ವಿಜಯಪುರ | ಮುಸ್ಲಿಮರನ್ನು ಕಾಂಗ್ರೆಸ್‌ ಕಡೆಗಣಿಸುತ್ತಿದೆ: ಮುಖಂಡರ ಆರೋಪ

Date:

ಕಾಂಗ್ರೆಸ್‌ಗೆ ಮೂಲ ಬಂಡವಾಳವೇ ಮುಸ್ಲಿಮರು. ಇತ್ತೀಚಿನ ವರ್ಷಗಳಲ್ಲಿ ಮೂಲ ಬಂಡವಾಳಿಗರನ್ನೇ ಕಾಂಗ್ರೆಸ್ ಮರೆಯುತ್ತಿದೆ. ಕಾಂಗ್ರೆಸ್‌ನಲ್ಲಿ ಮುಸ್ಲಿಮರನ್ನು ಮೂರನೇ ದರ್ಜೆ ನಾಗರಿಕರನ್ನಾಗಿ ಮಾಡಲಾಗಿದೆ. ಈ ನಿರ್ಲಕ್ಷ್ಯ ಸರಿಯಲ್ಲ ಎಂದು ಮುಸ್ಲಿಂ ಮುಖಂಡರು ಆರೋಪ ಮಾಡಿದ್ದಾರೆ.

- Advertisement -

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಸ್ಲಿಂ ಮುಖಂಡರು “ಮುಂಬರುವ ವಿಧಾನ ಪರಿಷತ್‌ಗೆ ಸದಸ್ಯರ ಆಯ್ಕೆ ವೇಳೆ ಜಿಲ್ಲಾ ಕಾಂಗ್ರೆಸ್, ಅಲ್ಪಸಂಖ್ಯಾತ ಮುಖಂಡರಿಗೆ ಅವಕಾಶ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಅಬ್ದುಲ್ ಹಮೀದ್ ಮುಶ್ರೀಫ್, ಎಸ್. ಎಂ.ಪಾಟೀಲ ಗಣಿಹಾರ, ಮಹಮ್ಮದ್ ರಫೀಕ್ ಟಪಾಲ್, ಎಂ.ಸಿ.ಮುಲ್ಲಾ, ಫಯಾಜ್ ಕಲಾದಗಿ, ನಸೀಂ ರೋಜಿನದಾರ ಸೇರಿದಂತೆ ಹಲವು ಸಮುದಾಯದ ಮುಖಂಡರು, “ಜಿಲ್ಲೆಯಲ್ಲಿ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಮುಸ್ಲಿಂ ಮತದಾರರು ಕಾರಣ. ಹೀಗಾಗಿ ಅವಕಾಶ ಹಾಗೂ ಪ್ರಾಮುಖ್ಯತೆ ಕೇಳುವ ಹಕ್ಕು ನಮಗಿದೆ. ನಾವು ಭಿಕ್ಷೆ ಬೇಡುತ್ತಿಲ್ಲ. ನಮ್ಮ ಪಗಾರ ಕೇಳುತ್ತಿದ್ದೇವೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವಿಗೆ ರಾತ್ರಿ-ಹಗಲು ಕೆಲಸ ಮಾಡಿದ್ದೇವೆ. ಆದರೆ, ಜಿಲ್ಲೆಯ ಮುಸ್ಲಿಂ ಮುಖಂಡರಿಗೆ ನಿಗಮ, ಮಂಡಳಿ, ವಿಧಾನ ಪರಿಷತ್‌ಗೆ ನೇಮಕವಾಗುವಾಗ ಪರಿಗಣಿಸುತ್ತಿಲ್ಲ. ದಕ್ಷಿಣ ಕರ್ನಾಟಕದ ಮುಸ್ಲಿಮರಿಗೆ ಅವಕಾಶ ಲಭಿಸುತ್ತಿದೆ. ಉತ್ತರ ಕರ್ನಾಟಕದವರಿಗೆ ಲಭಿಸುತ್ತಿಲ್ಲ” ಎಂದರು.

ಇದನ್ನೂ ಓದಿ: ವಿಜಯಪುರ | ʼಏತ ನೀರಾವರಿ ಪೂರ್ಣಗೊಳಿಸಿ ರೈತರ ಹಿತ ಕಾಪಾಡಿʼ

ವಿಜಯಪುರ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಲ್ಪಸಂಖ್ಯಾತ ಸಮುದಾಯವಿದೆ. ನಮ್ಮ ಜಿಲ್ಲೆಯ ನಾಯಕರ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಕೂದಲೆಳೆ ಅಂತರದಿಂದ ಎರಡು ಸಮುದಾಯದ ಮುಖಂಡರು ವಿಧಾನಸಭೆ ಚುನಾವಣೆ ಯಲ್ಲಿ ಆಯ್ಕೆಯಾಗಲಿಲ್ಲ. ಈ ಕೊರತೆಯನ್ನು ಜಿಲ್ಲೆಯ ಅಲ್ಪಸಂಖ್ಯಾತ ಮುಖಂಡರೊಬ್ಬರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಮೂಲಕ ನೀಗಿಸಬಹುದಾಗಿದೆ ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...