ವಿಜಯಪುರ | ಸಂವಿಧಾನ ಪ್ರತಿಯೊಬ್ಬರ ಜೀವನದ ಮಾರ್ಗದರ್ಶಿಯಾಗಲಿ: ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ

Date:

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಮ್ಮ ಇಡೀ ಜೀವಮಾನದ ಅನುಭವಗಳನ್ನು ಧಾರೆಯೆರೆದು ರಚಿಸಿದ ಸಂವಿಧಾನ ನಮ್ಮ ದೇಶದ ನಾಗರಿಕರು ಸ್ವತಂತ್ರವಾಗಿ ಬದುಕಲು ಅವಕಾಶಗಳನ್ನು ಕಲ್ಪಿಸಿದೆ. ನ್ಯಾಯ. ಸಮಾನತೆ, ಲಿಂಗ ಮತ್ತು ಆರ್ಥಿಕ ಸಮಾನತೆಯನ್ನು ಭದ್ರಪಡಿಸಿಕೊಳ್ಳಲು ಅವಕಾಶ ನೀಡಿದೆ. ಇಂಥ ಅದ್ಭುತ ಸಂವಿಧಾನ ಪ್ರತಿಯೊಬ್ಬರೂ ಅರ್ಥೈಸಿಕೊಂಡು ಪಾಲನೆ ಮಾಡಬೇಕು ಎಂದು ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ಹೇಳಿದರು.

- Advertisement -

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನಮ್ಮ ಸಂವಿಧಾನ ಪ್ರತಿಯೊಬ್ಬರ ಜೀವನದ ಮಾರ್ಗದರ್ಶಿಯಾಗಬೇಕು. ದೇಶದ ಆರ್ಥಿಕ, ಸಾಮಾಜಿಕ ಬದಲಾವಣೆಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತಿದ್ದು, ನಮ್ಮ ರಾಷ್ಟ್ರ ಬಲಿಷ್ಠವಾಗಿ, ಸದೃಢವಾಗಲು ಎಲ್ಲರಿಗೂ ಸಮಾನವಾಗಿ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಈ ನಿಟ್ಟಿನಲ್ಲಿ ನಮ್ಮ ಮಹಿಳಾ ವಿವಿಯ ವಿದ್ಯಾರ್ಥಿನಿಯರು ಉನ್ನತವಾದ ಜ್ಞಾನ ಸಂಪಾದಿಸಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವಂತಾಗಬೇಕು” ಎಂಬ ಆಶಯ ವ್ಯಕ್ತಪಡಿಸಿದರು.

“ನಾವು ಇವತ್ತು ಜ್ಞಾನಾಧಾರಿತ ಸಮಾಜದಲ್ಲಿ ಬದುಕುತ್ತಿದ್ದೇವೆ. ಜ್ಞಾನವೇ ಇಂದು ಬಹು ಮುಖ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಕಷ್ಟಪಟ್ಟು ಜ್ಞಾನ ಸಂಪಾದಿಸಬೇಕು. ಜ್ಞಾನ ಸಂಪಾದಿಸದೇ ಹೋದರೆ ಈ ಸಮಾಜದಲ್ಲಿ ಮೋಸಹೋಗುವ ಸಾಧ್ಯತೆಗಳಿವೆ. ನಮ್ಮ ದಿನನಿತ್ಯದ ಜೀವನ ಸುಗಮವಾಗಿ ಮತ್ತು ನಿರಾತಂಕವಾಗಿ ನಡೆಯಬೇಕಾದರೆ ಜ್ಞಾನ ಅತ್ಯವಶ್ಯ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಜ್ಞಾನ ವಿಸ್ತರಿಸಲು ಮಹಿಳಾ ವಿಶ್ವವಿದ್ಯಾಲಯ ಸಾಧ್ಯವಿರುವ ಎಲ್ಲ ಸೌಲಭ್ಯಗಳನ್ನೂ ಒದಗಿಸುತ್ತದೆ” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಣರಾಜ್ಯೋತ್ಸವದಲ್ಲಿ ಜೈಶ್ರೀರಾಮ್‌ ಘೋಷಣೆ; ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಭಾವಚಿತ್ರ ಇಡದೆ ಅವಮಾನ

ಗಣರಾಜ್ಯೋತ್ಸವದ ಮಹತ್ವ ಕುರಿತು ಕುಲಸಚಿವ ಶಂಕರಗೌಡ ಸೋಮನಾಳ ಅವರು ವಿದ್ಯಾರ್ಥಿನಿಯರಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟು ವಿಜೇತ ವಿದ್ಯಾರ್ಥಿನಿಯರಿಗೆ ನಗದು ಬಹುಮಾನ ವಿತರಿಸಿದರು.

ಸಂಗೀತ ವಿಭಾಗದ ವಿದ್ಯಾರ್ಥಿನಿಯರಿಂದ ರಾಷ್ಟ್ರೀಯ ಗೀತೆಗಳ ಗಾಯನ ನಡೆಯಿತು. ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ್, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ ಹನುಮಂತಯ್ಯ ಪೂಜಾರ, ಹಾಸ್ಟೆಲ್‌ಗಳ ಮುಖ್ಯ ವಾರ್ಡನ್ ಪ್ರೊ ಜ್ಯೋತಿ ಉಪಾಧ್ಯೆ, ವಿವಿಯ ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...