ದಲಿತ ದೌರ್ಜನ್ಯ ತಡೆಗೆ ವಿಶೇಷ ಪೊಲೀಸ್ ಠಾಣೆ ತೆರೆಯುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ ವಾದ) ವಿಜಯಪುರ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಮುಖಾಂತರ ರಾಜ್ಯದ ಸಮಾಜ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಪ್ರಧಾನ ಸಂಚಾಲಕ ಸಂಜು ವೈ ಕಂಬಾಗಿ ಮಾತನಾಡಿ, “ಇತ್ತೀಚೆಗೆ ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯಗಳು ಪ್ರಕರಣಗಳು ದಿನಂಪ್ರತಿ ಹೆಚ್ಚಾಗುತ್ತಿದ್ದು, ಇದರಿಂದ ದಲಿತರಿಗೆ ನ್ಯಾಯ ಸಿಗುತ್ತಿಲ್ಲ. ಕೇವಲ ಶೋಷಣೆಯಲ್ಲಿಯೇ ಬದುಕು ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ದಲಿತರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ತ್ವರಿತ ನ್ಯಾಯಕ್ಕಾಗಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯಬೇಕು” ಎಂದು ಆಗ್ರಹಿಸಿದರು.
“1989ರ ಪ್ರಕಾರ ದಲಿತರ ಮೇಲಾದ ದೌರ್ಜನ್ಯದ ಕುರಿತು ದೌರ್ಜನ್ಯ ಪ್ರಕರಣ ದಾಖಲಿಸಿದರೆ ಅದರ ವಿರುದ್ಧವಾಗಿ ಕೌಂಟರ್ ಕೇಸ್‌ಗಳು ದಾಖಲಾಗುತ್ತಿವೆ. ಆದ್ದರಿಂದ ಇಂತಹ ಕೌಂಟರ್ ಕೇಸ್‌ಗಳ ವಿರುದ್ಧ ರಾಜ್ಯದಲ್ಲಿ ತ್ವರಿತ ನ್ಯಾಯಕ್ಕಾಗಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯುವ ಮೂಲಕ ದಲಿತರಿಗೆ ನ್ಯಾಯ ದೊರಕಿಸಿಕೊಡಬೇಕು. ಈ ಕುರಿತು ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಮಾಡಬೇಕು” ಎಂದು ಆಗ್ರಸಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿವಿಧ ಬಗೆಯ ಕೌಶಲ್ಯ ಅಗತ್ಯ: ಪ್ರೊ.ಓಂಕಾರ ಕಾಕಡೆ
ಮಹಿಳಾ ಒಕ್ಕೂಟದ ಸಂಚಾಲಕಿ ಸವಿತಾ ವಗ್ಗರ, ಜಿಲ್ಲಾ ಸಂಘಟನಾ ಸಂಚಾಲಕರಾದ ಚೇತನ ತೊರವಿ, ಯಲ್ಲಪ್ಪ ಕಾಂಬಳೆ, ಭೀಮಣ್ಣ ಹಂಚಿನಾಳ, ಭಾಸ್ಕರ ಬೋರಗಿ, ಸುಖದೇವ ಕಟ್ಟಿಮನಿ ಸೇರಿದಂತೆ ಇತರರು ಇದ್ದರು.