ವಿಜಯಪುರ | ಅಸಂಘಟಿತ ಕಾರ್ಮಿಕರಿಗೆ ₹36,000ಗಳ ಕನಿಷ್ಠ ವೇತನಕ್ಕೆ CITU ಆಗ್ರಹ

Date:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಾರ್ಮಿಕರ ದುಡಿಮೆಯ ಸಮಯವನ್ನು ಹೆಚ್ಚಿಗೆ ಮಾಡಿದೆ. ಆದರೆ, ಅದಕ್ಕೆ ತಕ್ಕಂತೆ ಕೂಲಿ ಕೊಡುವುದಿಲ್ಲ. ಕನಿಷ್ಠ ಕೂಲಿ ಅಸಂಘಟಿತ ಕಾರ್ಮಿಕರಿಗೆ ₹36,000ಗಳ ಕನಿಷ್ಠ ವೇತನ ನೀಡಬೇಕು. 2011ರಿಂದ ಇಲ್ಲಿಯವರೆಗೆ ಅಂಗನವಾಡಿ ಅಕ್ಷರ ದಾಸೋಹ ನೌಕರರಿಗೆ ಕೇಂದ್ರ ಸರ್ಕಾರ 50% ಕಡಿತಗೊಳಿಸಿದೆ. ಜಾತಿ ಧರ್ಮದ ಹೆಸರಿನಲ್ಲಿ ಆರೋಗ್ಯಕರ ಸಮಾಜವನ್ನು ಹಾಳು ಮಾಡುತ್ತಿದೆ ಎಂದು CITU ರಾಜ್ಯ ಕಾರ್ಯದರ್ಶಿ ಎಚ್ ಎಸ್ ಸುನಂದಾ ಆಗ್ರಹಿಸಿದರು.

- Advertisement -

ವಿಜಯಪುರ ನಗರದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಸಭಾಂಗಣದಲ್ಲಿ ನಡೆದ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಸರ್ಕಾರವು 49 ಇದ್ದ ಕಾರ್ಮಿಕರ ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಮಾಡಿ ಮಾಲೀಕರಿಗೆ ಅನುಕೂಲ ಮಾಡಿಕೊಟ್ಟಿದೆ. ಈ ಕಾನೂನುಗಳು ಜಾರಿಯಾಗದಂತೆ ಕಾರ್ಮಿಕರು ಸಂಘಟಿತರಾಗಿ ಹೋರಾಟ ಮಾಡುವುದು ಅವಶ್ಯಕವಾಗಿದೆ. ಅಂಗನವಾಡಿ ಬಿಸಿಯೂಟ ನೌಕರರಿಗೆ ಪಿಂಚಣಿ ಕೊಡಬೇಕು. ಎಷ್ಟು ಜನ ಶ್ರೀಮಂತರಾಗುತ್ತಾರೋ ಅಷ್ಟೇ ಪ್ರಮಾಣದಲ್ಲಿ ಬಡವರ ಸಂಖ್ಯೆ ಹೆಚ್ಚಾಗುತ್ತಿದೆ. ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಎಫ್ ಆರ್ ಎಸ್ ಜಾರಿಯಿಂದ ಎರಡು ಲಕ್ಷ ಗರ್ಭಿಣಿ ಮಹಿಳೆಯರು ಸೌಲಭ್ಯದಿಂದ ವಂಚಿತರಾಗಿದ್ದಾರೆ” ಎಂದರು.

ಸಿಐಟಿಯು ಜಿಲ್ಲಾಧ್ಯಕ್ಷ ಅಣ್ಣಾರಾಯ ಇಳೆಗೆರಾ ಮಾತನಾಡಿ, “ಕೆಲವು ದಿನಗಳವರೆಗೆ ಮಂತ್ರಿಗಳಿಗೂ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ಮಾಡುವಂತೆ ಮನವಿ ಸಲ್ಲಿಸಲಾಗುವುದು. ನಂತರ ಕೇಂದ್ರ ಸಚಿವರ ಮನೆಯ ಮುಂದೆ ಧರಣಿ ಮಾಡಲಾಗುವುದು. ಕೇಂದ್ರ ಸರಕಾರ ₹1,46,000 ಕೋಟಿ ಬಂಡವಾಳಗಾರರ ಸಾಲ ಮನ್ನಾ ಮಾಡಿದ್ದಾರೆ. ಕಾರ್ಮಿಕರಿಗೆ ಕೂಲಿ ಕೊಡಲು ಹಿಂದೇಟು ಹಾಕುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಹಂದ್ರಾಳ ಮಾತನಾಡಿ, “ಸಿಐಟಿಯು ಸಂಘಟನೆ ಮೂರು ವರ್ಷಗಳ ಕಾಲ ಮಾಡಿದ ಅನೇಕ ಜನಪರ ಕಾರ್ಮಿಕ ಚಳವಳಿಯ ಕರಡು ವರದಿಯನ್ನು ಮಂಡಿಸಿದೆ. ಅದನ್ನ ಎಲ್ಲ ಕಾರ್ಮಿಕ ಸಂಘಟನೆಯ ಪ್ರತಿನಿಧಿಗಳು ಅನುಮೋದನೆ ಮಾಡಿದರು” ಎಂದರು.

ಇದನ್ನೂ ಓದಿ: ವಿಜಯಪುರ | ಕಬ್ಬು ದರ ನಿಗದಿ ಕೇಂದ್ರದ ಅಧಿಕಾರ; ರಾಜ್ಯದ್ದು ಜಾರಿಯ ಕೆಲಸ: ಸಚಿವ ಎಂ ಬಿ ಪಾಟೀಲ್

ಸಮ್ಮೇಳನದಲ್ಲಿ 12 ಜನರ ಸಂಚಾಲಕ ಸಮಿತಿ ರಚಿಸಲಾಯಿತು. ಸಂಚಾಲಕರಾಗಿ ಲಕ್ಷ್ಮಣ್ ಹಂದ್ರಾಳ ಹಾಗೂ ಸಹ ಸಂಚಾಲಕರಾಗಿ ಅಣ್ಣಾರಾಯ, ಸೋಮಪ್ಪ ಆಯಟ್ಟಿ, ಸುರೇಶ್ ಜಿ ಬಿ, ಸುನಂದ ನಾಯಕ್, ಭಾರತಿವಾಲಿ, ಅಶ್ವಿನಿ ತಲ್ವಾರ್, ಸುಮಂಗಲ, ಆನಂದಿಶೆಟ್ಟಿ, ಕಾಳಮ್ಮ ಬಡಿಗೇರ್, ಲಾಲ್ ಅಹ್ಮದ್ ಶೇಕ್, ಚಂದ್ರಶೇಖರ್ ಬುರಣಾಪುರ್, ಶಿವಾನಂದ್ ಅವರನ್ನು ಆಯ್ಕೆ ಮಾಡಲಾಯಿತು.

ಈ ವೇಳೆ ಜನವಾದಿ ಮಹಿಳಾ ಸಂಘಟನೆಯ ಸುರೇಖಾ ರಜಪೂತ್, ಗ್ರಾಮ ಪಂಚಾಯಿತಿಯ ನೌಕರರ ಸಂಘದ ಮಾಜಿ ಅಧ್ಯಕ್ಷ ಎಸ್ ಐ ಗದಿಗಿಮಠ, ಲಕ್ಷ್ಮಣ ಹಂದ್ರಾಳ, ಚಂದ್ರಶೇಖರ್ ವಾಲಿಕಾರ್, ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಬುರಣಾಪುರ, ಗ್ರಾಮ ಪಂಚಾಯಿತಿ ನೌಕರರು, ಕಟ್ಟಡ ಕಾರ್ಮಿಕ ಸಂಘಟನೆಯ ಪ್ರತಿನಿಧಿಗಳು, ಅಕ್ಷರ ದಾಸೋಹ ನೌಕರರು, ಅಂಗನವಾಡಿ ನೌಕರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...