ವಿಜಯಪುರ | ʼಕಾಂತರಾಜ ವರದಿʼ ಅನುಷ್ಠಾನಕ್ಕೆ ಶೋಷಿತ ಸಮುದಾಯಗಳ ಒಕ್ಕೂಟ ಒತ್ತಾಯ

Date:

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕಾಂತರಾಜ ಅವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷಾ ವರದಿಗೆ ಪ್ರಬಲ ಜಾತಿಗಳಿಂದ ಎಷ್ಟೇ ವಿರೋಧ, ಆಕ್ಷೇಪ ಇದ್ದರೂ ಅದರಲ್ಲಿರುವ ಪ್ರಮುಖ ಶಿಫಾರಸುಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದ್ಯತೆ ನೀಡಬೇಕು ಎಂದು ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕ‌ರ್ ಒತ್ತಾಯಿಸಿದರು.

- Advertisement -

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕಾಂತರಾಜು ವರದಿ ಜಾರಿ ಮಾಡುವುದಾಗಿ ಹೇಳಿಕೊಂಡಿತ್ತು. ಇದೇ ಆಧಾರದ ಮೇಲೆ ಚುನಾವಣೆ ಎದುರಿಸಿ, ಗೆಲುವು ಸಾಧಿಸಿ ಶಾಸಕ, ಸಚಿವರಾದವರು ಇದೀಗ ವಿರೋಧ ವ್ಯಕ್ತಪಡಿಸುತ್ತಿರುವುದು ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶಾಮನೂರು ಶಿವಶಂಕರಪ್ಪ ಅವರಂತಹ ಹಿರಿಯರು ಕಾಂತರಾಜು ವರದಿ ಅವೈಜ್ಞಾನಿಕವಾಗಿದೆ, ನಮ್ಮ ಸಮಾಜದ ಜನ ಸಂಖ್ಯೆ ಕಡಿಮೆ ಇದೆ ಎಂದು ಆಕ್ಷೇಪ ವ್ಯಕ್ತಪಡಿಸುತ್ತಿರುವುದು ಅತ್ಯಂತ ಬಾಲಿಷ. ಯಾವುದೇ ವರದಿಯಾದರೂ ನೂರಕ್ಕೆ ನೂರು ಪರಿಪೂರ್ಣವಾಗಿರುವುದಿಲ್ಲ. ಶೇ 5-6 ಪ್ರಮಾಣದಷ್ಟು ಆಚೀಚೆ ಇರುತ್ತದೆ. ಆದರೆ, ಅದನ್ನೇ ನೆಪ ಮಾಡಿಕೊಂಡು ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ಪಹಲ್ಗಾಮ್ ಉಗ್ರ ದಾಳಿಗೆ ಬಲಿಯಾದವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಅಹಿಂದ ಮುಖಂಡ ಎಸ್ ಎಂ ಪಾಟೀಲ ಗಣಿಹಾರ ಮಾತನಾಡಿ, “ಸಿದ್ದರಾಮಯ್ಯ ಅವರು ಜಾತಿ ವರದಿ ಅನುಷ್ಠಾನಕ್ಕೆ ಮುಂದಾದರೆ ಜಾತಿ ಒಡೆಯುತ್ತಿದ್ದಾರೆ ಎಂದು ಬಿಜೆಪಿ, ಸಂಘ ಪರಿವಾರದವರು ಆರೋಪಿಸುತ್ತಿದ್ದಾರೆ. ಆದರೆ, ಇದೆ ಜಾತಿ ಗಣತಿಯನ್ನು ಪ್ರಧಾನಿ ಮೋದಿ ಅವರು ಮಾಡಲು ಮುಂದಾಗಿರುವುದನ್ನು ಸ್ವಾಗತಿಸುವ ಮೂಲಕ ದ್ವಂದ್ವ ನಿಲುವು ತಾಳಿರುವುದು ಹಾಸ್ಯಾಸ್ಪದ” ಎಂದರು.

ಈ ವೇಳೆ ಸೋಮನಾಥ ಕಳ್ಳಿಮನಿ, ಪ್ರಭುಗೌಡ ಪಾಟೀಲ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...