ಡಿಸೈನಿಂಗ್‌ನಲ್ಲಿ ಕ್ರಿಯಾಶೀಲತೆ ಮತ್ತು ಕೌಶಲ್ಯ ಬಹಳ ಮುಖ್ಯ. ಸಾವಿರಾರು ಅಕ್ಷರಗಳಲ್ಲಿ ಹೇಳಬೇಕಾದ ಸಂಗತಿಯನ್ನು ಕೇವಲ ಒಂದು ಚಿತ್ರದ ಮೂಲಕ ಹೇಳಬಹುದಾಗಿದೆ ಎಂದು ಐಕ್ಯೂಎಸ್‌ಸಿ ನಿರ್ದೇಶಕ ಪ್ರೊ. ಪಿ.ಜಿ. ತಡಸದ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಇವರ ಸಹಯೋಗದಲ್ಲಿ ಆಯೋಜಿಸಿದ್ದ ʼಗ್ರಾಫಿಕ್ ಡಿಸೈನಿಂಗ್ʼ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಯಾವುದು ಅಕ್ಷರಗಳಲ್ಲಿ ಹೇಳಲು ಅಸಾಧ್ಯವೊ ಅಂತಹದ್ದನ್ನು ನಾವು ಒಂದು ಗ್ರಾಫಿಕ್ ಮೂಲಕ ತಿಳಿಸಬಹುದು. ಸಾವಿರಾರು ಅಕ್ಷರಗಳಲ್ಲಿ ಹೇಳುವ ಮಾಹಿತಿಯನ್ನು ಬರೀ ಒಂದು ಚಿತ್ರದ ಮೂಲಕ ತಿಳಿಸುವ ಶಕ್ತಿ ಗ್ರಾಫಿಕ್‌ಗೆ ಇದೆ. ಗ್ರಾಫಿಕ್ ಡಿಸೈನ್ ಬರೀ ಒಂದು ಕ್ಷೇತ್ರದಲ್ಲಿ ಮಾತ್ರವಲ್ಲ ಪ್ರತಿಯೊಂದು ಕ್ಷೇತ್ರದಲ್ಲಿಯೂ ತನ್ನದೇ ಆದ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಆದ ಕಾರಣ ನೀವೆಲ್ಲರು ಅದರ ಸದುಪಯೋಗವನ್ನು ಮತ್ತು ಅದರ ಕೌಶಲ್ಯಗಳನ್ನು ರೂಡಿಸಿಕೊಳ್ಳಬೇಕು.
ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಮಾತನಾಡಿ, ಡಿಜಿಟಲ್ ಮಾಧ್ಯಮ ಕ್ಷಿಪ್ರಗತಿಯಲ್ಲಿ ಬೆಳವಣಿಗೆ ಹೊಂದುತ್ತಿದ್ದು, ಗ್ರಾಫಿಕ್ ಡಿಸೈನ್‌ಗೆ ಪ್ರಸ್ತುತ ದಿನಮಾನಗಳಲ್ಲಿ ಅತೀ ಹೆಚ್ಚಿನ ಬೇಡಿಕೆ ಇದೆ. ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಗ್ರಾಫಿಕ್ ಡಿಸೈನರ್‌ಗಳು ಸಿಗುತ್ತಿಲ್ಲ. ಇದರ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿನಿಯರು ವೃತ್ತಿ ಬದುಕು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಕಾರ್ಯಾಗಾರದಲ್ಲಿ ಮುಂಬರುವ ದಿನಗಳಲ್ಲಿ ಬಹಳಷ್ಟು ಸಹಾಯಕಾರಿಯಾಗಿದ್ದು, ಇದನ್ನು ನೀವು ರೂಢಿಗತ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಎರಡು ದಿನಗಳ ಕಾಲ ನಡೆದ ಈ ಕಾರ್ಯಗಾರದ ಕುರಿತು ವಿದ್ಯಾರ್ಥಿನಿಯರು ತಮ್ಮ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂದೀಪ್ ನಾಯಕ್ ಮತ್ತು ಪ್ರಜಾವಾಣಿ ಪತ್ರಿಕೆಯ ಗ್ರಾಫಿಕ್ ಡಿಸೈನರ್ ಮಂಜುನಾಥ ಹುಲಕೊಪ್ಪದ ಹಾಗೂ ವಿವಿಧ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಯರು ಮತ್ತು ಸಹಾಯಕ ಪ್ರಾಧ್ಯಾಪಕಿ ಡಾ. ತಹಮೀನಾ ಸುಲ್ತಾನ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ದೀಪಾ ತಟ್ಟಿಮನಿ ನಿರೂಪಿಸಿದರು. ಸುಷ್ಮಾ ಪವರ ವಂದಿಸಿದರು.