಲ್ಲಿ ಕಬ್ಬು ನುರಿಸುವ ಕೆಲಸ ಆರಂಭವಾಗುತ್ತದೆ. ರೈತರು ವರ್ಷವಿಡೀ ಕಷ್ಟಪಟ್ಟು ಬೆಳೆದ ತಮ್ಮ ಫಸಲನ್ನು ಕಾರ್ಖಾನೆಗೆ ಕಳುಹಿಸಿದಾಗ ಕಬ್ಬಿನ ತೂಕ ಮತ್ತು ಅಳತೆಯಲ್ಲಿ ಪ್ರತಿ ರೈತರಿಂದ ಎರಡರಿಂದ ಮೂರು ಟನ್‌ಗಳಷ್ಟು ಮೋಸ ಮಾಡಲಾಗುತ್ತಿದೆ. ಅಧಿಕಾರಿಗಳು ಭೇಟಿ ನೀಡಿದಾಗ ತೂಕ ಮಾಪನಗಳನ್ನು ಸರಿಪಡಿಸಿಕೊಳ್ಳುತ್ತಾರೆ. ನಂತರ ಅದೇ ಚಾಳಿಯನ್ನು ಮುಂದುವರಿಸುತ್ತಾರೆ. ಹಾಗಾಗಿ ಇಲಾಖೆಯು ಇದಕ್ಕೊಂದು ಶಾಶ್ವತ ಪರಿಹಾರ ಕೈಗೊಳ್ಳುವುದರ ಮೂಲಕ ರೈತ ಪರವಾದ ನಿಲುವು ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

ರಾಜ್ಯ ಸಂಘಟನೆ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ರಾಕೇಶ ಇಂಗಳಗಿ, ಹಮೀದ ಇನಾಮ್ದಾರ್, ಪ್ರವೀಣ ಕನಸೆ, ವಿಕ್ರಮ ವಾಗ್ಮೊರೆ ಮತ್ತು ಶ್ರೀಶೈಲ ಮಠ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...