ವಿಜಯಪುರ | ಸಹಕಾರಿ ಸಂಘಗಳು ₹5 ಲಕ್ಷದವರೆಗೆ ಶೂನ್ಯಬಡ್ಡಿ ಸಾಲ ನೀಡುವ ಬ್ಯಾಂಕ್‌ಗಳಾಗಿವೆ: ಸಚಿವ ಶಿವಾನಂದ ಪಾಟೀಲ

Date:

ಕರ್ನಾಟಕದ ಸಹಕಾರಿ ಸಂಘಗಳು ರೈತರಿಗೆ ₹5 ಲಕ್ಷದವರೆಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಬ್ಯಾಂಕ್‌ಗಳಾಗಿವೆ ಎಂದು ಸಕ್ಕರೆ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಮತ್ತು ವಿಜಯಪುರ ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಶಿವಾನಂದ ಪಾಟೀಲ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಭ್ಯಾಣ ಗ್ರಾಮದಲ್ಲಿ ಬ್ಯಾಂಕ್‌ನ 49ನೇ ಜಾಕಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಜಗತ್ತಿಗೆ ಗೋಧಿ, ಅಕ್ಕಿ ಕೊಡುವ ದೇಶ ನಮ್ಮದಾಗಿದೆ. ಹಾಲು ಉತ್ಪಾದನೆಯಲ್ಲಿ ಆಗ್ರಗಣ್ಯ ಸ್ಥಾನ ಭಾರತಕ್ಕಿದ್ದು, ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ. ಹಾಲು ಉತ್ಪಾದನೆಯಲ್ಲಿ ವಿಜಯಪುರ-ಬಾಗಲಕೋಟೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ” ಎಂದರು.

“ರಾಜ್ಯದಲ್ಲಿ 27 ಸಕ್ಕರೆ ಕಾರ್ಖಾನೆಗಳಿಗೆ ಬಿಡಿಸಿಸಿ ಬ್ಯಾಂಕ್‌ ಸಾಲ ನೀಡಿದೆ. 272 ಪ್ರಾಥಮಿಕ ಕೃಷಿ ಪತ್ತಿನ ಸಂಘಗಳಿದ್ದು 234 ಸ್ವಂತ ಕಟ್ಟಡ ಕಟ್ಟಿಸಲಾಗಿದೆ. ಬಿಡಿಸಿಸಿ ಬ್ಯಾಂಕ್‌ನಲ್ಲಿ ರೈತರು ₹6000 ಕೋಟಿ ಡೆಪಾಸಿಟ್‌ ಇಟ್ಟಿದ್ದಾರೆ. ಬಿಡಿಸಿಸಿ ಬ್ಯಾಂಕ್‌ ರೈತರಿಗೆ ₹6000 ಕೋಟಿ ಸಾಲ ನೀಡಿದೆ. ಮುಂದೆ ರೈತರು ಬ್ಯಾಂಕಿಗೆ ಸಾಲ ಕೇಳಲು ಬರುವ ಬದಲಾಗಿ ಡಿಪಾಸಿಟ್ ಇಡಲು ಬರುವ ವ್ಯವಸ್ಥೆಯಾಗಬೇಕಾಗಿದೆ” ಎಂದರು.

“ಸಣ್ಣವ್ಯಾಪಾರಸ್ಥರು, ಬಡವರ ಬದುಕಿಗೆ ಸಹಕಾರಿ ಬ್ಯಾಂಕ್‌ಗಳು ನೆರವು ನೀಡುತ್ತಿವೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಬಡವರು, ರೈತರು ನಿಬಂಧನೆಯ ಕಾರಣಕ್ಕೆ ಸಾಲ ತೆಗೆದುಕೊಳ್ಳುವದು ಕಷ್ಟ, ಸಹಕಾರಿ ಬ್ಯಾಂಕ್‌ ಸಾಲ-ಸೌಲಭ್ಯ ಕಲ್ಪಿಸಿ ದೇಶದ ಪ್ರಗತಿಗೆ ಸಿಂಹಪಾಲು ಕೊಡುಗೆ ನೀಡಿದೆ” ಎಂದರು.

ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, “ದೇಶದಲ್ಲಿ ಸಹಕಾರ ಚಳುವಳಿ ದೊಡ್ಡ ಕ್ರಾಂತಿ ಮಾಡಿದೆ. ಅದರಲ್ಲೂ ಭಾರತದ ಪ್ರಗತಿಯಲ್ಲಿ ಸಹಕಾರ ಬ್ಯಾಂಕ್‌ಗಳ ಕೊಡುಗೆ ಆಪಾರವಾಗಿದೆ” ಎಂದರು.

ಅಮೃತಾನಂದ ಶ್ರೀಗಳು ಮಾತನಾಡಿ, “ಸಹಕಾರಿ ಬ್ಯಾಂಕ್ ಯಶಸ್ವಿಯಾಗಲು ಠೇವಣೆದಾರರ ಜತೆಗೆ, ಸಕಾಲಕ್ಕೆ ಸಾಲ ಮರುಪಾವತಿ ಮಾಡುವ ಸಾಲಗಾರರು ಮುಖ್ಯವಾಗಿದ್ದು, ಅವರಿಗೆ ಗೌರವ ಸಲ್ಲಬೇಕಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ತುರುವೇಕೆರೆ | ಇವನಾರವ ಎನ್ನದೇ ಇವ ನಮ್ಮವ ಎನ್ನುವಂತೆ ವೀರಶೈವ ಲಿಂಗಾಯಿತ ಸಮಾಜ ಬಾಳಬೇಕಿದೆ : ಕೇಂದ್ರ ಸಚಿವ ವಿ. ಸೋಮಣ್ಣ

ಬ್ಯಾಂಕ್‌ನ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ, ಬ್ಯಾಂಕಿನ ಸಿಇಒ ಎಸ್ ಡಿ ಬಿರಾದಾರ, ಆರ್ ಎಂ ಬಣಕಾರ, ಎಂ ಎಸ್ ಹತ್ತೂರಕರ, ಅಹಿರಸಂಗದ ಮಲ್ಲಿಕಾರ್ಜುನ ಶಿವಾಚಾರ್ಯರು, ಶಂಕ್ರಪ್ಪ ಸಿದ್ರಾಮಶೆಟ್ಟಿ, ಗ್ರಾಪಂ ಅಧ್ಯಕ್ಷೆ ಕಲಾವತಿ ಬಿರಾದಾರ, ವೇಂಕಟೇಶ ಕುಲಕರ್ಣಿ, ಸಿದ್ದಣ್ಣ ಬೂದಿಹಾಳ ವಕೀಲರು, ಪುಷ್ಟಾವತಿ ಮರೋಟ, ಸಹಕಾರಿ ಸಂಘ ಉಪನಿಬಂಧಕ ಭಾಗ್ಯಶ್ರೀ, ಕೆ ಎಚ್ ವಡ್ಡರ, ಎಂ ಆರ್ ಪಾಟೀಲ, ಶ್ರೀಮಂತ ಇಂಡಿ, ಗಣೇಶಲಿಂಗ ಮಹಾರಾಜರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...