ವಿಜಯಪುರ | ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಸಮಾಲೋಚನೆ ಸಭೆ

Date:

ನಮ್ಮ ದೇಶ ಬಹುಸಂಸ್ಕೃತಿಗೆ ಪ್ರಖ್ಯಾತಿಯನ್ನು ಪಡಿದಿದೆ. ವಿವಿಧತೆಯಲ್ಲಿ ಏಕತೆಯನ್ನು ನಮ್ಮ ರಾಷ್ಟ್ರ ಹೊಂದಿದೆ. ಹಲವಾರು ಜಾತಿ, ಮತ, ಪಂಥಗಳು ಇವೆ. ಹಾಗಾಗಿ ನಾವೆಲ್ಲರೂ ಸುಮಾರು 75 ವರ್ಷಗಳಿಂದ ಸಾಮರಸ್ಯದಿಂದ ಬದುಕುತಿದ್ದೇವೆ ಎಂದು ಎದ್ದೇಳು ಕರ್ನಾಟಕ ವಿಜಯಪುರ ಜಿಲ್ಲಾ ಕೋಆರ್ಡಿನೆಟರ್ ಮಹಮ್ಮದ್ ಅಬ್ದುಲ್ ಖದೀರ್ ಹೇಳಿದರು.

ವಿಜಯಪುರ ನಗರದ ನವ ಸಾನಿಧ್ಯ ಸಂಸ್ಥೆ ಮತ್ತು ಝಾನ್ಸಿ ರಾಣಿ ಮಹಿಳಾ ಒಕ್ಕೂಟ, ಎದ್ದೇಳು ಕರ್ನಾಟಕ, ಈ ದಿನ.ಕಾಮ್‌ ಸಹಯೋಗದಲ್ಲಿ ನಡೆದ ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು.

“ಪ್ರಸ್ತುತ ಕೇಂದ್ರ ಸರ್ಕಾರವು ಕೋಮುವಾದಿ ವಿಚಾರವನ್ನು ಮುನ್ನಲೆಗೆ ತಂದು ಜನಗಳ ನಡುವೆ ಹೊಡೆದಾಳುವ ನೀತಿ ಜಾರಿಗೆ ತರುತ್ತಿದೆ. ಇದರ ವಿರುದ್ಧ ಬಲಿಷ್ಠ ಜನಾಂದೋಲನ ಬೆಳೆಯಬೇಕು.
ಈ ಹಿನ್ನಲೆಯಲ್ಲಿ ನಾವೆಲ್ಲರೂ ಕೆಲಸ ಮಾಡುವ ಅವಶ್ಯಕತೆ ಇದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವಿಚಾರಗಳನ್ನು ಎಲ್ಲ ಸಮುದಾಯದ ಜನರಿಗೆ ಮನುವರಿಕೆ ಮಾಡಿಸುವುದು ಇಂದಿನ ತುರ್ತು ಅಗತ್ಯವಿದೆ. ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ರೈತ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳಿ ಎಂದು ದೇಶದ ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಈ ಬೇಡಿಕೆ ಈಡೇರಿಸಲು ಸಂಯುಕ್ತ ಕಿಸಾನ್ ಮೋರ್ಚಾವು ಕಳೆದ 2 ವರ್ಷದ ಹಿಂದೆ ಹೋರಾಟ ಮಾಡಿದಾಗ ಮಂಡಿಯೂರಿ ಕೇಂದ್ರ ಸರ್ಕಾರವು ಈ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಮಾತು ಕೊಟ್ಟಿತ್ತು. ಆದರೆ ಮಾತು ತಪ್ಪಿದ ಕೇಂದ್ರ ಸರ್ಕಾರವು ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳಲಿಲ್ಲ”‌ ಎಂದು ಆರೋಪಿಸಿದರು.

ಮಾತು ತಪ್ಪಿರುವ ಕೇಂದ್ರದ ವಿರುದ್ಧ ರೈತರು ಹೋರಾಟ ಮಾಡಿದರೆ, ರೈತರ ಮೇಲೆ ಗೋಲಿ ಬಾರ್, ಅಶ್ರುವಾಯು ದಾಳಿ, ಅರೆಸೇನಾ ಪಡೆ ಬಳಸಿ ರೈತರನ್ನು ಅಧೋಗತಿಗೆ ತಳ್ಳುವಂತಹ ಎಲ್ಲ ಪ್ರಯತ್ನಗಳನ್ನೂ ಕೇಂದ್ರ ಸರ್ಕಾರ ಮಾಡುತ್ತಿದೆ. ಆದರೆ ರೈತರು ಯಾವುದೇ ಕಾರಣಕ್ಕೂ ಹಿಂಜರಿಯದೆ ಒಂದು ಹೆಜ್ಜೆ ಮುಂದೆ ಹಿಟ್ಟು ಹೋರಾಟ ಕಟ್ಟುತ್ತಿದ್ದಾರೆ. ಇದು ನಮ್ಮೆಲ್ಲರಿಗೂ ಸ್ಪೂರ್ತಿಯಾಗಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಮಾಜ ತಿದ್ದುವ ಶಕ್ತಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೆ: ದೊಡ್ಡಣ್ಣ ಬಜಂತ್ರಿ

“ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿದಾನ ಉಳಿಸುವುದು ಅತ್ಯಂತ ಅವಶ್ಯಕತೆ ಇದೆ. ಬರುವ ಚುನಾವಣೆಯಲ್ಲಿ ಕೇಂದ್ರ ಸರ್ಕಾರವನ್ನು ಸೋಲಿಸುವ ಮೂಲಕ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ನಾವೆಲ್ಲರೂ ಬದ್ಧರಾಗೋಣ” ಎಂದು ಕರೆ ನೀಡಿದರು.

ಈ ಸಂರ್ಭದಲ್ಲಿ ಝಾನ್ಸಿ ರಾಣಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಭಾಗೀರಥಿ ಮಲ್ಲಿಕಾರ್ಜುನ ರಾಮತೀರ್ಥ, ನವ ಸಾನಿಧ್ಯ ಸಂಸ್ಥೆಯ ಮುಖ್ಯಸ್ಥೆ ಸಿಸ್ಟರ್ ಜೋಲಿ, ಈ ದಿನ.ಕಾಮ್‌ ಜಿಲ್ಲಾ ಕೋಆರ್ಡಿನೇಟರ್ ರಮೇಶ್ ಹೊಸಮನಿ ಸೇರಿದಂತೆ ಇತರರು ಇದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ...

ಗದಗ | ತಾಲೂಕು ಆಡಳಿತದಿಂದ ‘ಮೇವು ಬ್ಯಾಂಕ್’ ಆರಂಭ; ಕೆ.ಜಿಗೆ 2 ರೂ. ದರ ನಿಗದಿ

ಕೊಣ್ಣೂರು : ಜಾನುವಾರುಗಳಿಗೆ ಮೇವು ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವು...