ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ತನ್ನದೇ ಛಾಪು ಮೂಡಿಸಿದೆ: ಮಂಜುನಾಥ ಸುಣಗಾರ

Date:

Advertisements

ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ ಸಹ ತನ್ನದೇ ಆದ ಛಾಪನ್ನು ಮೂಡಿಸುತ್ತಾ ಬಂದಿದೆ. ದೇಶದಲ್ಲಿ ಇವತ್ತು ಅಭಿವೃದ್ಧಿ ಕಾರ್ಯಗಳಾದ ರಸ್ತೆ, ಶಾಲೆ, ಕಾಲೇಜು,  ಆಸ್ಪತ್ರೆ, ಕೈಗಾರಿಕೆಗಳು, ಬ್ಯಾಂಕ್, ಸರ್ಕಾರಿ ಕಚೇರಿಗಳು, ಸರ್ಕಾರದ ಸಂಸ್ಥೆಗಳು, ಇವೆಲ್ಲವೂ ಇದೆ ಅಂದರೆ ಅದು ಕಾಂಗ್ರೆಸ್ ಸಾಧನೆ ಎಂದು ಕೆಪಿಸಿಸಿ ಮೀನುಗಾರ ವಿಭಾಗದ ಅಧ್ಯಕ್ಷ ಮಂಜುನಾಥ ಸುಣಗಾರ ಹೇಳಿದರು

ನಗರದ ಕೆಪಿಸಿಸಿ ಕಾರ್ಯಲಯದಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಕೆಪಿಸಿಸಿ ಮುಖಂಡರು ಕಾಮಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ್‌ ಪರ ಮತಯಾಚನೆ ಮಾಡಿದರು. ಈ ವೇಳೆ ಕೆಪಿಸಿಸಿ ಮೀನುಗಾರ ವಿಭಾಗದ  ಅಧ್ಯಕ್ಷ ಮಂಜುನಾಥ ಸುಣಗಾರ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜೇಶ ಕುಂದೂರ ಮಾತನಾಡಿದರು.

ವಿಜಯಪುರ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಗಂಗಾಮತಸ್ಥ ಸಮುದಾಯ, ಬೆಸ್ತ ಜನಾಂಗ ಸಾಂಪ್ರದಾಯಿಕ ಮೀನುಗಾರರು ಹಾಗೂ ಸಮುದಾಯದ ಮತಯಾಚನೆಗೆ ಆಗಮಿಸಿದ್ದು ಇವತ್ತು ಒಬ್ಬ ಉತ್ತಮ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಈ ಜಿಲ್ಲೆಯಲ್ಲಿ ಚುನಾವಣೆಗೆ ಅವಕಾಶ ಕಲ್ಪಿಸಿಕೊಟ್ಟಿದೆ ಎಂದರು.

Advertisements

ದೇಶದ ಪ್ರಧಾನಿ ನರೇಂದ್ರ ಮೋದಿ ಯವರು ಚಹಾ ಮಾರಿ ಪ್ರಧಾನಿಯಾಗಿದ್ದೆನೆ ಅಂತಾ ಹೇಳತಾರೆ. ಇವತ್ತು ದೇಶದ ಪ್ರಧಾನಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣದಲ್ಲಿ ಚಹಾ ಮಾರಲು ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣ ನಿರ್ಮಾಣ ಮಾಡಿ ಅವರು ಪ್ರಧಾನಮಂತ್ರಿಯಾಗಲು ಅವಕಾಶ ಕಲ್ಪಿಸಿದ್ದೆ ಕಾಂಗ್ರೆಸ್ ಪಕ್ಷ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಏನ್ ಮಾಡಿದೆ ಅನ್ನೋದಕ್ಕೆ ಅಥವಾ ಪ್ರಶ್ನೆ ಮಾಡೋದಕ್ಕೆ ಅವಕಾಶ ಮಾಡಿದ್ದೆ ಕಾಂಗ್ರೆಸ್. ಇವತ್ತು ಜಗತ್ತಿನಲ್ಲಿ ಸುಳ್ಳಿಗೆ ಆಸ್ಕರ್ ಪ್ರಶಸ್ತಿ ಏನಾದರೂ ಸಿಗುತ್ತದೆ ಅಂದರೆ ಅದು ನಮ್ಮ ನರೇಂದ್ರ ಮೋದಿ ಅವರಿಗೆ  ಸಿಗುತ್ತದೆ.   ಯಾಕೆಂದರೆ ಇವತ್ತು ಜನರಿಗೆ ಅತಿ ಹೆಚ್ಚು ಸುಳ್ಳು ಹೇಳಿದ ಪ್ರಧಾನಿ ಯಾರಾದರೂ ಇದ್ದರೆ ಅದು ನರೇಂದ್ರ ಮೋದಿಯವರು ಎಂದು ಕಿಡಿ ಕಾರಿದರು.

ಪ್ರತಿಯೊಬ್ಬ ನಾಗರಿಕನ ಖಾತೆಗೆ 15 ಲಕ್ಷ ಹಣ ಹಾಕುವ ಬರವಸೆ ನೀಡಿ, ಹತ್ತು ವರ್ಷಗಳು ಕಳೆದರು ಸಹ ದೇಶದ ಯಾವೋಬ್ಬ ನಾಗರಿಕನಿಗೂ ಹತ್ತು ರೂಪಾಯಿ ಸಹ ಖಾತೆಗೆ ಬಂದಿಲ್ಲ, ವರ್ಷಕ್ಕೆ 2 ಲಕ್ಷ ಉದ್ಯೋಗ ನೀಡುವ ಬರವಸೆ ನೀಡಿ ದೇಶದಲ್ಲಿ ಇರುವ ಅನೇಕ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಸಮಸ್ಯೆ ಬಗೆಹರಿಸೋ ಬದಲಾಗಿ, ಅಲ್ಲಿ ಇರುವ ಉದ್ಯೋಗಿಗಳನ್ನು ಹೊರಹಾಕಿ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿ ನಿರುದ್ಯೋಗಿಗಳನ್ನಾಗಿ ಮಾಡುವುದರ ಜೊತೆಗೆ ಅವರ ಇಡೀ ಕುಟುಂಬ ಬೀದಿಗೆ ಬರುವ ಕೆಲಸವನ್ನು ಮೋದಿಯವರು ಮಾಡಿದ್ದಾರೆ ಎಂದರು.

ದೇಶದ ಆರ್ಥಿಕ ವ್ಯವಸ್ಥೆ ಹಾಳುಮಾಡಿ, ಬಡಜನರ ಖಾತೆಗಳನ್ನು ಬರಿದಾಗಿಸಿ ಖಾಸಗಿ ಬ್ಯಾಂಕುಗಳು ಹಾಗೂ ಬಂಡವಾಳ ಶಾಹಿ ರಂಗದವರಿಗೆ ದೇಶವನ್ನು ದೀವಾಳಿ ಮಾಡಲು ಗುತ್ತಿಗೆ ನೀಡುತ್ತಿದ್ದಾರೆ. ದೇಶದಲ್ಲಿ ಸಂವಿಧಾನವನ್ನು ತಿದ್ದುಪಡಿ ಮಾಡತೀವಿ, ಸಂವಿಧಾನವನ್ನೇ ಬದಲಾಯಿಸತ್ತೀವಿ ಅಂತಾ ಹೊರಟಿರುವ ಮೋದಿಯವರಿಗೆ ದೇಶದ ಜನ ಸರಿಯಾಗಿ ಪಾಠ ಕಲಿಸುವ ಕೆಲಸವನ್ನು ಮಾಡಿ ತೋರಿಸುತ್ತದೆ. ವಿಶೇಷವಾಗಿ ಮೀನುಗಾರರು ಹಾಗೂ ಮೀನುಗಾರ ಸಮುದಾಯ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಎಂದು ಮರೆಯೋದಿಲ್ಲ ಹಾಗಾಗಿ ಈ ಬಾರಿಯ ಚುನಾವಣೆಯಲ್ಲಿ ಸಂಪೂರ್ಣವಾಗಿ ಬೆಂಬಲ ನೀಡುವ ಮೂಲಕ ರಾಜು ಆಲಗೂರ ಅವರನ್ನು ಗೆಲ್ಲಿಸಲು ಕೆಲಸ ಮಾಡುತ್ತದೆ ಎಂದರು.

ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಏನು ಘೋಷಣೆ ಮಾಡಿದೆ ಖಂಡಿತವಾಗಿ ಆ ಅಷ್ಟು ಬರವಸೆ ಘೋಷಣೆಯನ್ನು ಅನುಷ್ಠಾನಕ್ಕೆ ತಂದು ನಿಮ್ಮೆಲ್ಲರ ಸೇವೆಯನ್ನು ಮಾಡಿ ದೇಶವನ್ನು ಅಭಿವೃದ್ಧಿ ಮಾಡುವ ಕೆಲಸ ಮಾಡುತ್ತಿದೆ. ಜನತೆಯ ಅಭಿವೃದ್ಧಿ ದೇಶದ ಅಭಿವೃದ್ಧಿ ಅಂತಾ ನಂಬಿರುವ ಪಕ್ಷ ಕಾಂಗ್ರೆಸ್ ಪಕ್ಷ ಹಾಗಾಗಿ ಎಲ್ಲರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಮತಹಾಕುವ ಮೂಲಕ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಲೋಣಿ, ಜಿಲ್ಲಾ ಮೀನುಗಾರ ವಿಭಾಗದ ಅಧ್ಯಕ್ಷ ಕೃಷ್ಣಾ ಕಾಮಟೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಜಿಲ್ಲಾ ವೈದ್ಯಕೀಯ ವಿಭಾಗದ ಉಪಾಧ್ಯಕ್ಷ ಪ್ರವೀಣ ಚೌರ ಹಾಗೂ ಮಹಾದೇವಿ ಗೋಕಾಕ, ವಸಂತ ಹೊನಮೊಡೆ ಮುಂತಾದವರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X