ವಿಜಯಪುರ | ಭಾರತೀಯರಿಗೆ ಗೌರವದ ಬದುಕು ನೀಡಿದ ಗ್ರಂಥ ಸಂವಿಧಾನ: ಶಾಕು ಬೋಧಿಧಮ್ಮ

Date:

Advertisements

ಭಾರತದ ಸಂವಿಧಾನ ಗ್ರಂಥವು ಸಮಸ್ತ ಭಾರತೀಯರಿಗೆ ಗೌರವದ ಬದುಕನ್ನು ನೀಡಿದೆ. ಅಂಥ ಸಂವಿಧಾನವನ್ನು ಗೌರವಿಸುವುದು ಭಾರತೀಯರ ಕರ್ತವ್ಯ ಎಂದು ಝೆನ್ ಬೌದ್ಧ ಭಿಕ್ಷು ಡಾ. ಶಾಕು ಬೋಧಿಧಮ್ಮ ಹೇಳಿದರು.

ಅಂತಾರಾಷ್ಟ್ರೀಯ ಬೌದ್ಧ ಯುವ ಸಂಘಟನೆ, ಫುಲೆ-ಶಾಹು-ಅಂಬೇಡ್ಕರ್ ಸ್ಟೂಡೆಂಟ್ಸ್ ಫೆಡರೇಷನ್, ಬುದ್ಧ-ಬಸವ-ಅಂಬೇಡ್ಕರ್ ಮಿಷನ್, ಬುದ್ಧ ವಿಹಾರ ನಿರ್ಮಾಣ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ವಿಜಯಪುರ ನಗರದ ಹಲವೆಡೆ ಹಮ್ಮಿಕೊಂಡಿದ್ದ “ಸಂವಿಧಾನ ಸಮ್ಮಾನ್ ರ‍್ಯಾಲಿ”ಗೆ ಚಾಲನೆ ನೀಡಿ ಮಾತನಾಡಿದರು.

“ಬಾಬಾಸಾಹೇಬ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಭಾರತದ ಎಲ್ಲ ಜಾತಿ ಜನಾಂಗದವರಿಗೆ, ಎಲ್ಲ ಧರ್ಮೀಯರಿಗೆ ಸಮಾನಹಕ್ಕು ಮತ್ತು ಅವಕಾಶಗಳನ್ನು ಒದಗಿಸಿಕೊಟ್ಟಿದ್ದಾರೆ. ಧ್ವನಿಯಿಲ್ಲದ ಶೋಷಿತ ವರ್ಗಗಳಿಗೆ ಮತ್ತು ಮಹಿಳೆಯರಿಗೆ ಧ್ವನಿ ನೀಡಿದ್ದಲ್ಲದೆ, ಅವರಿಗೆ ಗೌರವಯುತ ಬದುಕು ನೀಡಿದ್ದಾರೆ. ಆದರೆ ಕೆಲವರು ಸಂವಿಧಾನ ಬದಲಾಯಿಸುವ ಬಗ್ಗೆ ಮಾತನಾಡುತ್ತಾರೆ. ಕೇಂದ್ರ ಸರ್ಕಾರದ ಒಬ್ಬ ಮಂತ್ರಿ ತಾವು ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಬಹಿರಂಗವಾಗಿ ಹೇಳುತ್ತಾರೆ. ಸಂವಿಧಾನ ಬದಲಾದರೆ ಪ್ರಜಾಪ್ರಭುತ್ವದ ಸೌಧವೇ ಕುಸಿಯುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.‌

Advertisements

“ಪ್ರಸ್ತುತದಲ್ಲಿ ಸಂವಿಧಾನ ಅಪಾಯದಲ್ಲಿದೆಯೆಂದು ಮನಗಂಡ ಅನೇಕ ಸಮಾನತಾವಾದಿ ಸಂಘಟನೆಗಳು, ಲೇಖಕರು, ಚಿಂತಕರು ಸಂವಿಧಾನ ರಕ್ಷಣಾ ಹೋರಾಟಗಳನ್ನು ಮಾಡುತ್ತಿದ್ದಾರೆ. ಸಂವಿಧಾನವನ್ನು ಉಳಿಸಿಕೊಳ್ಳುವುದು ಎಷ್ಟು ಮುಖ್ಯವೋ ಸಂವಿಧಾನವನ್ನು ಗೌರವಿಸುವುದೂ ಅಷ್ಟೇ ಮುಖ್ಯ ಎಂಬುದನ್ನು ಪ್ರತಿಯೊಬ್ಬ ಭಾರತೀಯರೂ ಅರಿತಾಗ ಮಾತ್ರ ಸಂವಿಧಾನ ರಕ್ಷಣೆ ಸಾಧ್ಯ” ಎಂದು ಭಂತೆ ಬೋಧಿಧಮ್ಮ ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ಪ್ರಾರಂಭವಾದ ಸಂವಿಧಾನ ಸಮ್ಮಾನ್ ರ‍್ಯಾಲಿಯು ನಗರದ ಪ್ರಮುಖ ಬೀದಿಗಳ ಮೂಲಕ ಹಾಯ್ದು, ಗಾಂಧಿ ವೃತ್ತ, ಬಸವೇಶ್ವರ ವೃತ್ತದ ಮಾರ್ಗವಾಗಿ ಸಂಚರಿಸಿ ಡಾ. ಅಂಬೇಡ್ಕರ್ ವೃತ್ತದಲ್ಲಿ ಮುಕ್ತಾಯಗೊಂಡಿತು. ಭಂತೆ ಬೋಧಿಧಮ್ಮ ರ‍್ಯಾಲಿಯ ನೇತೃತ್ವ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಗದಗ | ಸಿರಿಧಾನ್ಯದಲ್ಲಿ ಮೂಡಿದ ಚಿತ್ತಾಕರ್ಷಕ ರಂಗೋಲಿ

‌ಬುದ್ಧವಿಹಾರ ನಿರ್ಮಾಣ ಸಮಿತಿ ನಿರ್ದೇಶಕ, ಹಿರಿಯ ಪತ್ರಕರ್ತ ಅನಿಲ ಹೊಸಮನಿ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಚೆನ್ನು ಕಟ್ಟಿಮನಿ ಅವರು ರ‍್ಯಾಲಿಗೆ ಚಾಲನೆ ನೀಡಿದರು. ಯುವ ಮುಖಂಡರುಗಳಾದ ಸಂಜು ಗುನ್ನಾಪುರ, ರಮೇಶ ಬೋರಗಿ, ಸಂತೋಷ ಕಾಂಬಳೆ, ಸುಜಲ ಕಾಂಬಳೆ, ಪವನ್ ಚೌಡಿಕರ, ರಕ್ಷಿತ್ ಗುನ್ನಾಪುರ, ಆನಂದ ಔರಂಗಾಬಾದ್, ಸಂಘರ್ಷ ಹೊಸಮನಿ, ಅನಂತ ವರಕನಹಳ್ಳಿ, ಸಿದ್ರಾಮ ವೀರಕರ, ರಾಜರತ್ನ ಕಾಂಬಳೆ, ಆದರ್ಶ ಕೋಟ್ಯಾಳ, ಅಜಿತ ಕಟ್ಟಿಮನಿ, ಪ್ರತಾಪ ಚಿಕ್ಕಲಕಿ, ಕೀರ್ತಿಕುಮಾರ ಕಾಖಂಡಕಿ ಸೇರಿದಂತೆ ನೂರಾರು ಯುವಕರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X