ವಿಜಯಪುರ | ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಬಸ್‌ ಸೇವೆ ಕಲ್ಪಿಸಲು ಆಗ್ರಹ

Date:

Advertisements

ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ತಾಳಿಕೋಟೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದೆ.

ಕಲಕೇರಿ ಗ್ರಾಮಕ್ಕೆ ಸುತ್ತ ಮುತ್ತಲಿನ ಎಲ್ಲ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆಂದು ಬಸವೇಶ್ವರ, ಆದರ್ಶ, ಅಂಜುಮನ್, ಎಸ್‌ಜೆಜೆಪಿಎಸ್ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ವಿದ್ಯಾಭ್ಯಾಸಕ್ಕೇದು ಬರುತ್ತಾರೆ. ಆದರೆ, ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರು ಪರದಾಡುವಂತಾಗಿದೆ.

ಈಗಾಗಲೇ ಹಲಗೂರು ಮತ್ತು ಹುಣಶ್ಯಾಳ ಗ್ರಾಮಗಳಿಂದ ಕಲ್ಕೇರಿಗೆ ಬರುವ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಚರ್ಚಿಸಿ ಹೆಚ್ಚುವರಿ ಬಸ್ ಒದಗಿಸಿ, ಅಲಗೂರ್ ಹುಣಸಿಹಾಳ ಮಾರ್ಗವಾಗಿ ಬೆಳಿಗ್ಗೆ 9:00ಗಂಟೆಗೆ ಮತ್ತು ಮಧ್ಯಾಹ್ನ 2:00ಗಂಟೆಗೆ ಕಲಕೇರಿ ಇಂದ ಹುಣಸಿಹಾಳ ಅಲಗುರ್ ಮಾರ್ಗವಾಗಿ ಬಸ್ ಸಂಚರಿಸುವ ಕುರಿತು ದಿ.10/08/2023ರಂದು ಮಾತ್ರ ಬಸ್ ವ್ಯವಸ್ಥೆಯಾಗಿತ್ತು.

Advertisements

ಆದರೆ, ಮಧ್ಯಾಹ್ನ ಬಸ್ ಬರದ ಕಾರಣ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆಗಳನ್ನು ಎದರಿಸುತ್ತಿದ್ದಾರೆ. ಹಾಗಾಗಿ ದಯವಿಟ್ಟ ನಾಳೆ ಅಂದರೆ 09/01/2024ರಿಂದಲೇ ಬೆಳಿಗ್ಗೆ ಮತ್ತು ಮಧ್ಯಾಹ್ನ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆಮಾಡಿಕೊಡಬೇಕು.

ಸಂಜೆ 05:15 ಘಂಟೆಗೆ ವಿಜಯಪುರದಿಂದ ಕಲಕೇರಿಗೆ ಬಂದು ಬೇಕಿನಾಳ್, ಬನ್ನಿಹಟ್ಟೆ, ಫಲಪುರ, ಅಫ್ರಿ ಮಾರ್ಗವಾಗಿ ಹೋಗುವ ಬಸ್ಸು ಇತ್ತೀಚೆಗೆ ರಾತ್ರಿ 7:30-06:00ಗಂಟೆವರೆಗೆ ಬರುತ್ತಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರು ಪರದಾಡುವಂತಾಗಿದೆ ಹಾಗಾಗಿ ದಯವಿಟ್ಟು ಸಮಯಕ್ಕೆ ಸರಿಯಾಗಿ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ದೇವರಾಹಿಪ್ಪರಗಿ ತಾಲೂಕು ಸಹ ಸಂಚಾಲಕ ಕಾಶೀನಾಥ ತಾಳಿಕೋಟಿ, ಪ್ರಮೋದ ಛಲವಾದಿ, ಅಂಬರೀಶ ದುರ್ಗಮುರ್ಗಿ, ಶಶಿಕಾಂತ ನಡುವಿನಮನಿ, ಆನಂದ ತೋಟದ ಮತ್ತು ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಸ್ಥಿತರಿದ್ದರು. ವ್ಯವಸ್ಥಾಪಕರ ಅನುಪಸ್ಥಿತಿಯಲ್ಲಿ ಸಹ ಸಿಬ್ಬಂದಿ ನಿಂಗನಗೌಡ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X