ವಿಜಯಪುರ | ಒಳಮೀಸಲಾತಿ, ಎ ಜೆ ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ದಲಿತ ಮುಖಂಡರ ಆಗ್ರಹ

Date:

ಒಳಮೀಸಲಾತಿ, ಎ ಜೆ ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ದಲಿತ ಸಮುದಾಯದ ಮುಖಂಡರು ಸೇರಿದಂತೆ ಒಳಮೀಸಲಾತಿಗೆ ಒಳಪಡುವ ಎಲ್ಲ ಜನಾಂಗದವರು ಒಗ್ಗೂಡಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಮುದ್ದೇಬಿಹಾಳ ಪಟ್ಟಣದ ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ಇತರ ಪ್ರಮುಖ ವೃತ್ತಗಳಲ್ಲಿ ಸಂಚರಿಸಿದ ಈ ಬೃಹತ್‌ ಮೆರವಣಿಗೆ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾ‌ರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇದಕ್ಕೂ ಮುನ್ನ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಬಹಿರಂಗ ಸಭೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ದಲಿತ ಮುಖಂಡ ಡಿ ಬಿ ಮುದೂರ ಮಾತನಾಡಿ, “ಸರ್ಕಾರ ಒಳಮೀಸಲಾತಿ ಜಾರಿಗೊಳಿಸಬೇಕಾಗಿದೆ. ಆದರೆ ಈವರೆಗೆ ಒಳಮೀಸಲಾತಿ ಅನುಷ್ಠಾನಕ್ಕೆ ತಂದಿಲ್ಲ. ಹಾಗಾಗಿ ಒಳಮೀಸಲಾತಿಗೆ ಒಳಪಡುವ ಎಲ್ಲ ಜನಾಂಗದವರೂ ಈ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸರ್ಕಾಕ್ಕೆ ಹಕ್ಕೊತ್ತಾಯ ಮಾಡುತ್ತಿದ್ದೇವೆ” ಎಂದರು.

“ಸತತ 30‌ ರಿಂದ 40 ವರ್ಷದಿಂದ ಈ ಹೋರಾಟ ನಡೆಯುತ್ತಲೇ ಇದೆ. ಜತೆಗೆ ಸರ್ವೋಚ್ಚ ನ್ಯಾಯಾಲಯ ಒಳಮೀಸಲಾತಿ ಜಾರಿಗೆ ಆದೇಶ ಹೊರಡಿಸಿದೆ. ಆದರೆ ಈವರೆಗೂ ಒಳಮೀಸಲಾತಿ ಜಾರಿ ಮಾಡಿಲ್ಲ. ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪಿ ಈ ಹೋರಾಟ ಮುಂದುವರೆಸಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕೊಲ್ಹಾರದ ಕಲ್ಲು ಗಣಿಗಾರಿಕೆ ಬಂದ್ ಮಾಡುವಂತೆ ರೈತರ ಆಗ್ರಹ

ಸಿ ಜಿ ವಿಜಯಕರ ಮಾತನಾಡಿ, “ಶೋಷಿತ ವರ್ಗದ ಜನರಿಗೆ ಸಮಾನತೆಯಲ್ಲಿ ಅನ್ಯಾಯವಾಗುತ್ತಿದೆ. ಸರಿಸಮಾನತೆ ಈ ಜನಾಂಗದವರಿಗೂ ಸಿಗಬೇಕು. ಹಿಂದುಳಿದ ವರ್ಗದವರಿಗೆ ನ್ಯಾಯ ಸಿಗಬೇಕು. ಒಳಮೀಸಲಾತಿ ಜಾರಿಯಾದರೆ ಇದೆಲ್ಲವೂ ದೊರಕುವ ಸಾಧ್ಯತೆಯಿದೆ” ಎಂದು ಸರ್ಕಾರಕ್ಕೆ ಒತ್ತಾಯಸಿದ್ದು, ಒಳಮೀಸಲಾತಿಯ ಮಹತ್ವದ ಬಗ್ಗೆ ತಿಳಿಸಿದರು.

ಮುಖಂಡರುಗಳಾದ ಹರೀಶ್ ನಾಟೀಕಾರ, ತಂಗಡಿಯವರಾದ ಶಾಂತಪ್ಪ ಪೂಜಾರಿ, ಡಿ ಬಿ‌ ಮುದೂರ, ಸಿ ಜಿ ವಿಜಯಕರ್, ಬಾಲಚಂದ್ರ ಹುಲ್ಲೂರ, ಪರಶುರಾಮ ಕೂಚಬಾಳ, ಹುಲಗಪ್ಪ ನಾಗರಬೆಟ್ಟ, ಬಸವರಾಜ ನಾಗರಬೆಟ್ಟ, ಭೀಮಣ್ಣ ಲೋಟಗೇರಿ, ರವಿ ಬಸರಕೋಡ, ರವಿ ಗರಸಂಗಿ, ಬೈಲಪ್ಪ ಗರಸಂಗಿ, ರಾಘು ನಾಲತವಾಡ, ಶಿವು ನಾಲತವಾಡ, ನಾಗಪ್ಪ ಲೋಟಗೇರಿ, ಶೇಕು ಮಾದರ, ಪುರಸಭೆ ಸದಸ್ಯ ಶಿವು ಶಿವಪುರ, ಪ್ರಶಾಂತ ಕಾಳೆ, ಪ್ರಕಾಶ ಸರೂರ, ದೇವರಾಜ ಹಂಗರಗಿ, ಕಾಶೀನಾಥ್ ದೊಡ್ಡಮನಿ ಪೂಜಾರಿ ಸೇರಿದಂತೆ ಇತರ ದಲಿತ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...