ಕ್ರೂಜರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದ ಸಮೀಪವಿರುವ ಕೊಂಡಗೂಳಿ ರಸ್ತೆಯ ಕ್ಯಾನಲ್ ಬಳಿ ಸಂಭವಿಸಿದೆ.
ಬಿಂಜಲಬಾವಿ ಗ್ರಾಮದ ನಿವಾಸಿಗಳು ವಿಜಯಪುರದಲ್ಲಿ ಇಸ್ತಮಾ ಮುಗಿಸಿಕೊಂಡು ಗ್ರಾಮಕ್ಕೆ ಹೋಗುವಾಗ ಕ್ರೂಜರ್ ಪಲ್ಟಿಯಾಗಿದೆ. ಈ ವೇಳೆ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಬೈಕ್ ಢಿಕ್ಕಿ; ಪಾದಚಾರಿ ಸಾವು
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ವಿಜಯಪುರದ ಖಾಸಗಿ ಹಾಗೂ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಈ ಕುರಿತು ಪ್ರಕರಣ ದಾಖಲಾಗಿಲ್ಲ ಎನ್ನಲಾಗಿದೆ.