ವಿಜಯಪುರ | ತುರ್ತಾಗಿ ಒಳಮೀಸಲಾತಿ ನೀಡುವಂತೆ ದಲಿತ ಸಂಘಟನೆಗಳ ಆಗ್ರಹ

Date:

ನ್ಯಾ.ಸದಾಶಿವ ಆಯೋಗದ ವರದಿ ಅನುಸಾರ, ಸುಪ್ರಿಂ ಕೋರ್ಟ್‌ ತೀರ್ಮಾನದಂತೆ ರಾಜ್ಯ ಸರ್ಕಾರ ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಮುಖಂಡರು ಹಾಗೂ ನೂರಾರು ಸದಸ್ಯರು ಪ್ರತಿಭಟನೆ ನಡೆಸಿದರು.

- Advertisement -

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದ ಸಂಘಟಕರು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ ಎಸ್ ನಾಡಗೌಡರ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಡಿವೈಎಸ್‌ಪಿ ಬಲ್ಲಪ್ಪ ನಂದಗಾಂದೆ, ಸಿಪಿಐ ಮಲ್ಲಿಕಾರ್ಜನ ತುಳಸಿಗೇರಿ, ಪಿಎಸ್‌ಐ ಸಂಜಯ್ ತಿಪ್ಪಾರೆಡ್ಡಿ ಸೇರಿದಂತೆ ನೂರಾರು ಪೋಲಿಸರು ಪ್ರತಿಭಟಟನಾಕಾರರನ್ನು ತಡೆದಿದ್ದು, ತಹ‌ಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಕೋರಿದರು.‌

ದಲಿತ ಚಳುವಳಿಯ ಮುಖಂಡ ಡಿ ಬಿ ಮೂದೂರ ಮಾತನಾಡಿ, “ದೇಶದಲ್ಲಿ ತೀರಾ ಹಿಂದುಳಿದ ಕೊಳಚೆ ಪ್ರದೇಶದಲ್ಲಿ ಜೀವನ ನಡೆಸುತ್ತಿರುವ ಮಾದಿಗ ಸಮುದಾಯ ಬಾಂಧವರ ಮಕ್ಕಳು ಶಿಕ್ಷಣವಂತರಾಗಿ ಮುನ್ನಲೆಗೆ ಬರಬೇಕೆಂದರೆ ದಲಿತರ ಒಳಮಿಸಲಾತಿ ಅವಶ್ಯಕವಾಗಿದೆ. ನಿಜವಾದ ಅಸ್ಪೃಶ್ಯರಾದ ದಲಿತ ಸಮುದಾಯದವರು ಕಳೆದ 45 ರಿಂದ 50 ವರ್ಷ ಒಳ ಮೀಸಲಾತಿಗೆ ಹೋರಾಟ ನಡೆಸಿದರೂ ಕೂಡಾ ಸರ್ಕಾರಗಳು ನಮ್ಮ ಮನವಿಗೆ ಸ್ಪಂದಿಸುವ ಕಾರ್ಯ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ಆಯಾ ಮತಕ್ಷೇತ್ರದ ಶಾಸಕರ ಮನೆಗೆ ಮುತ್ತಿಗೆ ಹಾಕಿ ನಮ್ಮ ಹಕ್ಕಿಗಾಗಿ ಪ್ರತಿಭಟಿಸುತ್ತಿದ್ದೇವೆ” ಎಂದು ಹೇಳಿದರು.

ಹರೀಶ್ ನಾಟಿಕರ್ ಮಾತನಾಡಿ, “ನಾವು ಪ್ರತಿಭಟನೆ ಬಗ್ಗೆ 15 ದಿನಗಳ ಹಿಂದೆಯೇ ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳ ಮೂಲಕ ನಮ್ಮ ಹೋರಾಟದ ಬಗ್ಗೆ ಶಾಸಕರ ಗಮನಕ್ಕೆ ತಂದಿದ್ದೆವು.‌ ಆದರೆ ಶಾಸಕ ನಾಡಗೌಡರು ಹೋರಾಟಗಾರರನ್ನು ಒಂದು ದಿನವೂ ಕರೆಯಲಿಲ್ಲ. ನಮ್ಮ ಹಕ್ಕಿನ ಕುರಿತು ಸ್ಪಂದನೆ ನೀಡಲಿಲ್ಲ. ನಮ್ಮ ಹಕ್ಕಿಗಾಗಿ ಮೀಸಲಾತಿ ಮಡೆದುಕೊಳ್ಳಲು ನಾವು ಸಿದ್ಧರಿದ್ದೇವೆ. ಹೋರಾಟ ಮೊಟಕುಗೊಳಿಸುವ ಪ್ರಶ್ನೆಯೇ ಇಲ್ಲ ಕಾರಣ ಶಾಸಕ ಸಿ ಎಸ್ ನಾಡಗೌಡ ಅವರು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶದಲ್ಲಿ ಒಳಮೀಸಲಾತಿ ಬಗ್ಗೆ ಧ್ವನಿ ಎತ್ತುವ ಮೂಲಕ ಮುಖ್ಯಮಂತ್ರಿಗಳ ಗಮನ ಸೆಳೆದು ಒಳಮೀಸಲಾತಿಯ ಹಕ್ಕು ನಮಗೆ ದೊರೆಯುವಂತೆ ಮಾಡಬೇಕು. ಇಲ್ಲವಾದದೆ ನಿಮ್ಮ ವಿರುದ್ಧ ನಿರಂತರವಾಗಿ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪರಿಶಿಷ್ಟ ಜಾತಿ ಸಮುದಾಯದ ಪ್ರತಿನಿಧಿಗಳ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ

ಈ ವೇಳೆ ಶೇಖು ಆಲೂರ, ಸಿ ಜಿ ವಿಜಯಕರೆ, ನ್ಯಾಯವಾದಿ ಕೆ. ಬಿ ದೊಡಮನಿ, ಪ್ರಕಾಶ ಸರೂರ, ಪ್ರಶಾಂತ ಕಾಳೆ, ಆನಂದ ಗಂಗೂರ, ಆನಂದ ದೇವೂರ, ಸುರೇಶ ಮಾದರ, ತಪ್ಪಣ್ಣ ದೊಡಮನಿ, ಆನಂದ ಮದೂರು, ಬಾಲು ಹುಲ್ಲೂರ, ಪರುಶುರಾಮ ಬಸರಕೋಡ, ದೇವರಾಜ ಹಂಗರಗಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...