ವಿಜಯಪುರ | ನೂತನ ವಸತಿ ನಿಲಯ ಮಂಜೂರು ಮಾಡುವಂತೆ ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

Date:

ವಿಜಯಪುರ ನಗರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ನೂತನ ವಸತಿ ನಿಲಯ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪುಂಡಲೀಕ ಮಾನವರ ಅವರಿಗೆ ದಲಿತ ವಿದ್ಯಾರ್ಥಿ ಪರಿಷತ್ ಮನವಿ ಮೂಲಕ ಆಗ್ರಹಿಸಿದೆ.

- Advertisement -

ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರಾದ ಅಕ್ಷಯ್ ಕುಮಾರ್ ಅಜಮನಿಯವರು ಮಾತನಾಡಿ, “ವಿಜಯಪುರ ಜಿಲ್ಲೆಯಲ್ಲಿರುವ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ರಾಜ್ಯದ ನಾನಾ ಭಾಗಗಳಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಈ ಬಾರಿ ಹೆಚ್ಚಿನ ವಿದ್ಯಾರ್ಥಿನಿಯರು ಕೋರ್ಸ್‌ಗಳಿಗೆ ಪ್ರವೇಶ ಪಡೆದುಕೊಂಡಿರುವುದರಿಂದ ವಿದ್ಯಾರ್ಥಿಗಳಿಗೆ ಕ್ಯಾಂಪಸ್‌ನಲ್ಲಿ ಈಗಿರುವ ವಸತಿ ನಿಲಯಗಳಲ್ಲಿ ಅವಕಾಶ ಸಿಗದೇ ಹೊರಗಡೆ ರೂಮ್ ಮಾಡಿಕೊಂಡು ಓದುವ ಸಂಕಷ್ಟ ಉಂಟಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾಲೇಜಿನ ಸಮಯಕ್ಕೆ ಸರಿಯಾಗಿ ಬಸ್‌ಗಳಿಲ್ಲದೆ ತರಗತಿಗಳನ್ನು ತಪ್ಪಿಸುವ ಪರಿಸ್ಥಿತಿ ಉಂಟಾಗಿದೆ. ಪ್ರತಿದಿನ ಕಾಲೇಜಿನಿಂದ ರೂಮಿಗೆ-ರೂಮಿನಿಂದ ಕಾಲೇಜಿಗೆ ಓಡಾಡುವುದರಿಂದ ವಿದ್ಯಾಭ್ಯಾಸದಲ್ಲಿ ಕುಂಠಿತವಾಗುತ್ತಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಮನವಿಯಲ್ಲಿ ತಿಳಿಸಿದೆ.

ಹೆಣ್ಣು ಮಕ್ಕಳ ರಕ್ಷಣೆ ಮತ್ತು ಹಿತದೃಷ್ಟಿಯಯಿಂದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಲ್ಲಿವರೆಗೆ ಒಂದು ವಸತಿ ನಿಲಯವು ಇಲ್ಲದೆ ಇರುವುದು ದುರದೃಷ್ಟದ ಸಂಗತಿ. ವಿಶ್ವವಿದ್ಯಾನಿಲಯದ ಕ್ಯಾಂಪಸ್ ಒಳಗಡೆ ವಸತಿನಿಲಯ ಸ್ಥಾಪಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾದೇಶ್, ಯುವರಾಜ್ ಓಲೇಕಾರ್ , ಯಾಸೀನ್ ಇನಾಮದಾರ್, ಸಂದೇಶ್ ಕುಮುಟಗಿ, ರವಿ ವಾಲಿಕಾರ, ಪ್ರವೀಣ ಬನಸೋಡೆ, ಮಾಂತೇಶ, ಯುವರಾಜ್ ಮುಂತಾದವರು ಭಾಗಿಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...