ವಿಜಯಪುರ | ಕೇಂದ್ರ-ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ದಸಂಸದಿಂದ ಪಂಜಿನ ಮೆರವಣಿಗೆ

Date:

ರಾಜ್ಯ ಮತ್ತು ಕೇಂದ್ರ ಸರಕಾರದ ವೈಫಲ್ಯವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಬೃಹತ್ ಪಂಜಿನ ಮರವಣಿಗೆಯನ್ನು ನಡೆಸಲಾಯಿತು.

- Advertisement -

ಡಾ. ಬಿ. ಆರ್. ಅಂಬೇಡ್ಕರ್  ಸರ್ಕಲ್‌ನಿಂದ ಗಾಂಧಿ ವೃತ್ತದ ಮಾರ್ಗವಾಗಿ ತೆರಳಿದ ದಸಂಸ ಮುಖಂಡರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್, “ಡಾ. ಬಿ ಆರ್ ಅಂಬೇಡ್ಕರ್ ಅವರ ಬಯಕೆಯಂತೆ ದುರ್ಬಲರನ್ನು ರಕ್ಷಿಸಲು ಅವರಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಜನರಿಗೆ ಮತ್ತು ಇತರ ಜನರ ನಡುವಿನ ಅಂತರವನ್ನು ಕಡಿಮೆ ಮಾಡಲು ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳಿ ಎಂದು ನಮ್ಮ ಸಂವಿಧಾನದ ಆಶಯದಂತೆ ಆಡಳಿತ ನಡೆಸುವ ಸರ್ಕಾರಗಳಿಗೆ ಕಿವಿ ಮಾತು ಹೇಳಿದ್ದರು. ಆದರೆ, ಸರ್ಕಾರಗಳು ಯಾವುದನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ” ಎಂದು ದೂರಿದರು.

ದಸಂಸ 1 1

“ವಿಜಯಪುರ ಜಿಲ್ಲೆಯಲ್ಲೂ ದಲಿತರ ಮೇಲಲೆ ಅನೇಕ ದೌರ್ಜನ್ಯ ಮತ್ತು ಅನ್ಯಾಯಗಳು ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ಪದೇ ಪದೇ ತರಲಾಗಿದ್ದರೂ, ಯಾವುದೇ ಸೂಕ್ತ ಕ್ರಮಗಳಾಗಿಲ್ಲ” ಎಂದರು.

ಜಿಲ್ಲಾ ಸಂಚಾಲಕ ಅಶೋಕ್ ಛಲವಾದಿ ಮಾತನಾಡಿ, ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ ರಿ.ಸ.ನಂ.56 ಮತ್ತು 75,77ರಲ್ಲಿ ಹೆಚ್ಚುವರಿ ಜಮೀನನ್ನು 19 ದಲಿತ ಕುಟುಂಗಳಿಗೆ 74 ಏಕರೆ 17 ಗುಂಟೆ ಜಮೀನನ್ನು ಭೂನ್ಯಾಯ ಮಂಡಳಿ 1981ರಲ್ಲಿ ನೀಡಿತ್ತು. ಕಳೆದ 43 ವರ್ಷಗಳಿಂದ ಪರಿಶಿಷ್ಟ ಜಾತಿಯ ಜನರು ಈ ಜಮೀನಿನಲ್ಲಿ ಸಾಗುವಳಿ ಮಾಡಿಕೊಂಡು ಬದುಕನ್ನು ಕಟ್ಟಿಕೊಂಡಿದ್ದಾರೆ. ಆದರೆ ಆ 19 ಕುಟುಂಬಗಳಿಗೆ ಪರ್ಯಾಯ ಭೂಮಿ ವ್ಯವಸ್ಥೆ ಬಗ್ಗೆ ಮತ್ತು ಕುಟುಂಬಗಳು ಬೀದಿಗೆ ಬೀಳುವುದನ್ನು ತಪ್ಪಿಸಲು ಸರ್ಕಾರ ತೀವ್ರಗತಿಯಲ್ಲಿ ನ್ಯಾಯ ಒದಗಿಸುವಲ್ಲಿ ಮುರ್ತುವರ್ಜಿ ವಹಿಸಬೇಕು” ಎಂದರು.

ಸಂಚಾಲಕರಾದ ಪ್ರಕಾಶ್ ಗುಡಿಮನಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಬಳಸುತ್ತಿದೆ. ಪರಿಶಿಷ್ಟರಿಗೆ ಮೀಸಲಿಟ್ಟ ಎಸ್‌ಸಿಪಿ-ಟಿಎಸ್‌ಪಿ ಹಣದಲ್ಲಿ 2023-24 ಸಾಲಿನಲ್ಲಿ 11,000 ಕೋಟಿ, 2024-25ನೇ ಸಾಲಿನಲ್ಲಿ 14,000 ಕೋಟಿ ಬಳಸಿದೆ. ಗ್ಯಾರಂಟಿ ಯೋಜನೆಗಳನ್ನು ನಾವೇ ಮಾಡಿದ್ದು ಎಂದು ಹೇಳಿಕೊಳುತ್ತಿರುವ ಸರ್ಕಾರ ಪರಿಶಿಷ್ಟರಿಗೆ ದ್ರೋಹ ಬಗೆಯುತ್ತಿದೆ. ದಲಿತರ ಬಗ್ಗೆ ಸರ್ಕಾರಕ್ಕೆ ನಿಜವಾದ ಕಾಳಜಿ ಇದ್ದರೆ ಗ್ಯಾರಂಟಿ ಯೋಜನೆಗಳಿಗೆ ಬಳಸದೇ, ಈ ಹಣವನ್ನು ಎಸ್.ಸಿ / ಎಸ್.ಟಿ ಸಮುದಾಯಗಳ ಅಭಿವೃದ್ಧಿಗೆ ಬಳಸಬೇಕು” ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ವಿಜಯಪುರ | ಅರ್ಧ ಶತಮಾನದ ಉರ್ದು ಶಾಲೆಗೆ ಬೇಕಿದೆ ಮೂಲ ಸೌಕರ್ಯ

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರುಗಳಾದ ರಮೇಶ ಆಸಂಗಿ, ವಿನಾಯಕ ಗುಣಸಾಗರ, ರೇಣುಕಾ ಮಾದರ, ಪರುಶುರಾಮ ಡಿಂಡಿವಾರ ಶರಣು ಶಿಂಧೆ, ಲಕ್ಕಪ್ಪ ಬಡಿಗೇರ್, ಸುರೇಶ ನಡಗಡ್ಡೆ, ಅನಿಲ ಕೊಡತಿ, ಬಿ. ಎಸ್. ತಳವಾರ, ರವಿ ಮ್ಯಾಗೇರಿ, ಶಿವಾನಂದ ಮೂರುಮಾನ, ಮಂಜುನಾಥ ಎಂಟಮಾನ, ರಾಜಕುಮಾರ್ ಸಿಂಧನೂರ, ರವಿಚಂದ್ರ ಛಲವಾದಿ, ಲಕ್ಷ್ಮಣ್ ಹಾಲಿಹಾಳ, ಚಂದ್ರಶೇಖರ ಕೆಳಗಿನಮನಿ, ಸಂತೋಷ ಠಕ್ಕೆ, ಸಿದ್ದು ಬಾರಿಗಿಡದ, ಶುಭದ್ರ ಮೇಲಿನಮನಿ, ಚಂದ್ರಕಲಾ ಮಸಳಿಕೇರಿ, ಮುತ್ತು ಬಿದರಿ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...