ವಿಜಯಪುರ | ಸರ್ಕಾರಿ ಪದವಿ ಕಾಲೇಜು ಮಂಜೂರಿಗೆ ದಲಿತ ವಿದ್ಯಾರ್ಥಿ ಪರಿಷತ್ತು ಆಗ್ರಹ

Date:

ಜಿಲ್ಲೆಯಲ್ಲಿ ಸರ್ಕಾರಿ ಬಿಎಡ್ ಪದವಿ ಕಾಲೇಜುಗಳಲ್ಲಿ ಪ್ರಸ್ತುತ ಖಾಸಗಿ ಪದವಿ ಶಿಕ್ಷಣ ಸಂಸ್ಥೆಗಳು ಮನಬಂದಂತೆ ಹಣ ವಸೂಲಿಗೆ ಇಳಿದಿದ್ದು, ಸರ್ಕಾರಿ ಪದವಿ ಕಾಲೇಜು ಮಂಜೂರು ಮಾಡಲು ಒತ್ತಾಯಿಸಿ ವಿಜಯಪುರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಮನವಿ ಸಲ್ಲಿಸಿದರು.

- Advertisement -

ಈ ವೇಳೆ ಪರಿಷತ್ ಮುಖಂಡರು ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಪ್ರತಿ ವರ್ಷ 20 ರಿಂದ 30 ಸಾವಿರ ವಿದ್ಯಾರ್ಥಿಗಳು ಪದವಿ ಮುಗಿಸಿ ತೇರ್ಗಡೆ ಹೊಂದುತ್ತಾರೆ. ಅದರಲ್ಲಿ ಅರ್ಧ ಭಾಗದಷ್ಟು ಜನ ಬಿಎಡ್ ದಾಖಲಾತಿಗೆ 2 ರಿಂದ 3 ಲಕ್ಷ ರೂಪಾಯಿ ವಸೂಲಿ ಮಾಡುತ್ತಿದ್ದು, ಇದರಿಂದ ಬಡ ಕುಟುಂಬ ಹಾಗೂ ಗ್ರಾಮೀಣ ಭಾಗದ ಮಕ್ಕಳು ತಮ್ಮ ಶಿಕ್ಷಣವನ್ನೇ ಕುಂಟಿತಗೊಳಿಸಿಕೊಂಡು ಕೂಲಿ ಮಾಡುವಂತಹ ಪರಿಸ್ಥಿತಿ ಎದುರಾಗಿದೆ. ವಿದ್ಯಾಭ್ಯಾಸ ಮಾಡಲೇಬೇಕು ಅನ್ನುವ ಅದೆಷ್ಟೋ ವಿದ್ಯಾರ್ಥಿಗಳು ಸಾಲಮಾಡಿ, ಮನೆಯಲ್ಲಿಯ ಒಡವೆ ಮಾರಿ ಓದುವ ವಾತಾವರಣ ಸೃಷ್ಟಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ತಾವು ಮನಸ್ಸು ಮಾಡಿ ಸರ್ಕಾರಿ ಬಿಎಡ್ ಕಾಲೇಜು ಮಂಜೂರು ಮಾಡಿದರೆ, ಹಣ ವಸೂಲಿ ಮಾಡುತ್ತಿರುವ ಕಾಲೇಜುಗಳ ಹಾವಳಿ ಕಡಿಮೆಯಾಗುತ್ತದೆ. ನಾನೂ ಶಿಕ್ಷಕನಾಗಿ ಸೇವೆ ಸಲ್ಲಿಸಬೇಕೆನ್ನುವ ಕನಸು ಹೊತ್ತಿರುವ‌ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಈ ವರದಿ ಓದಿದ್ದೀರಾ? ಬೆಳಗಾವಿ | ಸುಳ್ಳು ಹೆಸರು ದಾಖಲಿಸಿ, ಶಿಶುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾದ ತಾಯಿ

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಅಕ್ಷಯ ಅಜಮನಿ, ಮಾದೇಶ ಚಲವಾದಿ, ಕಾರ್ಯಕರ್ತ ಸಂದೇಶ್ ಕುಮುಟಗಿ, ಯಾಸೀನ್ ಇನಾಮಧಾರ, ಆಶೀಪ್, ಲೂಲ್ಲು ಮುಲ್ಲಾ, ಮುಂತಾದವರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...