ವಿಜಯಪುರ | ʼಏತ ನೀರಾವರಿ ಪೂರ್ಣಗೊಳಿಸಿ ರೈತರ ಹಿತ ಕಾಪಾಡಿʼ

Date:

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬೂದಿಹಾಳ-ಪಿರಾಪುರ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ ರೈತರ ಹಿತ ಕಾಪಾಡಬೇಕು ಎಂದು ಯೋಜನೆಯ ಕ್ರಿಯಾಶೀಲ ವೇದಿಕೆಯಿಂದ ಉಪ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಬೆಂಗಳೂರಿನ ಸಚಿವರ ಸ್ವಗೃಹದಲ್ಲಿ ಬೂದಿಹಾಳ-ಪೀರಾಪುರ ನೀರಾವರಿ ಯೋಜನೆ ಕ್ರಿಯಾಶೀಲ ವೇದಿಕೆಯ ಪದಾಧಿಕಾರಿಗಳು ಹಾಗೂ ಮಾಜಿ ಸಿಂದಗಿ ಶಾಸಕ ಶರಣಪ್ಪ ಸುಣಗಾರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಯೋಜನೆಗೆ ಸರ್ಕಾರ ಈಗಾಗಲೇ ಸುಮಾರು 800 ಕೋಟಿ ಹಣ ಖರ್ಚು ಮಾಡಿದೆ. ನೀರು ಟ್ರೈಯಲ್ ರನ್ ಔಟ್ ಬಾಕ್ಸ್‌ವರೆಗೆ ತಲುಪಿದೆ. ಇನ್ನು ಹೊಲಗಾಲುವೆಯ ಶೇ.10ರಷ್ಟು ಕೆಲಸ ಮಾತ್ರ ಬಾಕಿ ಇದ್ದು, ಬೇಸಿಗೆಯಲ್ಲಿ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಗಿಸಬೇಕಿದೆ. ಅದಕ್ಕಾಗಿ ಸರ್ಕಾರ ₹170-200 ಕೋಟಿ ಮಂಜೂರು ಮಾಡಿದೆ. ಈ ಭಾಗದ 50,607 ಎಕರೆ ಕೃಷಿ ಭೂಮಿ ನೀರಾವರಿಗೆ ಒಳಪಡುತ್ತದೆ. ರೈತರು, ಯುವಕರು ನಗರ ಪ್ರದೇಶಕ್ಕೆ ಗುಳೆ ಹೋಗುತ್ತಿದ್ದಾರೆ. ಸರ್ಕಾರ ಪಕ್ಷಾತೀತವಾಗಿ ಈಯೋಜನೆ ಪೂರ್ಣಗೊಳಿಸಿದರೆ 38 ಗ್ರಾಮಗಳ ಲಕ್ಷಕ್ಕೂ ರೈತರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ. ಆದ್ದರಿಂದ ಅಧಿಕಾರಿಗಳಿಗೆ ನಿರ್ದೇಶನ ನೀಡಿ ತ್ವರಿತ ಗತಿಯಲ್ಲಿ ಯೋಜನೆ ಪೂರ್ಣಗೊಳಿಸುವಂತೆ ಸೂಚಿಸಬೇಕು” ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ವಿಜಯಪುರ | ವಾರ್ಡ್ ನಂ. 29ರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಗಿರೀಶ್ ಬಿರಾದಾರ್ ಗೆಲುವು

ಈ ವೇಳೆ ಮುಖಂಡರಾದ ಪ್ರಭುಗೌಡ ಬಿರಾದಾರ, ಹನುಮಗೌಡ ಬಿರಾದಾರ, ಕಾಶಿನಾಥ ತಳವಾರ, ಮಲ್ಲಣ್ಣ ಹಿರೇಕುರುಬರ, ಸಂಗನಗೌಡ ನಾಗರೆಡ್ಡಿ, ಮಹಾದೇವವಾಲಿಕಾರ, ಸಿದ್ದನಗೌಡ ಬಿರಾದಾರ, ರುದ್ರಗೌಡ ಬಿರಾದಾರ, ಶಿವಪುತ್ರ ಚೌದ್ರಿ ಹಾಗೂ ಗುರುರಾಜ ಪಡಶೆಟ್ಟಿ ಸೇರಿದಂತೆ ಹಲವಾರು ರೈತ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...