ವಿಜಯಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಬೇಕು: ಪ್ರೊ. ಶಾಂತದೇವಿ

Date:

ಬಾಲಕಾರ್ಮಿಕ ಪದ್ಧತಿಯು ಅನಿಷ್ಟ ಪದ್ಧತಿಯಾಗಿದ್ದು, ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ಹೇಳಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಕೋಶದ ಸ್ನಾತಕ, ಶಿಕ್ಷಣ ಮತ್ತು ಮುಕ್ತ ಘಟಕಗಳ ವತಿಯಿಂದ ಗುರುವಾರ ಆಯೋಜಿಸಿದ್ದ ‘ವಿಶ್ವ ಬಾಲಾಕಾರ್ಮಿಕ ವಿರೋಧಿ ದಿನಾಚರಣೆ’ಯ ಅಂಗವಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

“ಮಕ್ಕಳು ನಿಯಮಿತವಾಗಿ ಶಾಲೆಗೆ ಹೋಗಿ ಉತ್ತಮ ಶಿಕ್ಷಣ ಪಡೆಯಬೇಕು. ದೇಶದ ಭವಿಷ್ಯ ಇಂದಿನ ಮಕ್ಕಳ ಮೇಲೆ ಅವಲಂಬಿತವಾಗಿದ್ದು, ಅವರು ಶಿಕ್ಷಣದ ಮೂಲಕ ಬೆಳೆಯಬೇಕು. ಪಾಲಕರು ತಮ್ಮ ಮಕ್ಕಳನ್ನು ಯಾವುದೇ ರೀತಿಯ ಕೆಲಸಕ್ಕೆ ತಳ್ಳಬಾರದು. ಹಾಗೆಯೇ ಉದ್ಯೋಗದಾತರು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಅಪಾಯಕಾರಿ ಅಥವಾ ಶ್ರಮದಾಯಕ ಕೆಲಸಗಳಿಗೆ ನೇಮಿಸಿದರೆ, ಅದು ಅಪರಾಧವಾಗುತ್ತದೆ” ಎಂದರು.

“ಪೋಷಕರಿಗೂ ತಿಳುವಳಿಕೆ ನೀಡಿ, ಮಗುವನ್ನು ಶಾಲೆಗೆ ಸೇರಿಸುವಂತೆ ಪ್ರೇರೇಪಿಸಬೇಕು. ಬಾಲಕಾರ್ಮಿಕರು ಮತ್ತು ಕಿಶೋರ್ ಕಾರ್ಮಿಕರನ್ನು ತೊಡಗಿಸಿಕೊಂಡು ತಯಾರಿಸಲ್ಪಟ್ಟ ಯಾವುದೇ ವಸ್ತುಗಳನ್ನು ನಾವು ಉಪಯೋಗಿಸುವುದಿಲ್ಲ. ಹಾಗೆಯೇ, ಅವರ ಸೇವೆಗಳನ್ನು ಪಡೆದುಕೊಳ್ಳುವುದಿಲ್ಲ ಎಂಬುದನ್ನು ನಾವು ಪ್ರಾಮಾಣಿಕವಾಗಿ ಹಾಗೂ ಅತ್ಮಸಾಕ್ಷಿಯಾಗಿ ಹೇಳುತ್ತ, ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಪ್ರಮಾಣ ವಚನ ಸ್ವೀಕರಿಸುತ್ತೇವೆ” ಎಂದು ವಿದ್ಯಾರ್ಥಿನಿಯರಿಗೆ ಬೋಧಿಸಿದರು.

ಈ ಸುದ್ದಿ ಓದಿದ್ದೀರಾ? ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಸ್ಥಾನಿಕ ಅಭಿಯಂತರ ಮಾರುತಿ ಕದಂ, ಸಮಾಜ ಕಾರ್ಯ ವಿಭಾಗದ ಸಹ-ಪ್ರಾಧ್ಯಾಪಕ ಡಾ. ರಮೇಶ ಎಂ ಸೋನಕಾಂಬಳೆ, ವಾಣಿಜ್ಯ ಮತ್ತು ವ್ಯವಹಾರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಚಂದ್ರಶೇಖರ ಮಠಪತಿ, ಎನ್‌ಎಸ್‌ಎಸ್ ಕೋಶದ ಸಂಯೋಜಕ ಪ್ರೊ. ಅಶೋಕಕುಮಾರ ಸುರಪುರ, ಎನ್‌ಎಸ್‌ಎಸ್ ಘಟಕಗಳ ಕಾರ್ಯಕ್ರಮಾಧಿಕಾರಿ ಡಾ. ಅಮರನಾಥ ಪ್ರಜಾಪತಿ ಹಾಗೂ ಎಲ್ಲ ಎನ್‌ಎಸ್‌ಎಸ್ ಘಟಕಗಳ ಸ್ವಯಂ ಸೇವಕಿಯರು ಇದ್ದರು.

ಕಾರ್ಯಕ್ರಮದಲ್ಲಿ ಪ್ರೊ. ವಿಷ್ಣು ಎಂ ಶಿಂದೆ ಸ್ವಾಗತಿಸಿದರು, ಡಾ. ಕಲಾವತಿ ಎಚ್ ಕಾಂಬಳೆ ನಿರೂಪಿಸಿದರು, ಡಾ. ಗುಲಾಬ ರಾಠೋಡ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...