ವಿಜಯಪುರ | ಕಾಂಗ್ರೆಸ್ ಮಾರುಕಟ್ಟೆ ವ್ಯಾಪಾರಿಗಳ ಪರವಾಗಿದೆ: ಎಂ.ಬಿ ಪಾಟೀಲ

Date:

Advertisements

ಕಾಂಗ್ರೆಸ್ ಯಾವತ್ತೂ ಆರ್ಥಿಕತೆ ಮೂಲವಾದ ವ್ಯಾಪಾರ-ವಹಿವಾಟಿನ ಪರವಿದೆ. ನಾವು ವ್ಯಾಪಾರಿಗಳ ಹಿತ ಕಾಪಾಡುತ್ತಾ ಬಂದಿದ್ದೇವೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.

ವಿಜಯಪುರದ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರ ಪರವಾಗಿ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ನಡೆದ ವ್ಯಾಪಾರಿಗಳ ಹಾಗೂ ಎಲ್ಲ ಸಂಘಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. “ದೇಶ ಈ ಹತ್ತು ವರ್ಷಗಳಲ್ಲಿ ಏನೇನು ಅನುಭವಿಸಿದೆ ನಿಮಗೆ ಗೊತ್ತಿದೆ. ಎಲ್ಲದರ ಮೇಲೆ ಜಿಎಸ್‌ಟಿ ದಾಳಿಯನ್ನು ವ್ಯಾಪಾರಿಗಳಾದ ನೀವು ಅನುಭವಿಸಿದ್ದೀರಿ. ಮನಮೋಹನ್ ಸಿಂಗ್‌ ಅವರು ಇದ್ದಾಗ ದೇಶದ ಆರ್ಥಿಕ ಸ್ಥಿತಿ ಅತ್ಯಂತ ಬಲಿಷ್ಠವಾಗಿತ್ತು. ಆದರೆ ಮೋದಿ ಆಡಳಿತ ಬಂದ ಮೇಲೆ ಅದು ಕುಸಿಯುತ್ತ ಬಂದಿದೆ. ಇದರ ನೇರ ಪರಿಣಾಮವನ್ನು ನೀವು ಉಂಡಿದ್ದೀರಿ” ಎಂದು ವಿವರಿಸಿದರು.

“ಚುನಾವಣಾ ಬಾಂಡ್ ಮೂಲಕ ಅನಧಿಕೃತವಾಗಿ ಹಣ ಎತ್ತಲಾಗಿದೆ. ಹೆದರಿಸಿ-ಬೆದರಿಸಿ ವ್ಯಾಪಾರಿಗಳ, ಉದ್ಯೋಗಪತಿಗಳಿಂದ ವಸೂಲಿ ಮಾಡಲಾಗಿದೆ. ಇದೆಲ್ಲವನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಜಿಲ್ಲೆಯ ತೋಟಗಾರಿಕೆ, ಎಲ್ಲ ಬೆಳೆಗಳ ಹಿತ, ಅಭಿವೃದ್ಧಿಗೆ ಹಾಗೂ ನಿಮ್ಮ ವ್ಯಾಪಾರ-ವಹಿವಾಟಿನ ಉಳಿವಿಗಾಗಿ ಯೋಚಿಸಿ ಮತ ನೀಡಿ. ಶರದ್ ಪವಾರ ಅವರ ಬಾರಾಮತಿಯಂತೆ ವಿಜಯಪುರವನ್ನು ಬೆಳೆಸೋಣ” ಎಂದು ಹೇಳಿದರು.

Advertisements

ಮಾರುಕಟ್ಟೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ ಮಾತನಾಡಿ, “ಎಪಿಎಂಸಿಗಾಗಿ ಕೇಂದ್ರ ಸರಕಾರವನ್ನು ಮೀರಿ ನಿಮ್ಮೊಂದಿಗೆ ನಿಂತಿದ್ದು ರಾಜ್ಯ ಸರ್ಕಾರ. ಇದರಿಂದ ನಿಮಗೆ ಬಹುಪಯೋಗವಾಗಿದೆ. ಯಾರು ಯಾರೋ ಬಂದು ನಮ್ಮನ್ನು ಬೈದು ಮತ ಕೇಳುವವರ ಮಾತು ಕೇಳಬೇಡಿ. ಸದ್ಯದ ಸಂಸದನಿಗೆ ಪದೇ ಪದೇ ಅಧಿಕಾರ ನೀಡಿದರೂ ನಿಮ್ಮ ಹಣೆ ಬರಹ ಬದಲಾಗಿಲ್ಲ. ದೇಶವನ್ನು ಮೋದಿ-ಶಾ ಮಾತ್ರ ಆಳುತ್ತಿದ್ದಾರೆ. ನೀವೆಲ್ಲ ತಿಳಿದವರು. ಹಮಾಲರು ಊಟಕ್ಕೂ ಪರಿದಾಡುತ್ತಿದ್ದಾರೆ. ಮೋದಿ ದೊಡ್ಡವರ ಪರ ಇದ್ದಾರೆ. ಸಣ್ಣ ವ್ಯಾಪಾರಿಗಳ ಕಾಳಜಿ ಅವರಿಗಿಲ್ಲ” ಎಂದರು.

ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ, ಎಐಸಿಸಿ ವೀಕ್ಷಕ ಸಯೀದ್ ಬುರಾನುದ್ದೀನ, ಶಾಸಕರಾದ ಪ್ರಕಾಶ ರಾಠೋಡ, ವಿಠ್ಠಲ ಕಟಕದೊಂಡ, ಅಶೋಕ ಮನಗೂಳಿ, ಮಾಜಿ ಶಾಸಕ ಶರಣಪ್ಪ ಸುಣಗಾರ, ಹಮೀದ್ ಮುಶ್ರೀಫ್, ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ವೀಕ್ಷಕ ಸಯೀದ್ ಬುರಾನ್, ಡಾ. ಮಕ್ಬೂಲ್ ಬಾಗವಾನ, ಸೈಯ್ಯದ ನೂರುದ್ದೀನ್, ಸಂಘದ ಅಧ್ಯಕ್ಷ ರವೀಂದ್ರ ಬಿಜ್ಜರಗಿ, ವೈಜನಾಥ ಕರ್ಪೂರಮಠ, ಪಕ್ಷದ ಜಿಲ್ಲಾಧ್ಯಕ್ಷ ಎಂ. ಎಸ್. ಲೋಣಿ, ಗುಡ್ಡೂ ಮಹೀಂದ್ರಕರ, ಫಾರೂಖ ಬಾಗವಾನ, ಸಂಗಪ್ಪ ಹೇರಲಗಿ, ಸುರೇಶ ಗಚ್ಚಿನಕಟ್ಟಿ, ಅರುಣ ಹುಂಡೆಕಾರ ಅನೇಕರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X